Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:11 - ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಯಾಕೋಬ್ಯರನ್ನು ವಿಮೋಚಿಸಿದ್ದಾನಲ್ಲಾ, ಅವರಿಗಿಂತ ಬಲಿಷ್ಟರ ಕೈಯಿಂದ ಅವರನ್ನು ಬಿಡಿಸಿದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರಿಗಿಂತ ಬಲಿಷ್ಠರ ಕೈಯಿಂದ ಅವರನ್ನು ಬಿಡಿಸಿದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ ಯಕೋಬರ ವಿಮೋಚಕ ಅವರನ್ನು ಅವರಿಗಿಂತ ಬಲಿಷ್ಠರ ಕೈಯಿಂದ ಬಿಡಿಸಿದಾತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಯಾಕೋಬ್ಯರನ್ನು ಹಿಂದಕ್ಕೆ ಕರೆದುಕೊಂಡು ಬರುವನು. ಯೆಹೋವನು ತನ್ನ ಜನರನ್ನು ಅವರಿಗಿಂತಲೂ ಬಲಿಷ್ಠರಾದ ಜನರಿಂದ ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ ಯೆಹೋವ ದೇವರು ಯಾಕೋಬ್ಯರನ್ನು ವಿಮೋಚಿಸಿದ್ದಾರೆ. ಅವರಿಗಿಂತ ಬಲಿಷ್ಠರ ಕೈಯೊಳಗಿಂದ ಅವರನ್ನು ಬಿಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:11
19 ತಿಳಿವುಗಳ ಹೋಲಿಕೆ  

ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆಯಿಂದ ಹಾರಿಹೋಗಿರಿ; ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ, ಭೂವಿುಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಯೆಹೋವನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ಹೇಳಿರಿ.


ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ; ಭೂವಿುಯ ಅಧೋಭಾಗವೇ, ಆರ್ಭಟಿಸು; ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಕೋಲಾಹಲಮಾಡಿರಿ; ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.


ನಾನು ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು; ಹೌದು, ಕ್ರೂರರ ಕೈಯಿಂದ ರಕ್ಷಿಸುವೆನು.


ಶೂರನಿಂದ ಕೊಳ್ಳೆಯನ್ನು ಕಸುಕೊಳ್ಳಬಹುದೇ? ಭೀಕರನಿಗೆ ಸೆರೆಯಾದವರನ್ನು ಬಿಡಿಸಲಾದೀತೇ [ಎಂದುಕೊಳ್ಳುತ್ತೀಯಾ]?


ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ. ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ.


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.


ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಅ ಬಲಿಷ್ಠನ ಮನೆಯನ್ನು ಹೊಕ್ಕು ಅವನ ಸೊತ್ತನ್ನು ಸುಲುಕೊಳ್ಳುವದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.


ಅದಕ್ಕೆ ಯೇಸು ಉತ್ತರವಾಗಿ ಅವರಿಗೆ - ನೀವು ಶಾಸ್ತ್ರವನ್ನಾದರೂ ದೇವರ ಶಕ್ತಿಯನ್ನಾದರೂ ತಿಳಿಯದೆ ತಪ್ಪುವವರಾಗಿದ್ದೀರಿ;


ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳೆಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ಯರು ಯೆಹೂದ್ಯರು ಉಭಯರು ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆ ಒಯ್ದವರೆಲ್ಲರೂ ಅವರನ್ನು ಬಿಡಿಸಲೊಲ್ಲದೆ ಬಿಗಿಹಿಡಿದಿದ್ದಾರೆ.


ಗಾಬರಿಯೂ ಹೆದರಿಕೆಯೂ ಅವರನ್ನು ಹಿಡಿದವೆ. ನಿನ್ನ ಭುಜಬಲದ ದೆಸೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗಿದ್ದಾರೆ. ಅಷ್ಟರಲ್ಲಿ ಯೆಹೋವನೇ, ನೀನು ಸಂಪಾದಿಸಿಕೊಂಡ ನಿನ್ನ ಪ್ರಜೆಗಳು ಸಾಗಿಹೋಗಿ ದೇಶವನ್ನು ಸೇರುವರು.


ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು; ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.


ಅವರ ರಕ್ಷಕನು ಬಲಿಷ್ಠ. ಸೇನಾಧೀಶ್ವರನಾದ ಯೆಹೋವನೆಂಬದೇ ಆತನ ನಾಮಧೇಯ; ಆತನು ಅವರ ವ್ಯಾಜ್ಯವನ್ನು ಜಯಿಸಿ ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು.


ಆ ದಿನದಲ್ಲಿ ಅವರ ದೇವರಾದ ಯೆಹೋವನು ಅವರನ್ನು ತನ್ನ ಹಿಂಡಾಗಿರುವ ಜನರೆಂದು ರಕ್ಷಿಸುವನು; ಅವರು ಕಿರೀಟದಲ್ಲಿನ ರತ್ನಗಳಂತೆ ತಮ್ಮ ದೇಶದಲ್ಲಿ ಥಳಥಳಿಸುವರು.


ಯೆಹೋವನು ಹೀಗನ್ನುತ್ತಾನೆ - ಶೂರನ ಸೆರೆಯವರೂ ಅಪಹರಿಸಲ್ಪಡುವರು, ಭೀಕರನ ಕೊಳ್ಳೆಯೂ ತೆಗೆಯಲ್ಪಡುವದು; ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.


ಕರ್ತನೇ, ನೀನು ನನ್ನ ವ್ಯಾಜ್ಯಗಳನ್ನು ನಡಿಸಿ ನನ್ನ ಪ್ರಾಣವನ್ನು ಉಳಿಸಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು