Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:24 - ಕನ್ನಡ ಸತ್ಯವೇದವು J.V. (BSI)

24 ಇಗೋ, ಮುತ್ತಿಗೆಯ ದಿಬ್ಬಗಳು, ಪಟ್ಟಣವನ್ನು ಆಕ್ರವಿುಸುವದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗಕ್ಷಾಮವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ಇಗೋ, ಮುತ್ತಿಗೆಯ ದಿಬ್ಬಗಳು! ನಗರವನ್ನು ಆಕ್ರಮಿಸಲು ಬಂದುಬಿಟ್ಟಿದ್ದಾರೆ. ಖಡ್ಗ-ಕ್ಷಾಮ-ವ್ಯಾಧಿಗಳಿಂದ ನಗರವು ವಿರೋಧಿಗಳಾದ ಬಾಬಿಲೋನಿಯರ ಕೈ ಹಿಡಿತಕ್ಕೆ ಸಿಕ್ಕಿಹೋಗಿದೆ. ನೀವು ನುಡಿದಂತೆ ನೆರವೇರಿದೆ. ನಿಮ್ಮ ಕಣ್ಣಿಗೆ ಎಲ್ಲ ಬಟ್ಟಬಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ. ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರ ಕೈಯಲ್ಲಿ ಖಡ್ಗ, ಕ್ಷಾಮ, ವ್ಯಾಧಿಗಳ ಮೂಲಕವಾಗಿ ಒಪ್ಪಿಸಲಾಗಿದೆ. ನೀನು ಹೇಳಿದ್ದು ಉಂಟಾಯಿತು. ಇಗೋ, ನೀನು ಅದನ್ನು ನೋಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:24
35 ತಿಳಿವುಗಳ ಹೋಲಿಕೆ  

ದಿಬ್ಬಗಳಿಗೂ ಕತ್ತಿಗಳಿಗೂ [ಅಡ್ಡವಾಗಿ ಗೋಡೆಯನ್ನು ಕಟ್ಟಲು] ಕೆಡವಿರುವ ಈ ಊರಿನವರ ಮನೆಗಳ ವಿಷಯವಾಗಿಯೂ ಯೆಹೂದದ ಅರಸರ ಉಪ್ಪರಿಗೆಗಳ ವಿಷಯವಾಗಿಯೂ ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ -


ಹೀಗಿರಲು ಖಡ್ಗಕ್ಷಾಮವ್ಯಾಧಿಗಳಿಂದ ಕ್ಷೀಣವಾಗಿ ಬಾಬೆಲಿನ ಅರಸನ ಕೈವಶವಾಗಿದೆ ಎಂದು ನೀವು ಹೇಳುವ ಈ ಪಟ್ಟಣದ ವಿಷಯವಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ಈಗ ಇಂತೆನ್ನುತ್ತಾನೆ -


ಆತನನ್ನು ಕೋಪಗೊಳಿಸಿದರೆ ನೀವು ಯೊರ್ದನ್ ಹೊಳೆಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ಕರೆದು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿವಸ ಇರದೆ ನಾಶವಾಗಿಯೇ ಹೋಗುವಿರಿ.


ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ವಿಧಿಗಳೂ ನಿಮ್ಮ ಪಿತೃಗಳನ್ನು ಹಿಂದಟ್ಟಿ ಹಿಡಿದು ನಿತ್ಯವಾಗಿವೆಯಷ್ಟೆ; ಅವರು ತಿರುಗಿಕೊಂಡು - ಸೇನಾಧೀಶ್ವರ ಯೆಹೋವನು ನಮ್ಮ ದುರ್ಮಾರ್ಗ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ ಅಂದುಕೊಂಡರು.


ಯೆರೂಸಲೇಮ್ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ ಬಾಯಿಬಿಟ್ಟು ಸಂಹಾರಧ್ವನಿಗೈದು ಕೂಗಿ ಹೌದು ಭಿತ್ತಿಭೇದಕಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ ದಿಬ್ಬಹಾಕಿ ಒಡ್ಡುಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಖಡ್ಗ ಕ್ಷಾಮ ದುಷ್ಟಮೃಗ ವ್ಯಾಧಿ ಎಂಬೀ ನಾಲ್ಕು ಬಾಧೆಗಳನ್ನು ಯೆರೂಸಲೇವಿುನ ಮೇಲೆ ಒಟ್ಟಿಗೆ ತಂದು ಜನಪಶುಗಳನ್ನು ನಿರ್ಮೂಲಮಾಡುವಾಗ ಹೇಳತಕ್ಕದ್ದೇನು!


ಯೆಹೂದದ ಅರಸನಾದ ಚಿದ್ಕೀಯನು ಯೆರೆಮೀಯನಿಗೆ - ನೀನು ಪ್ರವಾದನೆ ಮಾಡುತ್ತಾ - ಯೆಹೋವನು ಇಂತೆನ್ನುತ್ತಾನೆ - ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರವಿುಸುವನು;


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.


ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೆಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರುಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿವಸ


ಕರ್ತನಾದ ಯೆಹೋವನೇ, ನೀನು ನನಗೆ - ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ ಎಂದು ಅಪ್ಪಣೆಕೊಟ್ಟಿ; ನೋಡು, ಪಟ್ಟಣವು ಕಸ್ದೀಯರ ಕೈಸೇರಿದೆಯಲ್ಲಾ.


ನಾನು ಅವರಿಗೂ ಅವರ ಪಿತೃಗಳಿಗೂ ಅನುಗ್ರಹಿಸಿದ ದೇಶದೊಳಗಿಂದ ಅವರು ನಿರ್ಮೂಲರಾಗುವ ತನಕ ಖಡ್ಗಕ್ಷಾಮವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು.


ಅವರು ಘೋರಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಹೂಣಿಡರು; ಅವರು ಭೂವಿುಯ ಮೇಲೆ ಗೊಬ್ಬರವಾಗುವರು; ಖಡ್ಗವೂ ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂವಿುಯ ಜಂತುಗಳಿಗೂ ಆಹಾರವಾಗುವವು.


ಯೋವಾಬನ ಕಡೆಯವರು ಆಬೇಲ್ಬೇತ್ಮಾಕಾ ಊರಿಗೆ ಮುತ್ತಿಗೆಹಾಕಿ ಅದಕ್ಕೆ ಎದುರಾಗಿ ಊರುಗೋಡೆಗೆ ತಗಲುವ ಒಂದು ಮಣ್ಣಿನ ದಿಬ್ಬವನ್ನು ಮಾಡಿ ಗೋಡೆಯನ್ನು ಕೆಡವಿಬಿಡುವದಕ್ಕೆ ಪ್ರಯತ್ನಿಸಿದರು.


ಆತನು ಅಶ್ಶೂರದ ಅರಸನನ್ನು ಕುರಿತು - ಅವನು ಪಟ್ಟಣವನ್ನು ಸಮೀಪಿಸುವದಿಲ್ಲ, ಅದಕ್ಕೆ ಬಾಣವನ್ನೆಸೆಯುವದಿಲ್ಲ, ಗುರಾಣಿ ಹಿಡಿದಿರುವವರನ್ನು ಕಳುಹಿಸುವದಿಲ್ಲ, ಅದನ್ನು ಕೆಡವಿಬಿಡುವದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವದಿಲ್ಲ.


ಸೇನಾಧೀಶ್ವರನಾದ ಯೆಹೋವನು ಹೀಗೆ ಹೇಳಿದ್ದಾನೆ - ಸುತ್ತಣ ಮರಗಳನ್ನು ಕಡಿದುಬಿಡಿರಿ, ಯೆರೂಸಲೇವಿುನೆದುರಿಗೆ ದಿಬ್ಬ ಹಾಕಿರಿ; ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದೋಚಾಟವೇ ತುಂಬಿದೆ.


ಮತ್ತು ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ ಆದಾಯವನ್ನೂ ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬೆಲಿಗೆ ತೆಗೆದುಕೊಂಡು ಹೋಗುವರು.


ಆಹಾ, ನಾನು ಅವರ ಮೇಲೆ ಖಡ್ಗಕ್ಷಾಮವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು,


ನಾನು ಖಡ್ಗಕ್ಷಾಮವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಸಮಸ್ತರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಬೆರಗಿನ ಸಿಳ್ಳು, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.


ಆ ಅರಸನು ಚಿದ್ಕೀಯನನ್ನು ಬಾಬೆಲಿಗೆ ಒಯ್ದುಕೊಂಡುಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು; ನೀವು ಕಸ್ದೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬದಾಗಿ ಏಕೆ ನುಡಿಯುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದ್ದನು.


ಆದಕಾರಣ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರವಿುಸುವನು;


ಆದಕಾರಣ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ - ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗವ್ಯಾಧಿಕ್ಷಾಮಗಳಿಗೆ ಗುರಿಯಾಗುವಂತೆ ಬಿಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.


ಅವನು ಚಿದ್ಕೀಯನ ಆಳಿಕೆಯ ಒಂಭತ್ತನೆಯ ವರುಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸರ್ವಸೈನ್ಯಸಹಿತನಾಗಿ ಯೆರೂಸಲೇವಿುಗೆ ಬಂದು ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ


ಅವನು ಬೈಲುಭೂವಿುಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಹತಿಸಿ ನಿನಗೆ ವಿರುದ್ಧವಾಗಿ ಒಡ್ಡುಕಟ್ಟಿ ದಿಬ್ಬಹಾಕಿ


ಅರಸರನ್ನು ಧಿಕ್ಕರಿಸುವರು; ಸರದಾರರು ಅವರ ಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ತಾತ್ಸಾರಮಾಡಿ ದೂಳದಿಬ್ಬಹಾಕಿ ಆಕ್ರವಿುಸುವರು.


ಆ ನಕ್ಷೆಯ ಸುತ್ತುಮುತ್ತಲು ದಿಬ್ಬಹಾಕಿ ಒಡ್ಡುಕಟ್ಟಿ ಪಾಳೆಯಗಳನ್ನು ಮಾಡಿ ಭಿತ್ತಿಭೇದಕಯಂತ್ರಗಳನ್ನು ನಿಲ್ಲಿಸಿ ಅದನ್ನು ಮುತ್ತು.


ನಾನು ದೊಬ್ಬಿಬಿಡುವೆನು, ದೊಬ್ಬಿಬಿಡುವೆನು, ದೊಬ್ಬಿಬಿಡುವೆನು; [ರಾಜ್ಯಕ್ಕೆ] ಬಾಧ್ಯನು ಬರುವದರೊಳಗೆ ಒಂದೂ ಇದ್ದಂತಿರದು; ಅವನಿಗೇ ರಾಜ್ಯವನ್ನು ವಹಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು