ಯೆರೆಮೀಯ 32:25 - ಕನ್ನಡ ಸತ್ಯವೇದವು J.V. (BSI)25 ಕರ್ತನಾದ ಯೆಹೋವನೇ, ನೀನು ನನಗೆ - ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ ಎಂದು ಅಪ್ಪಣೆಕೊಟ್ಟಿ; ನೋಡು, ಪಟ್ಟಣವು ಕಸ್ದೀಯರ ಕೈಸೇರಿದೆಯಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಕರ್ತನಾದ ಯೆಹೋವನೇ, ನೀನು ನನಗೆ, ‘ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ’ ಎಂದು ಅಪ್ಪಣೆಕೊಟ್ಟೆ; ನೋಡು, ಪಟ್ಟಣವು ಕಸ್ದೀಯರ ಕೈಸೇರಿದೆಯಲ್ಲಾ” ಎಂದು ವಿಜ್ಞಾಪನೆ ಮಾಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ದೇವರಾದ ಸರ್ವೇಶ್ವರಾ, ಸಾಕ್ಷಿಗಳನ್ನು ಕರೆಯಿಸಿ, ಕ್ರಯಕೊಟ್ಟು ಹೊಲವನ್ನು ಕೊಂಡುಕೊ ಎಂದು ನೀವು ನನಗೆ ಆಜ್ಞಾಪಿಸಿದಿರಿ. ಆದರೆ ನೋಡಿ, ನಗರವು ಬಾಬಿಲೋನಿಯರ ಕೈವಶವಾಗಲಿದೆ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ನನ್ನ ಒಡೆಯನಾದ ಯೆಹೋವನೇ, ಆ ದುರ್ಬಟನೆಗಳೆಲ್ಲಾ ಸಂಭವಿಸುತ್ತಿವೆ. ಆದರೆ ಈಗ ನೀನು ‘ಯೆರೆಮೀಯನೇ, ಬೆಳ್ಳಿಯನ್ನು ಕೊಟ್ಟು ಹೊಲವನ್ನು ಕೊಂಡುಕೋ ಮತ್ತು ಈ ಖರೀದಿಗೆ ಸಾಕ್ಷಿಯಾಗಿ ಕೆಲವು ಜನರನ್ನು ಆರಿಸಿಕೋ’ ಎಂದು ಹೇಳುತ್ತಿರುವಿಯಲ್ಲ. ಬಾಬಿಲೋನಿನ ಸೈನ್ಯವು ನಗರವನ್ನು ಸ್ವಾಧೀನಪಡಿಸಿಕೊಳ್ಳಲು ಸಿದ್ಧವಾಗಿ ನಿಂತಿರುವಾಗ ನೀನು ಇದನ್ನು ಹೇಳುತ್ತಿರುವಿಯಲ್ಲ, ಏಕೆ? ಏಕೆ ನಾನು ಹಣವನ್ನು ಹೀಗೆ ವ್ಯರ್ಥವಾಗಿ ಕಳೆದುಕೊಳ್ಳಬೇಕು?” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದರೂ ಓ ಸಾರ್ವಭೌಮ ಯೆಹೋವ ದೇವರೇ, ನೀನು ನನಗೆ, ‘ಹೊಲವನ್ನು ಹಣಕ್ಕೆ ಕೊಂಡುಕೋ, ಸಾಕ್ಷಿಗಳನ್ನು ಇಡು,’ ಎಂದು ಹೇಳಿದ್ದೀ. ಆದರೂ ಪಟ್ಟಣವು ಬಾಬಿಲೋನಿಯರ ಕೈಯಲ್ಲಿ ಒಪ್ಪಿಸಲಾಗಿದೆಯಲ್ಲಾ?” ಅಧ್ಯಾಯವನ್ನು ನೋಡಿ |
ಆದಕಾರಣ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ - ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗವ್ಯಾಧಿಕ್ಷಾಮಗಳಿಗೆ ಗುರಿಯಾಗುವಂತೆ ಬಿಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.