Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:5 - ಕನ್ನಡ ಸತ್ಯವೇದವು J.V. (BSI)

5 ಯೆಹೋವನು ಇಂತೆನ್ನುತ್ತಾನೆ, ಭೀತಿಯಿಂದಾಗುವ ಶಬ್ದವು ಕೇಳಿಸಿದೆ; ಭಯವೇ ಹೊರತು ಸಮಾಧಾನವಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ಯೆಹೋವನು ಇಂತೆನ್ನುತ್ತಾನೆ, ಭೀತಿಯಿಂದಾಗುವ ಶಬ್ದವು ಕೇಳಿಸಿದೆ; ಭಯವೇ ಹೊರತು ಸಮಾಧಾನವಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಸರ್ವೇಶ್ವರ ಹೀಗೆನ್ನುತ್ತಾರೆ: ಕೇಳಿಸಿದೆ ಭಯದಿಂದ ಕೂಡಿದ ಶಬ್ದ ಹೌದು, ಅದು ಕೂಡಿದೆ ಭೀತಿಯಿಂದ, ಶಾಂತಿಯಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಜನರು ಭಯದಿಂದ ಗೋಳಿಡುವದನ್ನು ನಾವು ಕೇಳುತ್ತಿದ್ದೇವೆ. ಜನರು ಅಂಜಿಕೊಂಡಿದ್ದಾರೆ; ನೆಮ್ಮದಿಯಿಲ್ಲದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನಾವು ನಡುಗುವಿಕೆಯ ಮತ್ತು ಭಯದ ಧ್ವನಿಯನ್ನು ಕೇಳಿದ್ದೇವೆಯೇ ಹೊರತು, ಸಮಾಧಾನದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:5
22 ತಿಳಿವುಗಳ ಹೋಲಿಕೆ  

ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು, ನಿಮ್ಮ ಗಾಯನಗಳನ್ನೆಲ್ಲಾ ಶೋಕಗೀತಕ್ಕೆ ತಿರುಗಿಸುವೆನು; ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು ತಲೆಬೋಳಿಸಿಕೊಳ್ಳುವಂತೆ ಮಾಡುವೆನು; ನಿನ್ನ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವದು, ಅದು ಆದ ಮೇಲೂ ವ್ಯಾಕುಲವು ಇದ್ದೇ ಇರುವದು.


ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರ ಮೇಲೆ ಗುರುಗುಟ್ಟುವರು; ದೇಶದಲ್ಲಿಯೋ, ಆಹಾ, ಅಂಧಕಾರವೂ ವ್ಯಾಕುಲವೂ ತುಂಬಿರುವವು, ಮೋಡ ಕವಿದು ಬೆಳಕು ಕತ್ತಲಾಗುವದು.


ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನು ಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತುಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.


ಆಹಾ, ಕುರುಬರ ಕೂಗಾಟ! ಮಂದೆಯ ಹಿರಿಯ ಮಣಿಗಳ ಅರಚಾಟ! ಯೆಹೋವನು ಆ ಹುಲ್ಗಾವಲನ್ನು ಹಾಳುಮಾಡುತ್ತಿದ್ದಾನಲ್ಲಾ.


ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, [ಶತ್ರುಗಳು] ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ.


ಆಹಾ, ನನ್ನ ಪ್ರಜೆಯೆಂಬಾಕೆಯು - ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. [ಅದಕ್ಕೆ ಯೆಹೋವನು - ] ಇವರು ತಮ್ಮ ವಿಗ್ರಹಗಳಿಂದಲೂ ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ [ಅನ್ನುತ್ತಾನೆ].


ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮೂಲುಗುತ್ತಲೇ ಇದ್ದೇವೆ; ನಾವು [ಯೆಹೋವನ] ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ಸಿಕ್ಕದು, [ಆತನ] ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರ.


ವೈರಿಯ ಕುದುರೆಗಳ ಬುಸುಗಾಟವು ದಾನಿನಿಂದ ಕೇಳಬರುತ್ತದೆ; ತುರಂಗಗಳ ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ; ಶತ್ರುಗಳು ಬಂದರು, ಸೀಮೆಯನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು.


ಕೊಳ್ಳೆಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಕಂಡುಬಂದಿದ್ದಾರೆ; ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಂಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ.


ಯೆಹೋವನು ಇಸ್ರಾಯೇಲಿನ ಮತ್ತು ಯೆಹೂದದ ವಿಷಯವಾಗಿ ಈ ಮಾತುಗಳನ್ನು ಹೇಳಿದನು -


ಆಹಾ, ಬಡಗಲಿಂದ ಒಂದು ಜನಾಂಗವು ಬರುತ್ತದೆ, ಮಹಾ ಜನವು ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಹೊರಡುತ್ತದೆ.


ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ.


ಇಗೋ, ತೀಕ್ಷ್ಣವೂ ತೀವ್ರವೂ ಆದ ಕಸ್ದೀಯ ಜನಾಂಗವನ್ನು ಎಬ್ಬಿಸುತ್ತಿದ್ದೇನೆ; ಆ ಜನರು ತಮ್ಮದಲ್ಲದ ಸಂಸ್ಥಾನಗಳನ್ನು ವಶಮಾಡಿಕೊಳ್ಳುವ ಹಾಗೆ ಲೋಕದಲ್ಲೆಲ್ಲಾ ಸಂಚರಿಸುವರು.


ಅರಸರನ್ನು ಧಿಕ್ಕರಿಸುವರು; ಸರದಾರರು ಅವರ ಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ತಾತ್ಸಾರಮಾಡಿ ದೂಳದಿಬ್ಬಹಾಕಿ ಆಕ್ರವಿುಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು