Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:21 - ಕನ್ನಡ ಸತ್ಯವೇದವು J.V. (BSI)

21 ನೀನು ಮಹತ್ಕಾರ್ಯಗಳನ್ನೂ ಉತ್ಪಾತಗಳನ್ನೂ ನಡಿಸಿ ಭುಜಪರಾಕ್ರಮವನ್ನು ತೋರಿಸಿ ಶಿಕ್ಷಾಹಸ್ತವನ್ನು ಎತ್ತಿ ಮಹಾ ಭೀತಿಯನ್ನುಂಟುಮಾಡಿ ನಿನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತದೇಶದೊಳಗಿಂದ ಬರಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದು ಈಗಲೂ ಸ್ಥಿರವಾಗಿದೆ; ನೀನು ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರಿಸಿ, ಶಿಕ್ಷಾಹಸ್ತವನ್ನು ಎತ್ತಿ, ಮಹಾ ಭೀತಿಯನ್ನುಂಟುಮಾಡಿ ನಿನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆ ಹೆಸರು ಈಗಲೂ ಸುಸ್ಥಿರವಾಗಿದೆ. ನೀವು ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರ್ಪಡಿಸಿ, ಶಿಕ್ಷಾಹಸ್ತವನ್ನೂ ಪ್ರಯೋಗಿಸಿ, ಮಹಾಭೀತಿಯನ್ನು ಉಂಟುಮಾಡಿ, ನಿಮ್ಮ ಜನರಾದ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನೇ, ನೀನು ಅದ್ಭುತಕಾರ್ಯಗಳನ್ನು ಮಾಡಿ ನಿನ್ನ ಜನರನ್ನು ಈಜಿಪ್ಟಿನಿಂದ ಇಸ್ರೇಲಿಗೆ ಕರೆದುತಂದೆ. ಇದನ್ನು ಬಲವಾದ ಕೈಗಳಿಂದಲೇ ಮಾಡಿದೆ. ನಿನ್ನ ಸಾಮರ್ಥ್ಯ ಆಶ್ಚರ್ಯಕರವಾದದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿಮ್ಮ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ, ಲಕ್ಷಣಗಳಿಂದಲೂ, ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಮಹಾಭಯದಿಂದಲೂ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:21
18 ತಿಳಿವುಗಳ ಹೋಲಿಕೆ  

ಭುಜಬಲವನ್ನೂ ಶಿಕ್ಷಾಹಸ್ತವನ್ನೂ ಮಹಾಭೀತಿಗಳನ್ನೂ ಮಹತ್ಕಾರ್ಯಗಳನ್ನೂ ಉತ್ಪಾತಗಳನ್ನೂ ಪ್ರಯೋಗಿಸಿ


ನಾನು ಮಾಡಿದ ವಾಗ್ದಾನವನ್ನು ನೆನಸಿಕೊಂಡೆನು. ಆದದರಿಂದ ನೀನು ಇಸ್ರಾಯೇಲ್ಯರಿಗೆ [ನನ್ನ ಹೆಸರಿನಲ್ಲಿ] ಹೇಳಬೇಕಾದದ್ದೇನಂದರೆ - ನಾನು ಯೆಹೋವನು; ಐಗುಪ್ತ್ಯರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸಗಳನ್ನು ನಾನು ತಪ್ಪಿಸಿ ಅವರಲ್ಲಿ ನಿಮಗಿರುವ ದಾಸತ್ವವನ್ನು ತೊಲಗಿಸಿ ನನ್ನ ಕೈ ಚಾಚಿ ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.


ತನ್ನ ಪ್ರಜೆಯು ಉಲ್ಲಾಸದಿಂದಲೂ ತಾನು ಆರಿಸಿಕೊಂಡವರು ಉತ್ಸಾಹಧ್ವನಿಯಿಂದಲೂ ಹೊರಗೆ ಬರುವಂತೆ ಮಾಡಿದನು.


ಇಸ್ರಾಯೇಲ್ಯರನ್ನು ಬೆಳ್ಳಿಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು; ಅವರ ಕುಲಗಳಲ್ಲಿ ಒಬ್ಬನಾದರೂ ಎಡವುವವನಿರಲಿಲ್ಲ.


ನಿನ್ನ ಇಸ್ರಾಯೇಲ್ ಪ್ರಜೆಗೆ ಸಮಾನವಾದ ಜನಾಂಗವು ಭೂಲೋಕದಲ್ಲಿ ಯಾವದಿರುತ್ತದೆ? ದೇವನಾದ ನೀನೇ ಚಿತ್ತಯಿಸಿ ಅದನ್ನು ವಿಮೋಚಿಸಿ ಸ್ವಪ್ರಜೆಯನ್ನಾಗಿ ಮಾಡಿಕೊಂಡಿ; ಭಯಂಕರವಾದ ಮಹತ್ಕಾರ್ಯಗಳಿಂದ ನಿನ್ನ ಹೆಸರನ್ನು ಪ್ರಸಿದ್ಧಪಡಿಸಿದಿ. ನೀನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸಿ ರಕ್ಷಿಸಿದ ನಿನ್ನ ಪ್ರಜೆಯ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿಬಿಟ್ಟಿ.


ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಸೇರದವನಾದ ಇಂಥ ಒಬ್ಬ ಪರದೇಶಿಯು ನಿನ್ನ ನಾಮಕ್ಕೋಸ್ಕರ ದೂರದೇಶದಿಂದ ಬಂದು ಈ ಆಲಯದ ಮುಂದೆ ನಿಂತು ನಿನ್ನನ್ನು ಪ್ರಾರ್ಥಿಸುವದಾದರೆ


ಬೇರೆ ಯಾವ ದೇವರಾದರೂ ಮನಶ್ಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವದಕ್ಕೆ ಪ್ರಯತ್ನಿಸಿದ್ದುಂಟೋ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣಿಗೆದುರಾಗಿ ನಡಿಸಿದನಲ್ಲಾ.


ಇನ್ನು ಮೇಲೆ ನಿಮ್ಮ ಮಕ್ಕಳು - ಇದು ಯಾತಕ್ಕೆ ಎಂದು ವಿಚಾರಿಸುವಾಗ ನೀವು ಅವರಿಗೆ - ನಾವು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ಯೆಹೋವನು ಭುಜಬಲದಿಂದ ನಮ್ಮನ್ನು ಬಿಡಿಸಿದನು.


ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತದೇಶದಿಂದ ಬಿಡಿಸಿದನಾದದರಿಂದ ಆತನ ನಿಯಮವನ್ನು ಕುರಿತು ನೀವು ಮಾತಾಡಬೇಕೆಂಬದಕ್ಕಾಗಿ ಈ ಆಚಾರವು ನಿಮಗೆ ಕೈಯಲ್ಲಿ ಕಟ್ಟಿಕೊಂಡಿರುವ ದಾರದಂತೆಯೂ ಹುಬ್ಬುಗಳ ನಡುವೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರುವದು.


ಅದಕ್ಕೆ ಯೆಹೋವನು - ನಾನು ಫರೋಹನಿಗೆ ಮಾಡುವದನ್ನು ನೀನು ಈಗ ನೋಡುವಿ. ಅವನು ನನ್ನ ಭುಜಬಲದಿಂದ ಅವರನ್ನು ಹೋಗಗೊಡಿಸುವನು; ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು ಅಂದನು.


ನೀವು ಆಗ ಕಣ್ಣಾರೆ ನೋಡಿದ ಪ್ರಕಾರ ಆತನು ವಿಶೇಷ ಮನಶ್ಶೋಧನೆ, ಮಹತ್ಕಾರ್ಯ, ಉತ್ಪಾತ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದನಲ್ಲಾ. ನೀವು ಹೆದರಿಕೊಳ್ಳುವ ಆ ಎಲ್ಲಾ ಜನಾಂಗಗಳಿಗೂ ಆತನು ಹಾಗೆಯೇ ಮಾಡುವನು.


ನಿನ್ನ ಇಸ್ರಾಯೇಲ್ ಪ್ರಜೆಗೆ ಸಮಾನವಾದ ಜನಾಂಗವು ಲೋಕದಲ್ಲಿ ಯಾವದಿರುತ್ತದೆ? ನೀನೇ ಹೋಗಿ ಅದನ್ನು ವಿಮೋಚಿಸಿ ಸ್ವಪ್ರಜೆಯನ್ನಾಗಿ ಮಾಡಿಕೊಂಡು ನಿನ್ನ ಹೆಸರನ್ನು ಪ್ರಸಿದ್ಧಪಡಿಸಿದಿ. ಐಗುಪ್ತ್ಯರು ಮೊದಲಾದ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ ರಕ್ಷಿಸಿ ಅದರ ಎದುರಿನಲ್ಲೇ ನಿನ್ನ ದೇಶಕ್ಕೋಸ್ಕರ ಭಯಂಕರವಾದ ಮಹತ್ಕಾರ್ಯಗಳನ್ನು ನಡಿಸಿದಿ.


ಆದಕಾರಣ ನಾನು ಕೈಚಾಚಿ ಐಗುಪ್ತದೇಶದ ಮಧ್ಯದಲ್ಲಿ ಮಹತ್ಕಾರ್ಯಗಳನ್ನು ಮಾಡಿ ಅದನ್ನು ನಾನಾ ವಿಧವಾಗಿ ಬಾಧಿಸುವೆನು; ಆಮೇಲೆ ಅರಸನು ನಿಮ್ಮನ್ನು ಬಿಡುವನು.


ಅಂದರೆ ಆತನು ಐಗುಪ್ತದೇಶದಲ್ಲಿ ಫರೋಹನನ್ನೂ ಅವನ ದೇಶವನ್ನೂ ಶಿಕ್ಷಿಸುವದಕ್ಕಾಗಿ ನಡಿಸಿದ ಉತ್ಪಾತ ಮಹತ್ಕಾರ್ಯಗಳನ್ನೂ;


ಅವರ ಮಧ್ಯದಲ್ಲಿ ತನ್ನಪವಿತ್ರಾತ್ಮವನ್ನಿರಿಸಿ ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದರಿಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಭೇದಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು