Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:33 - ಕನ್ನಡ ಸತ್ಯವೇದವು J.V. (BSI)

33 ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲೊಲ್ಲದೆ ನನಗೆ ಕಿವಿಗೊಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲಿಲ್ಲ ಮತ್ತು ನನಗೆ ಕಿವಿಗೊಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವರು ನನಗೆ ಅಭಿಮುಖರಾಗದೆ ಬೆನ್ನುಮಾಡಿದ್ದಾರೆ. ನಾನು ಅವರಿಗೆ ಎಡೆಬಿಡದೆ ಬೋಧಿಸುತ್ತಾ ಬಂದರೂ ನನ್ನ ಉಪದೇಶವನ್ನು ಅಂಗೀಕರಿಸಲಿಲ್ಲ, ನನಗೆ ಕಿವಿಗೊಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “ಆ ಜನರು ಸಹಾಯಕೋರಿ ನನ್ನಲ್ಲಿಗೆ ಬರಬೇಕಾಗಿತ್ತು. ಆದರೆ ಅವರು ನನಗೆ ವಿಮುಖರಾದರು. ನಾನು ಮತ್ತೆಮತ್ತೆ ಅವರಿಗೆ ಬುದ್ಧಿಕಲಿಸುವ ಪ್ರಯತ್ನ ಮಾಡಿದೆ. ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ. ನಾನು ಅವರನ್ನು ತಿದ್ದುವ ಪ್ರಯತ್ನ ಮಾಡಿದೆ, ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ನಾನು ಅವರಿಗೆ ಬೋಧಿಸಿದೆನು. ಪುನಃ ಬೋಧಿಸಿದೆನು. ಆದರೂ ಉಪದೇಶ ಹೊಂದುವುದಕ್ಕೆ ಅವರು ಕಿವಿಗೊಡಲಿಲ್ಲ ಅಥವಾ ಪ್ರತಿಕ್ರಿಯಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:33
17 ತಿಳಿವುಗಳ ಹೋಲಿಕೆ  

ನಾನು ಸಾವಕಾಶ ಮಾಡದೆ ನಿಮಗೆ ನುಡಿದ ಮಾತುಗಳನ್ನು ನೀವು ಕೇಳದೆ ನಿಮ್ಮನ್ನು ಕರೆದ ನನಗೆ ಉತ್ತರಕೊಡದೆ


ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರತಂದನು; ಆಹಾ, ಯೆಹೋವನ ಗುಡಿಯ ಬಾಗಿಲ ಮುಂದೆ ಮಂಟಪಕ್ಕೂ ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಗುಡಿಗೆ ಬೆನ್ನುಮಾಡಿ ಮೂಡಲಮುಖವಾಗಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು .


ನನ್ನ ಕಡೆಗೆ ಮುಖ ತಿರುಗಿಸದೆ ಬೆನ್ನುಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ - ಎದ್ದು ನಮ್ಮನ್ನುದ್ಧರಿಸು ಎಂದು ಮೊರೆಯಿಡುವರು.


ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಜನರೆಲ್ಲರು ಆತನ ಬಳಿಗೆ ಬಂದರು;


ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ - ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ ನಿಮ್ಮ ಪಿತೃಗಳಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಕೇಳಲೊಲ್ಲದ ನಿಮ್ಮ ಬಳಿಗೆ ನಾನು ಸಾವಕಾಶವಿಲ್ಲದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ -


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದರಿಯಲಿಲ್ಲ.


ನಿಮ್ಮ ಪಿತೃಗಳಾದರೋ ಗಮನಿಸಲೊಲ್ಲದೆ ಹೆಗಲುಕೊಡದೆ ಹೋದರು. ಕೇಳಬಾರದೆಂದು ಕಿವಿಮಂದ ಮಾಡಿಕೊಂಡರು.


[ಪ್ರವಾದಿಗಳು ] ಕರೆಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು; ಬಾಳ್‍ದೇವತೆಗಳಿಗೆ ಯಜ್ಞಮಾಡಿ ಬೊಂಬೆಗಳಿಗೆ ಧೂಪಹಾಕಿದರು.


ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ಸಾವಕಾಶಮಾಡದೆ ಕಳುಹಿಸುತ್ತಾ - ಅಹಹ, ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ ಎಂದು ಪ್ರಕಟಿಸುತ್ತಾ ಬಂದರೂ ಅವರು ಕಿವಿಗೊಟ್ಟು ಕೇಳಲಿಲ್ಲ,


ಶತ್ರುಗಳು ಮೇಲೆ ಬಿದ್ದಾಗ ನನ್ನ ಜನರನ್ನು ಮೂಡಣ ಗಾಳಿಯಿಂದಲೋ ಎಂಬಂತೆ ದಿಕ್ಕಾಪಾಲುಮಾಡುವೆನು. ಅವರ ವಿಪತ್ತಿನ ದಿನದಲ್ಲಿ ಅವರ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡುವೆನು.


ಕಾಡುಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನು ಬೋಧಿಸುತ್ತಾ ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ಧಿಯನ್ನು ನಮಗೆ ಕಲಿಸುತ್ತಾನೆ ಎಂದು ಹೇಳಿಕೊಳ್ಳುವದೇ ಇಲ್ಲ.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನೀನು ಹೋಗಿ ಯೆಹೂದ್ಯರಿಗೂ ಯೆರೂಸಲೇವಿುನ ನಿವಾಸಿಗಳಿಗೂ ಹೀಗೆ ಹೇಳು - [ಇದರಿಂದ] ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವದಿಲ್ಲವೋ ಎಂದು ಯೆಹೋವನು ಅನ್ನುತ್ತಾನೆ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ನನ್ನನ್ನು ಬೆನ್ನ ಹಿಂದಕ್ಕೆ ಎಸೆದು ಮರೆತುಬಿಟ್ಟದ್ದರಿಂದ ನಿನ್ನ ಪುಂಡಾಟದ ಮತ್ತು ಸೂಳೆತನದ ಫಲವನ್ನು ನೀನೂ ಅನುಭವಿಸಬೇಕು.


ಆದಕಾರಣ ನೀನು ಅವರಿಗೆ - ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ ಶಿಕ್ಷಿತರಾಗದೆ ಇರುವ ಜನವು ಇದೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ ಎಂದು ಹೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು