Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:8 - ಕನ್ನಡ ಸತ್ಯವೇದವು J.V. (BSI)

8 ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು, ಅವರೊಂದಿಗೆ ಕುರುಡರನ್ನೂ ಕುಂಟರನ್ನೂ ಗರ್ಭಿಣಿಯರನ್ನೂ ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರತರುವೆನು; ದೊಡ್ಡಗುಂಪಾಗಿ ಇಲ್ಲಿಗೆ ಹಿಂದಿರುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು. ಅವರೊಂದಿಗೆ ಕುರುಡರನ್ನೂ, ಕುಂಟರನ್ನೂ, ಗರ್ಭಿಣಿಯರನ್ನೂ, ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇಗೋ ನೋಡು, ಅವರನ್ನು ಬರಮಾಡುವೆನು ಉತ್ತರದೇಶದಿಂದ ಅವರನ್ನು ಒಂದುಗೂಡಿಸುವೆನು ದಿಗಂತಗಳಿಂದ. ಅವರೊಡನೆ ಕುರುಡರನ್ನೂ ಕುಂಟರನ್ನೂ ಗರ್ಭಿಣಿಯರನ್ನೂ ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಇಸ್ರೇಲರನ್ನು ಉತ್ತರದ ದೇಶದಿಂದ ತರುವೆನು. ನಾನು ಜಗತ್ತಿನ ದೂರದೂರದ ಸ್ಥಳಗಳಿಂದ ಇಸ್ರೇಲರನ್ನು ಒಟ್ಟುಗೂಡಿಸುವೆನೆಂದು ತಿಳಿದುಕೊಳ್ಳಿರಿ. ಅವರಲ್ಲಿ ಕೆಲವರು ಕುರುಡರಾಗಿರುವರು; ಕುಂಟರಾಗಿರುವರು, ಕೆಲವು ಸ್ತ್ರೀಯರು ಗರ್ಭಿಣಿಯರಾಗಿದ್ದು ಹೆರಿಗೆಯ ದಿನಗಳು ತುಂಬಿದವರಾಗಿರುತ್ತಾರೆ. ಬಹಳಷ್ಟು ಜನರು ಹಿಂತಿರುಗಿಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇಗೋ, ನಾನು ಅವರನ್ನು ಉತ್ತರ ದೇಶದಿಂದ ತಂದು ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ. ಅವರಲ್ಲಿ ಕುರುಡರೂ, ಕುಂಟರೂ, ಗರ್ಭಿಣಿಯಾದವರೂ, ದಿನತುಂಬಿದ ಗರ್ಭಿಣಿಯರೂ ಇರುವರು. ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗಿ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:8
29 ತಿಳಿವುಗಳ ಹೋಲಿಕೆ  

ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.


ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಬಡಗಣ ದೇಶದಿಂದಲೂ ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು; ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು. ಇದು ಯೆಹೋವನ ನುಡಿ.


ಮತ್ತು ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಯಿಸುವೆನು; ಅವರೆದುರಿನ ಕತ್ತಲನ್ನು ಬೆಳಕುಮಾಡಿ ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು.


ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ಕುಂಟುಜನಾಂಗವನ್ನು ಒಟ್ಟುಗೊಡಿಸುವೆನು, ನಾನು ಬಾಧಿಸಿ ತಳ್ಳಿದ ಪ್ರಜೆಯನ್ನು ಸೇರಿಸುವೆನು;


ಆದದರಿಂದ ಜೋಲುಬಿದ್ದ ಕೈಗಳನ್ನೂ ನಡುಗುವ ಮೊಣಕಾಲುಗಳನ್ನೂ ಸುಧಾರಿಸಿಕೊಳ್ಳಿರಿ;


ಜನಾಂಗಗಳ ವಶದಿಂದ ತಪ್ಪಿಸಿ ದೇಶದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡಿ ಇಸ್ರಾಯೇಲಿನ ಬೆಟ್ಟಗಳಲ್ಲಿಯೂ ತೊರೆಗಳ ಬಳಿಯಲ್ಲಿಯೂ ಸೀಮೆಯ ಎಲ್ಲಾ ಹಕ್ಕೆಗಳಲ್ಲಿಯೂ ಮೇಯಿಸುವೆನು.


ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗೆತ್ತಿಕೊಳ್ಳುವನು. ಹಾಲುಕುಡಿಸುವ ಕುರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.


ಸಹೋದರರೇ, ಅಕ್ರಮವಾಗಿ ನಡೆಯುವವರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರಲ್ಲಿಯೂ ದೀರ್ಘಶಾಂತರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ನ್ಯಾಯವನ್ನು ದಿಗ್ವಿಜಯಕ್ಕಾಗಿ ಕಳುಹಿಸಿಕೊಡುವನು.


ಆ ಕಾಲದಲ್ಲಿ ಯೆಹೂದವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವದು, ಎರಡೂ ಕಲೆತು ನಾನು ನಿಮ್ಮ ಪಿತೃಗಳಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಬಡಗಣ ಸೀಮೆಯೊಳಗಿಂದ ಬರುವವು.


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ; ಭೂವಿುಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಕಾರ್ಯವನ್ನು ನೋಡುವರು.


ನಾನು ಒಪ್ಪಿಸಿಬಿಡು ಎಂದು ಬಡಗಲಿಗೂ ತಡೆಯಬೇಡ ಎಂದು ತೆಂಕಲಿಗೂ ಹೇಳಿ ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ


ನಿಮ್ಮಲ್ಲಿ ಯಾರಾದರೂ ಭೂಲೋಕದ ಕೊನೆಯವರೆಗೂ ಒಯ್ಯಲ್ಪಟ್ಟರೂ ಅಲ್ಲಿಂದಲೂ ನಿಮ್ಮ ದೇವರಾದ ಯೆಹೋವನು ಅವರನ್ನೂ ಕರತಂದು


ಯಾಕಂದರೆ ನಮಗಿರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದನು, ಪಾಪ ಮಾತ್ರ ಮಾಡಲಿಲ್ಲ.


ಜ್ಞಾನಿಯಾದ ನೀನು ವಿಗ್ರಹಾಲಯದಲ್ಲಿ ಊಟಕ್ಕೆ ಕೂತಿರುವಾಗ ನಿರ್ಬಲವಾದ ಮನಸ್ಸುಳ್ಳ ಸಹೋದರನು ಕಂಡರೆ ಅವನೂ ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೆ ಧೈರ್ಯತಂದುಕೊಂಡಾನಲ್ಲವೇ.


ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನನ್ನು - ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನ ಮೇಲೆ ಪ್ರೀತಿ ಇಟ್ಟಿದ್ದೀಯೋ ಎಂದು ಕೇಳಲು ಅವನು - ಹೌದು, ಸ್ವಾಮೀ, ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬದನ್ನು ನೀನೇ ಬಲ್ಲೆ ಅಂದನು. ಆತನು ಅವನಿಗೆ - ನನ್ನ ಕುರಿಮರಿಗಳನ್ನು ಮೇಯಿಸು ಎಂದು ಹೇಳಿದನು.


ಎಲೈ, ಎಲೈ, ಉತ್ತರದೇಶದಿಂದ ಓಡಿಬನ್ನಿರಿ; ಇದು ಯೆಹೋವನ ನುಡಿ; ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದರಿಸಿದ್ದೇನಲ್ಲಾ; ಇದು ಯೆಹೋವನ ನುಡಿ.


ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ಉದ್ಧರಿಸುವೆನು, ಚದರಿಸಲ್ಪಟ್ಟವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರಕೀರ್ತಿಗಳನ್ನು ಉಂಟುಮಾಡುವೆನು.


ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಆಘ್ರಾಣಿಸಿ ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ


ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತದೇಶಗಳಿಂದಲೂ ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದನೋ ಅಲ್ಲಿಗೆ ತಿರಿಗಿ ಬರಮಾಡುವೆನು. ಇದು ಯೆಹೋವನ ನುಡಿ.


ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು - ಯೆಹೋವನು ಹೀಗನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು; ನಾನು ಕೋಪ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ.


ಪೂರ್ವಪಶ್ಚಿಮೋತ್ತರಗಳಲ್ಲಿಯೂ ಸಮುದ್ರದ ಕಡೆಯಲ್ಲಿಯೂ ಇರುವ ದೇಶಗಳಿಂದ ಕೂಡಿಸಿದವರೆಲ್ಲರೂ ಸ್ತುತಿಮಾಡಲಿ.


ಆತನು ಇಸ್ರಾಯೇಲನ ಮನೆತನದವರ ಕಡೆಗಿದ್ದ ತನ್ನ ಪ್ರೀತಿಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ ನಮ್ಮ ದೇವರ ರಕ್ಷಾಕಾರ್ಯವನ್ನು ನೋಡಿದ್ದಾರೆ.


ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡಿಸಿ ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂವಿುಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ.


ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ ತಮ್ಮ ತಮ್ಮ ಹಟ್ಟಿಗಳಿಗೆ ತಿರಿಗಿ ಬರಮಾಡುವೆನು; ಅವು ದೊಡ್ಡ ಪೀಳಿಗೆಯಾಗಿ ಹೆಚ್ಚುವವು.


ಮಂದೆಯ ಕುರುಬನು ಸುತ್ತುಮುತ್ತಲು ಚದರಿಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚೆಲ್ಲಾಪಿಲ್ಲಿಯಾದ ಎಲ್ಲಾ ಸ್ಥಳಗಳಿಂದ ಅವುಗಳನ್ನು ಬಿಡಿಸಿ


ಇಸ್ರಾಯೇಲ್ಯರನ್ನು ಬಡಗಣ ದೇಶದಿಂದಲೂ ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು; ನಾನು ಅವರ ಪಿತೃಗಳಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು