ಯೆರೆಮೀಯ 31:36 - ಕನ್ನಡ ಸತ್ಯವೇದವು J.V. (BSI)36 ಈ ಕಟ್ಟಳೆಗಳು ನನ್ನ ಪರಾಂಬರಿಕೆಗೆ ಬಾರದೆ ತೊಲಗಿಹೋದರೆ ಆಗ ಇಸ್ರಾಯೇಲ್ ಸಂತಾನವು ನನ್ನ ಪರಾಂಬರಿಕೆಗೆ ಬಾರದೆ ಎಂದಿಗೂ ಜನಾಂಗವಾಗದೆ ಹೋಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 “ಈ ಕಟ್ಟಳೆಗಳು ನನ್ನ ಪರಾಂಬರಿಕೆಗೆ ಬಾರದೆ ತೊಲಗಿ ಹೋದರೆ, ಆಗ ಇಸ್ರಾಯೇಲ್ ಸಂತಾನವು ನನ್ನ ಪರಾಂಬರಿಕೆಗೆ ಒಳಗಾಗದೆ ಎಂದಿಗೂ ಜನಾಂಗವಾಗದೆ ಹೋಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಆತನ ಮಾತು ಇವು - ಈ ಪ್ರಕೃತಿ ನಿಯಮ ನನ್ನ ಪರಾಂಬರಿಕೆಯಲ್ಲಿ ಇರುವತನಕ ಒಂದು ರಾಷ್ಟ್ರವಾಗಿ ಉಳಿವುದು ಇಸ್ರಯೇಲ್ ಸಂತಾನ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಯೆಹೋವನು ಹೀಗೆನ್ನುತ್ತಾನೆ: “ಸೂರ್ಯ, ಚಂದ್ರ, ನಕ್ಷತ್ರ ಮತ್ತು ಸಮುದ್ರಗಳ ಮೇಲಿನ ಹತೋಟಿಯನ್ನು ನಾನು ಕಳೆದುಕೊಂಡಾಗ ಮಾತ್ರ ಇಸ್ರೇಲಿನ ಪೀಳಿಗೆಯು ಒಂದು ಜನಾಂಗವಾಗಿ ನಿಂತುಹೋಗುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 “ಈ ನಿಯಮಗಳು ನನ್ನ ಸನ್ನಿಧಿಯಿಂದ ಯಾವಾಗ ಇಲ್ಲದೆ ಹೋಗುವುವೋ, ಆಗ ಇಸ್ರಾಯೇಲಿನ ಸಂತಾನವು ಸಹ ಸದಾಕಾಲ ನನ್ನ ಮುಂದೆ ಜನಾಂಗವಾಗಿರದ ಹಾಗೆ ನಿಂತುಹೋಗುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |