ಯೆರೆಮೀಯ 32:32 - ಕನ್ನಡ ಸತ್ಯವೇದವು J.V. (BSI)32 ಅರಸರು, ಪ್ರಧಾನರು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಯೆರೂಸಲೇವಿುನ ನಿವಾಸಿಗಳು, ಅಂತು ಎಲ್ಲಾ ಇಸ್ರಾಯೇಲ್ಯರೂ ಯೆಹೂದ್ಯರೂ ನನ್ನನ್ನು ರೇಗಿಸತಕ್ಕ ಅಧರ್ಮವನ್ನು ತುಂಬಾ ಮಾಡಿದ್ದರಿಂದ ನಾನು ಈ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅರಸರು, ಪ್ರಧಾನರು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಯೆರೂಸಲೇಮಿನ ನಿವಾಸಿಗಳು, ಅಂತು ಎಲ್ಲಾ ಇಸ್ರಾಯೇಲರೂ ಮತ್ತು ಯೆಹೂದ್ಯರೂ ನನ್ನನ್ನು ರೇಗಿಸತಕ್ಕ ಅಧರ್ಮವನ್ನು ತುಂಬಾ ಮಾಡಿದ್ದರಿಂದ ನಾನು ಈ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅದರ ಅರಸರು, ಮಂತ್ರಿಗಳು, ಯಾಜಕರು, ಪ್ರವಾದಿಗಳು, ಜುದೇಯದ ಪ್ರಜೆಗಳು, ಜೆರುಸಲೇಮಿನ ನಿವಾಸಿಗಳು, ಹೀಗೆ ಎಲ್ಲ ಇಸ್ರಯೇಲರೂ ಯೆಹೂದ್ಯರೂ ಅಧರ್ಮವನ್ನು ಹೇರಳವಾಗಿಮಾಡಿ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ಈ ನಗರವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂದಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಇಸ್ರೇಲಿನ ಮತ್ತು ಯೆಹೂದದ ಜನರು ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನಾನು ಜೆರುಸಲೇಮ್ ನಗರವನ್ನು ನಾಶಮಾಡುತ್ತೇನೆ. ಜನರು, ರಾಜರು, ಮುಂದಾಳುಗಳು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಜೆರುಸಲೇಮಿನ ನಿವಾಸಿಗಳು ಇವರೆಲ್ಲರೂ ನನಗೆ ಕೋಪ ಬರುವಂತೆ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಇಸ್ರಾಯೇಲರೂ, ಯೆಹೂದದ ಮಕ್ಕಳೂ, ಅವರೂ, ಅವರ ಅರಸರೂ, ಅವರ ಪ್ರಧಾನರೂ, ಅವರ ಯಾಜಕರೂ, ಅವರ ಪ್ರವಾದಿಗಳೂ, ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದರು ಅಧ್ಯಾಯವನ್ನು ನೋಡಿ |