ಯೆರೆಮೀಯ 31:28 - ಕನ್ನಡ ಸತ್ಯವೇದವು J.V. (BSI)28 ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅವರನ್ನು ಕೀಳಲು ಕೆಡವಲು, ಅಳಿಸಲು ಹಾಳುಮಾಡಲು, ಈ ಮೊದಲು ಎಚ್ಚರವಹಿಸಿದ ಹಾಗೆಯೆ ಇನ್ನು ಮುಂದೆ ಅವರನ್ನು ಕಟ್ಟಲು ಹಾಗು ನೆಡಲು ಎಚ್ಚರವಹಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಪೂರ್ವಕಾಲದಲ್ಲಿ, ಇಸ್ರೇಲ್ ಮತ್ತು ಯೆಹೂದಗಳ ಮೇಲೆ ನಾನು ಗಮನವಿಟ್ಟಿದ್ದೆನು. ಆದರೆ ನಾನು ಅವರನ್ನು ತೆಗೆದುಹಾಕುವ ಸಮಯಕ್ಕಾಗಿ ಕಾದುಕೊಂಡಿದ್ದೆ. ನಾನು ಅವರನ್ನು ಕೆಡವಿದೆ; ಅವರನ್ನು ಹಾಳುಮಾಡಿದೆ. ಅವರಿಗೆ ಅನೇಕ ಕಷ್ಟಗಳನ್ನು ಕೊಟ್ಟೆ. ಆದರೆ ಈಗ ಅವರನ್ನು ಅಭಿವೃದ್ಧಿಪಡಿಸುವದಕ್ಕಾಗಿ ಅವರನ್ನು ಬಲಶಾಲಿಗಳನ್ನಾಗಿ ಮಾಡಲು ಅವರ ಕಡೆಗೆ ಗಮನಹರಿಸುತ್ತೇನೆ” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನಾನು ಅವರನ್ನು ಕೀಳಲು, ಕೆಡವಲು, ಅಳಿಸಲು ಹಾಳುಮಾಡಲು, ಎಚ್ಚರವಹಿಸಿದ ಹಾಗೆಯೇ ಇನ್ನು ಮುಂದೆ ಅವರನ್ನು ಕಟ್ಟುವುದಕ್ಕೂ, ನೆಡುವುದಕ್ಕೂ ಅವರ ವಿಷಯವಾಗಿ ಎಚ್ಚರವಹಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಮತ್ತು ನಿಮ್ಮ ದೇವರಾದ ಯೆಹೋವನು ನಿಮ್ಮ ಸಂತಾನ ಪಶು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ ನಿಮಗೆ ಮೇಲನ್ನುಂಟುಮಾಡುವನು. ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಆತನ ಕಡೆಗೆ ತಿರುಗಿಕೊಳ್ಳಲು ಆತನು ನಿಮ್ಮ ಪಿತೃಗಳ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲಿಯೂ ತಿರಿಗಿ ಸಂತೋಷಪಟ್ಟು ನಿಮಗೆ ಮೇಲನ್ನುಂಟುಮಾಡುವನು.