ಯೆರೆಮೀಯ 30:6 - ಕನ್ನಡ ಸತ್ಯವೇದವು J.V. (BSI)6 ವಿಚಾರಿಸಿ ನೋಡಿರಿ, ಗಂಡಸು ಪ್ರಸವವೇದನೆ ಪಡುವದುಂಟೇ? ಪ್ರತಿಯೊಬ್ಬನು ಹೆರುವವಳಂತೆ ಸೊಂಟವನ್ನು ಹಿಸಕಿಕೊಳ್ಳುವದು, ಎಲ್ಲಾ ಮುಖಗಳು ಬಿಳಿಚಿಕೊಂಡಿರುವದು, ಇವು ಏಕೆ ನನ್ನ ಕಣ್ಣಿಗೆ ಬೀಳುತ್ತವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ವಿಚಾರಿಸಿ ನೋಡಿರಿ, ಗಂಡಸು ಪ್ರಸವವೇದನೆ ಪಡುವುದುಂಟೆ? ಪ್ರತಿಯೊಬ್ಬನು ಹೆರುವವಳಂತೆ ಸೊಂಟವನ್ನು ಹಿಸಕಿಕೊಳ್ಳುವುದು, ಎಲ್ಲಾ ಮುಖಗಳು ಬಿಳಿಚಿಕೊಂಡಿರುವುದು, ಇವು ಏಕೆ ನನ್ನ ಕಣ್ಣಿಗೆ ಬೀಳುತ್ತವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಗಂಡಸು ಪ್ರಸವವೇದನೆ ಪಡುವುದುಂಟೆ, ಹೇಳು? ಆದರೂ ಪ್ರತಿಯೊಬ್ಬನು ಹೆರುವ ಮಹಿಳೆಯಂತೆ ಸೊಂಟ ಹಿಸಿಕಿಕೊಳ್ಳುವುದು ನನ್ನ ಕಣ್ಣಿಗೆ ಬೀಳುತ್ತಿದೆ ಏಕೆ? ಅವರ ಮುಖಗಳು ಬಿಳಿಚಿಕೊಂಡಿವೆ ಏಕೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಈ ಪ್ರಶ್ನೆಯನ್ನು ಕೇಳಿ ಪರಿಶೀಲಿಸಿರಿ. ಪುರುಷನು ಮಗುವಿಗೆ ಜನ್ಮಕೊಡಬಲ್ಲನೆ? ಖಂಡಿತವಾಗಿಯೂ ಇಲ್ಲ. ಹಾಗಾದರೆ ಪ್ರತಿಯೊಬ್ಬ ಬಲಿಷ್ಠನೂ ಪ್ರಸವವೇದನೆಪಡುತ್ತಿರುವ ಸ್ತ್ರೀಯಂತೆ ತನ್ನ ಹೊಟ್ಟೆಯನ್ನು ಏಕೆ ಹಿಡಿದುಕೊಂಡಿದ್ದಾನೆ? ಪ್ರತಿಯೊಬ್ಬನ ಮುಖವು ಸತ್ತವನ ಮುಖದಂತೆ ಏಕೆ ಬಿಳಿಚಿದೆ? ಏಕೆಂದರೆ ಜನರು ಬಹಳ ಭಯಪಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಈಗ ವಿಚಾರಿಸಿ ನೋಡಿರಿ. ಪುರುಷನು ಮಗುವನ್ನು ಹೆರಬಲ್ಲನೇ. ನಾನು ಏಕೆ ಪುರುಷರೆಲ್ಲರೂ ಪ್ರಸವವೇದನೆ ಪಡುವ ಸ್ತ್ರೀಯ ಹಾಗೆ ನಡುವಿನ ಮೇಲಕ್ಕೆ ಕೈ ಇಟ್ಟವರ ಹಾಗೆ ನೋಡುತ್ತೇನೆ; ಏಕೆ ಮುಖಗಳೆಲ್ಲಾ ಕಳೆಗುಂದಿದವು? ಅಧ್ಯಾಯವನ್ನು ನೋಡಿ |