ಯೆರೆಮೀಯ 32:29 - ಕನ್ನಡ ಸತ್ಯವೇದವು J.V. (BSI)29 ಮತ್ತು ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಯಿಕ್ಕಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಈ ನಗರಕ್ಕೆ ಮುತ್ತಿಗೆಹಾಕಲಿರುವ ಬಾಬಿಲೋನಿಯರು ಇದರೊಳಗೆ ನುಗ್ಗಿ ಬೆಂಕಿಯಿಕ್ಕುವರು. ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳ್‍ದೇವತೆಗೆ ಧೂಪಾರತಿ ಎತ್ತಿದ್ದಾರೋ, ಅನ್ಯದೇವರುಗಳಿಗೆ ಪಾನನೈವೇದ್ಯಗಳನ್ನು ಅರ್ಪಿಸಿದ್ದಾರೋ, ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ನಗರವನ್ನು ಸುಟ್ಟುಬಿಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಬಾಬಿಲೋನಿನ ಸೈನ್ಯವು ಈಗಾಗಲೇ ಜೆರುಸಲೇಮ್ ನಗರದ ಮೇಲೆ ಧಾಳಿ ಮಾಡುತ್ತಿದೆ. ಸೈನಿಕರು ಬೇಗನೆ ನಗರವನ್ನು ಪ್ರವೇಶಿಸಿ ಅದಕ್ಕೆ ಬೆಂಕಿಹಚ್ಚಿ ಸುಟ್ಟುಹಾಕುವರು. ಜೆರುಸಲೇಮಿನ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರಾದ ಬಾಳನಿಗೆ ನೈವೇದ್ಯವನ್ನು ಅರ್ಪಿಸಿ ನಾನು ಕೋಪಿಸಿಕೊಳ್ಳುವಂತೆ ಮಾಡಿದ ಕೆಲವು ಮನೆಗಳು ಈ ನಗರದಲ್ಲಿವೆ. ಅದಲ್ಲದೆ ಕೆಲವು ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸಿರುವರು. ಬಾಬಿಲೋನಿನ ಸೈನ್ಯವು ಆ ಮನೆಗಳನ್ನು ಸುಟ್ಟುಹಾಕುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರು ಬಂದು, ಈ ಪಟ್ಟಣಕ್ಕೆ ಬೆಂಕಿ ಹಚ್ಚಿ; ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವನ್ನರ್ಪಿಸಿ, ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ, ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯ್ದಿದ್ದಾರೋ ಅವುಗಳನ್ನೂ ಸುಟ್ಟುಬಿಡುವರು. ಅಧ್ಯಾಯವನ್ನು ನೋಡಿ |
ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವೆವು ಎಂದು ನಾವು ಮಾಡಿಕೊಂಡ ಹರಕೆಗಳನ್ನು ಖಂಡಿತವಾಗಿ ತೀರಿಸುವೆವು ಎಂಬದಾಗಿ ನೀವೂ ನಿಮ್ಮ ಹೆಂಡಿರೂ ಬಾಯಿಂದ ಪ್ರತಿಜ್ಞೆಮಾಡಿ ಕೈಯಿಂದ ನೆರವೇರಿಸಿದ್ದೀರಲ್ಲಾ; ನಿಮ್ಮ ಹರಕೆಗಳನ್ನು ತೀರಿಸೇ ತೀರಿಸಿರಿ, ನೆರವೇರಿಸೇ ನೆರವೇರಿಸಿರಿ!