Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:30 - ಕನ್ನಡ ಸತ್ಯವೇದವು J.V. (BSI)

30 ಸಾಯತಕ್ಕವನು ತನ್ನ ತನ್ನ ದೋಷದಿಂದ ಸಾಯುವನು. ಹುಳಿದ್ರಾಕ್ಷೆಯನ್ನು ತಿನ್ನುವವನ ಹಲ್ಲುಗಳೇ ಚಳಿತುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಸಾಯತಕ್ಕವನು ತನ್ನ ತನ್ನ ದೋಷದಿಂದ ಸಾಯುವನು. ಹುಳಿದ್ರಾಕ್ಷಿಯನ್ನು ತಿನ್ನುವವನ ಹಲ್ಲುಗಳೇ ಚಳಿತುಹೋಗುವವು” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಏಕೆಂದರೆ ಸಾಯತಕ್ಕವನು ತನ್ನ ಸ್ವಂತ ದೋಷಕ್ಕಾಗಿಯೇ ಸಾಯುವನು. ಹುಳಿದ್ರಾಕ್ಷೆಯನ್ನು ತಿಂದವನ ಹಲ್ಲೇ ಚಳಿತುಹೋಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಪ್ರತಿಯೊಬ್ಬನು ತನ್ನ ಪಾಪದ ನಿಮಿತ್ತವೇ ಸಾಯುವನು. ಹುಳಿದ್ರಾಕ್ಷಿಯನ್ನು ತಿಂದವನೇ ಅದರ ರುಚಿಯನ್ನು ಕಾಣುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆದರೆ ಒಬ್ಬೊಬ್ಬನು ಸ್ವಂತ ಪಾಪಕ್ಕಾಗಿ ಸಾಯುವನು. ಹುಳಿ ದ್ರಾಕ್ಷಿಯನ್ನು ತಿಂದ ಮನುಷ್ಯನು ಯಾವನೋ, ಅವನ ಹಲ್ಲುಗಳು ಚಳಿತು ಹೋಗುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:30
14 ತಿಳಿವುಗಳ ಹೋಲಿಕೆ  

ಪಾಪಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು, ತಂದೆಯು ಮಗನ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ಲಭಿಸುವದಲ್ಲವೆ.


ಯಾಕಂದರೆ ಪ್ರತಿಯೊಬ್ಬನು ಸ್ವಂತ ಹೊರೆಯನ್ನು ಹೊತ್ತುಕೊಳ್ಳಬೇಕು.


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ಮಕ್ಕಳ ಪಾಪದ ದೆಸೆಯಿಂದ ತಂದೆಗೂ ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು.


ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿದರೆ ಆ ಅಧರ್ಮದಿಂದಲೇ ಸಾಯುವನು.


ಆಮೇಲೆ ಆಶೆಯು ಬಸುರಾಗಿ ಪಾಪವನ್ನು ಹೆರುತ್ತದೆ; ಪಾಪವು ತುಂಬಾ ಬೆಳೆದು ಮರಣವನ್ನು ಹಡೆಯುತ್ತದೆ.


ನಾನು ಶಿಷ್ಟನಿಗೆ - ನೀನು ಬಾಳೇ ಬಾಳುವಿ ಎಂದು ಹೇಳಲು ಅವನು ತನ್ನ ಪುಣ್ಯದ ಮೇಲೆ ಭರವಸವಿಟ್ಟು ಪಾಪ ಮಾಡಿದರೆ ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು.


ನಾನು ದುಷ್ಟನಿಗೆ - ದುಷ್ಟನೇ, ಸತ್ತೇಸಾಯುವಿ ಎಂದು ನುಡಿಯುವಾಗ ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಪಡಿಸದೆ ಹೋದರೆ ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವದು; ಅವನ ಮರಣಕ್ಕೆ ಹೊಣೆಯಾದ ನಿನಗೆ ನಾನು ಮುಯ್ಯಿತೀರಿಸುವೆನು.


ದೇವರಾತ್ಮವು ನನ್ನೊಳಗೆ ಹೊಕ್ಕು ನಾನು ಎದ್ದು ನಿಂತುಕೊಳ್ಳುವಂತೆ ಮಾಡಿದ ಮೇಲೆ ಆತನು ನನಗೆ ಹೀಗೆ ಹೇಳಿದನು - ನೀನು ಹೋಗಿ ನಿನ್ನ ಮನೆಯೊಳಗೆ ಅಡಗಿಕೋ.


ಆದರೆ ಮಕ್ಕಳ ಪಾಪದ ದೆಸೆಯಿಂದ ತಂದೆಗೂ ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು ಎಂಬದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಯೆಹೋವನ ಅಪ್ಪಣೆಯನ್ನು ನೆನಪುಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.


ಅವನು ತನ್ನ ನಾಶವನ್ನು ಕಣ್ಣಾರೆ ಕಾಣಲಿ, ಸರ್ವಶಕ್ತನ ರೌದ್ರರಸವನ್ನು ಪಾನಮಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು