ಯೆರೆಮೀಯ 32:20 - ಕನ್ನಡ ಸತ್ಯವೇದವು J.V. (BSI)20 ನೀನು ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನೂ ಉತ್ಪಾತಗಳನ್ನೂ ನಡಿಸಿ ಈ ದಿನದವರೆಗೆ ಇಸ್ರಾಯೇಲ್ಯರಲ್ಲಿಯೂ ಇತರ ಜನರಲ್ಲಿಯೂ ಅವುಗಳನ್ನು ಮಾಡುತ್ತಾ ಬಂದು ಹೆಸರನ್ನು ಪಡೆದುಕೊಂಡಿ; ಅದು ಈಗಲೂ ಸ್ಥಿರವಾಗಿದೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀನು ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ ಈ ದಿನದವರೆಗೆ ಇಸ್ರಾಯೇಲರಲ್ಲಿಯೂ ಮತ್ತು ಇತರ ಜನರಲ್ಲಿಯೂ ಅವುಗಳನ್ನು ಮಾಡುತ್ತಾ ಬಂದು ಹೆಸರನ್ನು ಪಡೆದುಕೊಂಡಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಈಜಿಪ್ಟ್ ದೇಶದಲ್ಲಿ ಮಾಡಿದ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಇಸ್ರಯೇಲರಲ್ಲೂ ಇತರ ಜನಾಂಗಗಳಲ್ಲೂ ಈ ದಿನದವರೆಗೂ ಮಾಡಿ ಹೆಸರುವಾಸಿಯಾದವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೆಹೋವನೇ, ನೀನು ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿದೆ. ಇಂದಿನವರೆಗೂ ನೀನು ಅದ್ಭುತಕಾರ್ಯಗಳನ್ನು ಮಾಡಿದೆ. ಇಸ್ರೇಲಿನಲ್ಲಿಯೂ ನೀನು ಅವುಗಳನ್ನು ಮಾಡಿದೆ. ಜನರು ಇರುವಲ್ಲೆಲ್ಲ ನೀನು ಅವುಗಳನ್ನು ಮಾಡಿದೆ. ಇವುಗಳಿಂದ ನೀನು ಸುಪ್ರಸಿದ್ಧನಾಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೀವು ಈ ದಿನದವರೆಗೂ ಈಜಿಪ್ಟ್ ದೇಶದಲ್ಲಿಯೂ ಇಸ್ರಾಯೇಲಿನಲ್ಲಿಯೂ ಜನಾಂಗಗಳೊಳಗೂ ಗುರುತುಗಳನ್ನೂ, ಲಕ್ಷಣಗಳನ್ನೂ ಇಟ್ಟಿದ್ದೀರಿ. ಇಂದಿನವರೆಗೂ ನಿಮಗೆ ಹೆಸರನ್ನು ಸ್ಥಿರಪಡಿಸಿಕೊಂಡಿದ್ದೀರಿ. ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರು ತಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ನಾನು ಐಗುಪ್ತ್ಯರ ನಡುವೆ ನಡಿಸಿರುವ ಮಹತ್ಕಾರ್ಯಗಳನ್ನು ವಿವರಿಸಿ - ಯೆಹೋವನು ಐಗುಪ್ತ್ಯರನ್ನು ತನಗೆ ಇಷ್ಟಬಂದಂತೆ ಆಡಿಸಿ ಶಿಕ್ಷಿಸಿದನು ಎಂಬದಾಗಿ ತಿಳಿಸುವದಕ್ಕೂ ನಾನು ಫರೋಹನ ಹೃದಯವನ್ನೂ ಅವನ ಪರಿವಾರದವರ ಹೃದಯಗಳನ್ನೂ ಮೊಂಡುಮಾಡಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳಿಂದ ನೀವು ನನ್ನನ್ನೇ ಯೆಹೋವನೆಂದು ತಿಳುಕೊಳ್ಳುವಿರಿ.