Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:31 - ಕನ್ನಡ ಸತ್ಯವೇದವು J.V. (BSI)

31 ಈ ಪಟ್ಟಣವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪ ರೋಷಗಳಿಗೆ ಆಸ್ಪದವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಈ ಪಟ್ಟಣವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪರೋಷಗಳಿಗೆ ಆಸ್ಪದವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಈ ನಗರವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪತಾಪಗಳಿಗೆ ಕಾರಣವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಜೆರುಸಲೇಮ್ ನಗರವು ನಿರ್ಮಾಣಗೊಂಡಂದಿನಿಂದ ಇಂದಿನವರೆಗೂ ಈ ನಗರದ ಜನರು ನನಗೆ ಕೋಪ ಬರುವಂತೆ ಮಾಡಿದ್ದಾರೆ. ಈ ನಗರವು ನನಗೆ ಅತಿಕೋಪ ಬರುವಂತೆ ಮಾಡಿದೆ. ಆದ್ದರಿಂದ ಕಣ್ಣಿಗೆ ಕಾಣದಂತೆ ಅದನ್ನು ಅಳಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಈ ಪಟ್ಟಣವು ಕಟ್ಟಿದ ದಿನದಿಂದ ಈ ದಿನದವರೆಗೂ ನನ್ನ ಕೋಪಕ್ಕೂ, ನನ್ನ ಉಗ್ರಕ್ಕೂ ಗುರಿಯಾಗಿತ್ತು. ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:31
17 ತಿಳಿವುಗಳ ಹೋಲಿಕೆ  

ಆತನು - ಇಸ್ರಾಯೇಲ್ಯರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು; ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮಮಹತ್ತಿಗೋಸ್ಕರ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು ಎಂದು ಹೇಳಿದನು.


ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.


ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ; ನೀವು ನನ್ನಿಂದ ಅಟ್ಟಲ್ಪಟ್ಟು ದೇಶಭ್ರಷ್ಟರಾಗಿ ಅಳಿದುಹೋಗುವದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವದು.


ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡ ಪ್ರೇರಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧ ರಕ್ತದಿಂದ ತುಂಬಿಸಿದನು.


ಆಕೆಯು ಪಾಪಮಾಡಿ ಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಬೆನ್ನಮರೆಯಲ್ಲಿ ನರಳಾಡುತ್ತಾಳೆ.


ಇದಲ್ಲದೆ ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ಏರ್ಪಡಿಸಿದ ಪೂಜಾಸ್ಥಳವನ್ನೂ ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿದನು.


ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ನಿನ್ನ ಪವಿತ್ರಪರ್ವತವೂ ಆದ ಯೆರೂಸಲೇವಿುನ ಮೇಲಣ ನಿನ್ನ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪಿತೃಗಳ ಪಾಪಾಪರಾಧಗಳ ನಿವಿುತ್ತ ಯೆರೂಸಲೇಮೂ ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.


ಇಗೋ, ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪಿತೃಗಳಿಗೆ ದಯಪಾಲಿಸಿದ ಪಟ್ಟಣವನ್ನೂ ಭಾರವೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಟ್ಟು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು