Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:1 - ಕನ್ನಡ ಸತ್ಯವೇದವು J.V. (BSI)

1 ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಹತ್ತನೆಯ ವರುಷದಲ್ಲಿ, ಅಂದರೆ ನೆಬೂಕದ್ನೆಚ್ಚರನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ, ಯೆಹೋವನು ಯೆರೆಮೀಯನಿಗೆ ತನ್ನ ವಾಕ್ಯವನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ, ಅಂದರೆ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಯೆಹೋವನು ಯೆರೆಮೀಯನಿಗೆ ತನ್ನ ವಾಕ್ಯವನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜುದೇಯದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೇ ವರ್ಷದಲ್ಲಿ, ಅಂದರೆ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ತಮ್ಮ ವಾಕ್ಯವನ್ನು ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೂದದ ರಾಜನಾದ ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವನಿಂದ ಬಂದ ಸಂದೇಶವಿದು. ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೇ ವರ್ಷವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೆಬೂಕದ್ನೆಚ್ಚರನ ಹದಿನೆಂಟನೆಯ ವರ್ಷವಾಗಿದ್ದ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:1
9 ತಿಳಿವುಗಳ ಹೋಲಿಕೆ  

ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳಿಕೆಯ ಮೊದಲನೆಯ ವರುಷದಲ್ಲಿ ಪ್ರವಾದಿಯಾದ ಯೆರೆಮೀಯನು ಯೆಹೂದ್ಯರೆಲ್ಲರ ವಿಷಯವಾಗಿ ತನಗೆ ಉಂಟಾದ ಈ ದೈವೋಕ್ತಿಯನ್ನು


ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು.


ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಯಾಜಕ ಮಾಸೇಯನ ಮಗನಾದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ -


ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು -


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಣ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇವಿುಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -


ಹದಿನೆಂಟನೆಯ ವರುಷದಲ್ಲಿ ಎಂಟುನೂರು ಮೂವತ್ತೆರಡು ಜನರನ್ನು ಯೆರೂಸಲೇವಿುನಿಂದ ಸೆರೆಯೊಯ್ದನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು