ಯೆರೆಮೀಯ 31:15 - ಕನ್ನಡ ಸತ್ಯವೇದವು J.V. (BSI)15 ಯೆಹೋವನು ಇಂತೆನ್ನುತ್ತಾನೆ - ರಾಮದಲ್ಲಿ ಬೊಬ್ಬೆಯು ಕೇಳಿಸುತ್ತದೆ, ಗೋಳಾಟವೂ ಘೋರರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆಹೋದದ್ದಕ್ಕಾಗಿ ಸಮಾಧಾನಹೊಂದಲೊಲ್ಲದೆ ಇದ್ದಾಳೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೋವನು ಇಂತೆನ್ನುತ್ತಾನೆ, “ರಾಮಾದಲ್ಲಿ ಬೊಬ್ಬೆಯು ಕೇಳಿಸುತ್ತದೆ, ಗೋಳಾಟವೂ ಮತ್ತು ಘೋರ ರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದದೆ ಇದ್ದಾಳೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸರ್ವೇಶ್ವರ ಹೀಗೆನ್ನುತ್ತಾರೆ: “ಕೇಳಿಬರುತ್ತಿದೆ ರಾಮಾ ಊರಿನೊಳು ರೋದನ ಗೋಳಾಟ, ಅಘೋರ ಆಕ್ರಂದನ. ಕಳೆದುಕೊಂಡ ಮಕ್ಕಳಿಗಾಗಿ ಗೋಳಾಡುತ್ತಿಹಳು ರಾಖೇಲಳು ಇನ್ನಿಲ್ಲದ ಅವುಗಳಿಗಾಗಿ ಉಪಶಮನ ಒಲ್ಲೆನೆನುತಿಹಳು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೋವನು ಹೀಗೆನ್ನುತ್ತಾನೆ: “ರಾಮದಲ್ಲಿ ಅತಿ ದುಃಖದಿಂದ ಗೋಳಾಡುವ ಒಂದು ಧ್ವನಿಯು ಕೇಳಿಬರುತ್ತದೆ. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುವಳು. ಅವಳ ಮಕ್ಕಳು ಸತ್ತುಹೋದುದರಿಂದ ರಾಹೇಲಳು ಸಮಾಧಾನ ಹೊಂದುವದಕ್ಕೆ ಒಪ್ಪಲಾರಳು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೆಹೋವ ದೇವರು ಮತ್ತೆ ಹೀಗೆ ಹೇಳುತ್ತಾರೆ: “ರಾಮದಲ್ಲಿ ರೋದನೆಯೂ, ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಿಸುತ್ತಿದೆ. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ, ಆದರಣೆ ಹೊಂದದೆ ಹೋಗಿದ್ದಾಳೆ. ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ.” ಅಧ್ಯಾಯವನ್ನು ನೋಡಿ |