Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:2 - ಕನ್ನಡ ಸತ್ಯವೇದವು J.V. (BSI)

2 ಆ ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತ್ತು, ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತು ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆ ಸಮಯದಲ್ಲಿ ಬಾಬಿಲೋನಿಯದ ಅರಸನ ಸೈನ್ಯ ಜೆರುಸಲೇಮನ್ನು ಮುತ್ತಿತ್ತು. ಪ್ರವಾದಿ ಯೆರೆಮೀಯನು ಜುದೇಯದ ರಾಜನ ಮನೆಗೆ ಸೇರಿದ ಕಾರಾಗೃಹದಲ್ಲಿ ಸೆರೆಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಸಮಯದಲ್ಲಿ ಬಾಬಿಲೋನಿನ ರಾಜನ ಸೈನ್ಯವು ಜೆರುಸಲೇಮನ್ನು ಮುತ್ತಿತ್ತು. ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು. ಈ ಕಾರಾಗೃಹವು ಯೆಹೂದದ ರಾಜನ ಅರಮನೆಗೆ ಸೇರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಬಾಬಿಲೋನಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕಿತ್ತು. ಪ್ರವಾದಿಯಾದ ಯೆರೆಮೀಯನು ಯೆಹೂದದ ಅರಸನ ಅರಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಬಂಧಿಸಲಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:2
15 ತಿಳಿವುಗಳ ಹೋಲಿಕೆ  

ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ದಿನವಹಿ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.


ಸೆರೆಮನೆಯ ಅಂಗಳದ ಹತ್ತಿರ ಮೇಲಣ ಅರಮನೆಯ ಗೋಡೆಯನ್ನು ಮೀರಿಬರುವ ಮೂಲೆಬುರುಜಿನ ಎದುರಿನ ಭಾಗವನ್ನು ಊಜೈಯ ಮಗನಾದ ಪಾಲಾಲನೂ ಇವನ ಆಚೆಯಲ್ಲಿ ಪರೋಷನ ಮಗನಾದ ಪೆದಾಯನೂ ಜೀರ್ಣೋದ್ಧಾರ ಮಾಡಿದರು.


ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ದೊಸಕೊಂಡನು.


ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಅವನಿಗೆ ಯೆಹೋವನು ಈ ಎರಡನೆಯ ವಾಕ್ಯವನ್ನು ಅನುಗ್ರಹಿಸಿದನು -


ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನನ್ನ ಬಳಿಗೆ ಬಂದು - ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು, ಪರಾಧೀನವಾಗದಂತೆ ಕೊಂಡುಕೊಳ್ಳುವ ಹಕ್ಕೂ ನಿನ್ನದೇ; ನಿನಗಾಗಿಯೇ ಕೊಂಡುಕೋ ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು.


ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಹೀಗೆಯೇ ಹಿಂಸೆಪಡಿಸಿದರಲ್ಲಾ.


ಮತ್ತು ಯೆರೆಮೀಯನು ಬಾರೂಕನಿಗೆ - ಯೆಹೋವನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಯಾಗಿದೆ;


ಯೆಹೂದದ ಅರಸನಾದ ಚಿದ್ಕೀಯನು ಯೆರೆಮೀಯನಿಗೆ - ನೀನು ಪ್ರವಾದನೆ ಮಾಡುತ್ತಾ - ಯೆಹೋವನು ಇಂತೆನ್ನುತ್ತಾನೆ - ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರವಿುಸುವನು;


ನನ್ನ ಆಪ್ತರು ನನ್ನನ್ನು ಹೇಸಿ ಬಿಟ್ಟುಹೋಗುವಂತೆ ಮಾಡಿದ್ದೀ; ಕಟ್ಟಲ್ಪಟ್ಟಿದ್ದೇನೆ, ಬಿಡಿಸಿಕೊಳ್ಳಲಾರೆ.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಣ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇವಿುಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -


ಆ ಕಾಲದಲ್ಲಿ ಯೆರೆಮೀಯನು ಇನ್ನೂ ಸೆರೆಯಾಗಿರಲಿಲ್ಲ; ಜನರಲ್ಲಿ ಹೋಗುತ್ತಾ ಬರುತ್ತಾ ಇದ್ದನು.


ಈ ಪ್ರಕಾರ ಅವರು ಯೆರೆಮೀಯನನ್ನು ಹಗ್ಗಗಳ ಮೂಲಕ ಸೇದಿಕೊಂಡು ಬಾವಿಯಿಂದ ಮೇಲಕ್ಕೆ ಎತ್ತಿದರು; ಆಮೇಲೆ ಯೆರೆಮೀಯನು [ಹಿಂದಿನಂತೆ] ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.


ಒಂಭತ್ತನೆಯ ವರುಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸರ್ವಸೈನ್ಯಸಹಿತನಾಗಿ ಯೆರೂಸಲೇವಿುಗೆ ಬಂದು ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿ


ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು