Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:10 - ಕನ್ನಡ ಸತ್ಯವೇದವು J.V. (BSI)

10 ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ, ದೂರದ್ವೀಪಗಳಲ್ಲಿ ಸಾರಿರಿ! ಇಸ್ರಾಯೇಲ್ಯರನ್ನು ಚದರಿಸಿದಾತನು ಕುರುಬನು ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು ಎಂದು ಪ್ರಕಟಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ, ದೂರ ದ್ವೀಪಗಳಲ್ಲಿ ಸಾರಿರಿ! ಇಸ್ರಾಯೇಲರನ್ನು ಚದರಿಸಿದಾತನು, ‘ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು’ ಎಂದು ಪ್ರಕಟಿಸಿರಿ. ಯೆಹೋವನು ಯಾಕೋಬ್ಯರನ್ನು ವಿಮೋಚಿಸಿದ್ದಾನಲ್ಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ರಾಷ್ಟ್ರಗಳೇ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ: ದೂರದ ದ್ವೀಪಗಳಲ್ಲೂ ಅದನ್ನು ಸಾರಿರಿ: ಇಸ್ರಯೇಲರನ್ನು ಚದುರಿಸಿದಾತ ಕುರಿಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನೆಂದು ಪ್ರಕಟಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಜನಾಂಗಗಳೇ, ಯೆಹೋವನ ಈ ಸಂದೇಶವನ್ನು ಕೇಳಿರಿ. ಈ ಸಂದೇಶವನ್ನು ಸಮುದ್ರದಡದ ದೂರದೂರದ ಪ್ರದೇಶಗಳಲ್ಲಿ ತಿಳಿಸಿರಿ. ‘ಇಸ್ರೇಲರನ್ನು ಚದರಿಸಿದಾತನು ಅವರನ್ನು ಮತ್ತೆ ಒಟ್ಟುಗೂಡಿಸುವನು. ಆತನು ತನ್ನ ಹಿಂಡನ್ನು ಕುರುಬನಂತೆ ನೋಡಿಕೊಳ್ಳುವನು’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಜನಾಂಗಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ: ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ಸಾರಿರಿ! ‘ಇಸ್ರಾಯೇಲನ್ನು ಚದರಿಸಿದಾತನೇ ಅವರನ್ನು ಕೂಡಿಸಿ, ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವರನ್ನು ಕಾಯುವನು’ ಎಂದು ಪ್ರಕಟಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:10
43 ತಿಳಿವುಗಳ ಹೋಲಿಕೆ  

ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗೆತ್ತಿಕೊಳ್ಳುವನು. ಹಾಲುಕುಡಿಸುವ ಕುರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.


ಮಂದೆಯ ಕುರುಬನು ಸುತ್ತುಮುತ್ತಲು ಚದರಿಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚೆಲ್ಲಾಪಿಲ್ಲಿಯಾದ ಎಲ್ಲಾ ಸ್ಥಳಗಳಿಂದ ಅವುಗಳನ್ನು ಬಿಡಿಸಿ


ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪ ನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.


ನಿಮ್ಮಲ್ಲಿ ಯಾರಾದರೂ ಭೂಲೋಕದ ಕೊನೆಯವರೆಗೂ ಒಯ್ಯಲ್ಪಟ್ಟರೂ ಅಲ್ಲಿಂದಲೂ ನಿಮ್ಮ ದೇವರಾದ ಯೆಹೋವನು ಅವರನ್ನೂ ಕರತಂದು


ಯೇಸು ಆ ಜನಕ್ಕೋಸ್ಕರ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೆ ಸಹ ಸಾಯುವದಕ್ಕಿದ್ದನು.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ; ನಾನು ಅವುಗಳನ್ನು ಬಲ್ಲೆನು; ಅವು ನನ್ನ ಹಿಂದೆ ಬರುತ್ತವೆ.


ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ಉದ್ಧರಿಸುವೆನು, ಚದರಿಸಲ್ಪಟ್ಟವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರಕೀರ್ತಿಗಳನ್ನು ಉಂಟುಮಾಡುವೆನು.


ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.


ಆ ದಿನದಲ್ಲಿ ಅವರ ದೇವರಾದ ಯೆಹೋವನು ಅವರನ್ನು ತನ್ನ ಹಿಂಡಾಗಿರುವ ಜನರೆಂದು ರಕ್ಷಿಸುವನು; ಅವರು ಕಿರೀಟದಲ್ಲಿನ ರತ್ನಗಳಂತೆ ತಮ್ಮ ದೇಶದಲ್ಲಿ ಥಳಥಳಿಸುವರು.


ಯೆಹೋವನು ಅವರಿಗೆ ಭಯಂಕರವಾಗುವನು; ಲೋಕದ ದೇವರುಗಳನ್ನೆಲ್ಲಾ ಕ್ಷಯಿಸಿಬಿಡುವನು; ಸಮಸ್ತ ಜನರು, ಅಂದರೆ ಸಮುದ್ರ ಪ್ರಾಂತದ ನಿವಾಸಿಗಳಾದ ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


ಆತನು ಯೆಹೋವನ ಬಲವನ್ನೂ ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು; ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವದು; ಆತನು ಭೂವಿುಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ಕುಂಟುಜನಾಂಗವನ್ನು ಒಟ್ಟುಗೊಡಿಸುವೆನು, ನಾನು ಬಾಧಿಸಿ ತಳ್ಳಿದ ಪ್ರಜೆಯನ್ನು ಸೇರಿಸುವೆನು;


ಯಾಕೋಬೇ, ನಿನ್ನವರನ್ನೆಲ್ಲಾ ಕೂಡಿಸೇ ಕೂಡಿಸುವೆನು; ಇಸ್ರಾಯೇಲಿನ ಜನಶೇಷವನ್ನು ಸೇರಿಸೇ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗಿಡುವೆನು, ಕಾವಲ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಹಾಕುವೆನು; ಜನರು ಗಿಜಿಗುಟ್ಟುವರು.


ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು; ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ


ಆದಕಾರಣ ನೀನು ಹೀಗೆ ಸಾರು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಅವರನ್ನು ದೂರವಾಗಿ ತೊಲಗಿಸಿ ಜನಾಂಗಗಳಲ್ಲಿ ಅನ್ಯದೇಶಗಳೊಳಗೆ ಚದರಿಸಿದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಕೊಂಚ ಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.


ಹೀಗಿರಲು ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು, ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.


ಮುತ್ತಿಗೆಯ ದಿನಗಳು ತೀರಿದಕೂಡಲೆ ಕೂದಲಿನ ಒಂದು ಭಾಗವನ್ನು ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರು (ಹಾಗೆಯೇ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು).


ಇಸ್ರಾಯೇಲನ್ನು ಪುನಃ ಅದರ ಹುಲ್ಗಾವಲಿಗೆ ಸೇರಿಸುವೆನು; ಅದು ಕರ್ಮೆಲಿನಲ್ಲಿಯೂ ಬಾಷಾನಿನಲ್ಲಿಯೂ ಮೇಯುವದು; ಎಫ್ರಾಯೀವಿುನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತೃಪ್ತಿಗೊಳ್ಳುವದು.


ಇಸ್ರಾಯೇಲು ಚದರಿಹೋದ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ಅಮ್ಮೋನ್ಯರು, ತೂರಿನ ಎಲ್ಲಾ ಅರಸರು, ಚೀದೋನಿನ ಎಲ್ಲಾ ಅರಸರು,


ಯೆಹೋವನು ನಿನ್ನನ್ನು ವೈಭವಪಡಿಸಿರುವದನ್ನು ಕೇಳಿ ತಾರ್ಷೀಷಿನ ಹಡಗುಗಳು ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ವಿಧಿಯೂ ಇಸ್ರಾಯೇಲಿನ ಸದಮಲಸ್ವಾವಿುಯ ಸನ್ನಿಧಿಯೂ ಆದ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವದರಲ್ಲಿ ಮುಂದಾಗುತ್ತಿವೆ.


ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾಕೃಪೆಯಿಂದ ಸೇರಿಸಿಕೊಳ್ಳುವೆನು.


ಸಮುದ್ರಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನಗೀತವನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.


ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ ಜಜ್ಜಿಹೋಗದೆಯೂ [ತನ್ನ ಕಾರ್ಯದಲ್ಲಿ ನಿರತನಾಗಿರುವನು]; ದ್ವೀಪದ್ವೀಪಾಂತರಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.


ದ್ವೀಪನಿವಾಸಿಗಳೇ, ನನ್ನ ಕಡೆಗೆ ತಿರುಗಿ ಮೌನದಿಂದಿರಿ; ಜನಾಂಗಗಳು [ಎಷ್ಟಾದರೂ] ತಮ್ಮನ್ನು ಬಲಪಡಿಸಿಕೊಳ್ಳಲಿ; ಸಮೀಪಕ್ಕೆ ಬಂದು ಮಾತಾಡಲಿ; ನ್ಯಾಯಸ್ಥಾನಕ್ಕೆ ಒಟ್ಟಿಗೆ ಹೋಗುವ.


ಇಸ್ರಾಯೇಲ್ಯರೇ, ತುಂಬಿತುಳುಕುವ [ಯೂಫ್ರೇಟೀಸ್] ನದಿಯಿಂದ ಐಗುಪ್ತ ದೇಶದ ನದಿಯವರೆಗೆ ಯೆಹೋವನು ತೆನೆಗಳನ್ನು ಒಕ್ಕುವ ದಿನವು ಬರುತ್ತದೆ; ಆಗ ನಿನ್ನನ್ನು ಒಬ್ಬೊಬ್ಬರನ್ನಾಗಿ ಆರಿಸುವನು.


ಇವರು ಉಚ್ಚಧ್ವನಿಗೈಯುವರು; ಯೆಹೋವನ ಮಹಿಮೆಯನ್ನು ತಿಳಿದುಕೊಂಡವರಾಗಿ ಸಮುದ್ರದ ಕಡೆಯಿಂದ ಆರ್ಭಟಿಸುವರು -


ತಾರ್ಷೀಷ್‍ಪ್ರಾಂತದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.


ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು;


ದೇಶಭಾಷಾ ಕುಲಜನಾಂಗಗಳ ಪ್ರಕಾರ [ಇವರೇ ಯೆಫೆತನ ವಂಶದವರು].


ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವದು, ನಿಮ್ಮ ಪಟ್ಟಣಗಳು ನಾಶವಾಗುವವು.


ಯೆಹೋವನು ನನಗೆ ಕುರುಬನು; ಕೊರತೆಪಡೆನು.


ನಿನ್ನ ಹಿಂಡುಗಳ ಸ್ಥಿತಿಯನ್ನು ಚೆನ್ನಾಗಿ ತಿಳಿದುಕೊಂಡಿರು; ನಿನ್ನ ಮಂದೆಗಳ ಮೇಲೆ ಮನಸ್ಸಿಡು.


ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ;


ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆಯಿಂದ ಹಾರಿಹೋಗಿರಿ; ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ, ಭೂವಿುಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಯೆಹೋವನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ಹೇಳಿರಿ.


ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನವಿವೇಕಗಳಿಂದ ಪೋಷಿಸುವರು.


ನಾನು ಅವುಗಳ ಮೇಲೆ ಕುರುಬರನ್ನು ನೇವಿುಸುವೆನು, ಅವರು ಅವುಗಳನ್ನು ಮೇಯಿಸುವರು; ಅವು ಇನ್ನು ಭಯಪಡವು, ಬೆದರವು, ಅವುಗಳಲ್ಲಿ ಒಂದೂ ಕಡಿಮೆಯಾಗದು; ಇದು ಯೆಹೋವನ ನುಡಿ.


ಆಮೇಲೆ ಅವನು ಕರಾವಳಿಯ ಕಡೆಗೆ ಕಣ್ಣಿಟ್ಟು ಅಲ್ಲಿ ಬಹು ದೇಶಗಳನ್ನು ಆಕ್ರವಿುಸುವನು; ಆದರೆ ಅವನು ಮಾಡುವ ಅವಮಾನವನ್ನು ಒಬ್ಬ ಸರದಾರನು ನಿಲ್ಲಿಸಿಬಿಡುವದಲ್ಲದೆ ಅದು ಅವನಿಗೇ ತಗಲುವಂತೆ ಮಾಡುವನು.


ಎಲೈ, ಎಲೈ, ಉತ್ತರದೇಶದಿಂದ ಓಡಿಬನ್ನಿರಿ; ಇದು ಯೆಹೋವನ ನುಡಿ; ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದರಿಸಿದ್ದೇನಲ್ಲಾ; ಇದು ಯೆಹೋವನ ನುಡಿ.


ಯೆಹೋವನು ಯೆರೂಸಲೇಮನ್ನು ಕಟ್ಟಿಸುತ್ತಿದ್ದಾನೆ; ಚದರಿಹೋಗಿದ್ದ ಇಸ್ರಾಯೇಲ್ಯರನ್ನು ಕೂಡಿಸುತ್ತಿದ್ದಾನೆ.


ನಾನು ಅವರನ್ನು ಸಿಳ್ಳುಹಾಕಿ ಕರೆದು ಕೂಡಿಸುವೆನು; ಅವರನ್ನು ವಿಮೋಚಿಸಿದ್ದೇನಲ್ಲಾ; ಅವರು ಹಿಂದೆ ವೃದ್ಧಿಯಾದಂತೆ ಮುಂದೆಯೂ ವೃದ್ಧಿಯಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು