Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:9 - ಕನ್ನಡ ಸತ್ಯವೇದವು J.V. (BSI)

9 ಅವರು ತಮ್ಮ ದೇವರಾದ ಯೆಹೋವನೆಂಬ ನನ್ನನ್ನೂ ನಾನು ಅವರಿಗಾಗಿ ಏರ್ಪಡಿಸುವ ರಾಜನಾದ ದಾವೀದನನ್ನೂ ಸೇವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ತಮ್ಮ ದೇವರಾದ ಯೆಹೋವನೆಂಬ ನನ್ನನ್ನೂ, ನಾನು ಅವರಿಗಾಗಿ ಏರ್ಪಡಿಸುವ ರಾಜನಾದ ದಾವೀದನನ್ನೂ ಸೇವಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರು ತಮ್ಮ ದೇವರಾದ ಸರ್ವೇಶ್ವರನೆಂಬ ನನಗೆ ಮತ್ತು ಅವರಿಗಾಗಿ ನಾನು ಏರ್ಪಡಿಸಲಿರುವ ರಾಜ ದಾವೀದನಿಗೆ ಸೇವೆಸಲ್ಲಿಸುವರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇಸ್ರೇಲರು ಮತ್ತು ಯೆಹೂದ್ಯರು ಪರದೇಶಿಯರ ಸೇವೆಮಾಡುವುದಿಲ್ಲ. ಅವರು ತಮ್ಮ ದೇವರಾದ ಯೆಹೋವನ ಸೇವೆಯನ್ನೇ ಮಾಡುವರು, ಅವರು ತಮ್ಮ ರಾಜನಾದ ದಾವೀದನ ಸೇವೆಮಾಡುವರು, ನಾನು ಆ ರಾಜನನ್ನು ಕಳುಹಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಅವರು ತಮ್ಮ ದೇವರಾದ ಯೆಹೋವ ದೇವರಿಗೂ, ನಾನು ಅವರಿಗೋಸ್ಕರ ಎಬ್ಬಿಸುವ ಅವರ ಅರಸನಾದ ದಾವೀದನಿಗೂ ಸೇವೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:9
14 ತಿಳಿವುಗಳ ಹೋಲಿಕೆ  

ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.


ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬದರ ವಿಷಯದಲ್ಲಿ ದೇವರು ಹೇಳಿರುವದೇನಂದರೆ - ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ, ಅವು ನಂಬಿಕೆಯಾದವುಗಳೇ ಎಂಬದು.


ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ.


ಅವನು ಪ್ರವಾದಿಯಾಗಿದ್ದು - ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನೆಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿ


ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಿಕೆಯನ್ನು ಚಿಗುರಿಸುವೆನು; ಅವನು ರಾಜನಾಗಿ ಆಳುತ್ತಾ ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ ದೇಶದಲ್ಲಿ ನೀತಿನ್ಯಾಯಗಳನ್ನು ನಿರ್ವಹಿಸುವನು.


ಯೆಹೂದ್ಯರ ಅರಸನಾಗಿ ಹುಟ್ಟಿದವನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಮೂಡಣದೇಶದಲ್ಲಿ ಕಂಡು ಆತನಿಗೆ ಅಡ್ಡಬೀಳುವದಕ್ಕೆ ಬಂದೆವು ಅಂದರು.


ಕರ್ತನೇ, ನೀನು ನಿನ್ನ ಸತ್ಯತೆಯಲ್ಲಿ ಆಣೆಯಿಟ್ಟು ದಾವೀದನಿಗೆ ವಾಗ್ದಾನಮಾಡಿ ನಡಿಸುತ್ತಿದ್ದ ಮುಂಚಿನ ಕೃಪಾಕಾರ್ಯಗಳು ಎಲ್ಲಿ?


ಇವರಿಗೆ ಗತಿಯಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು; ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು; ನನ್ನನ್ನು ಸಮೀಪಿಸುವದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.


ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಿಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿನ್ಯಾಯಗಳನ್ನು ನಿರ್ವಹಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು