Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:38 - ಕನ್ನಡ ಸತ್ಯವೇದವು J.V. (BSI)

38 ಅವರು ನನಗೆ ಜನರಾಗಿರುವರು, ನಾನು ಅವರಿಗೆ ದೇವರಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಅವರು ನನಗೆ ಜನರಾಗಿರುವರು, ನಾನು ಅವರಿಗೆ ದೇವರಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಅವರು ನನಗೆ ಪ್ರಜೆಯಾಗಿರುವರು. ನಾನು ಅವರಿಗೆ ದೇವರಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಇಸ್ರೇಲರು ಮತ್ತು ಯೆಹೂದ್ಯರು ನನ್ನ ಭಕ್ತರಾಗಿರುವರು, ನಾನು ಅವರ ದೇವರಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಅವರು ನನ್ನ ಜನರಾಗಿರುವರು. ನಾನು ಅವರಿಗೆ ದೇವರಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:38
20 ತಿಳಿವುಗಳ ಹೋಲಿಕೆ  

ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು.


ಜಯಹೊಂದುವವನು ಇವುಗಳಿಗೆ ಬಾಧ್ಯನಾಗುವನು; ನಾನು ಅವನಿಗೆ ದೇವರಾಗಿರುವೆನು, ಅವನು ನನಗೆ ಮಗನಾಗಿರುವನು.


ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್‍ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು, ಅವರ ಹೃದಯದ ಮೇಲೆ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ಹೌದು, ನನ್ನ ವಾಸಸ್ಥಾನವು ಅವರ ಮಧ್ಯದಲ್ಲಿರುವದು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಇಂಥ ಸುಸ್ಥಿತಿಯಲ್ಲಿರುವ ಜನರು ಧನ್ಯರು; ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರು ಭಾಗ್ಯವಂತರು.


ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು - ಇವರು ನನ್ನ ಜನರು ಅಂದುಕೊಳ್ಳುವೆನು, ಅವರು - ನಮ್ಮ ದೇವರಾದ ಯೆಹೋವನೇ ಅನ್ನುವರು.


ನಾನು ನಿಮ್ಮ ಪಿತೃಗಳಿಗೆ ಅನುಗ್ರಹಿಸಿದ ದೇಶದಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.


ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ನೀವು ನನಗೆ ಜನರಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.


ಮತ್ತು ಇಸ್ರಾಯೇಲ್ ವಂಶದವರು ನಾನೇ ತಮ್ಮ ದೇವರಾದ ಯೆಹೋವನೆಂದು ಅಂದಿನಿಂದ ಯಾವಾಗಲೂ ತಿಳಿದುಕೊಳ್ಳುವರು.


ಯೆಹೋವನು ಇಂತೆನ್ನುತ್ತಾನೆ - ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದು ನಾನು ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.


ಆದರೆ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವರು. ಆದದರಿಂದ ದೇವರು ಅವರ ದೇವರೆನಿಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.


ನಾನು ಅವರನ್ನು ಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿ ಆಮೇಲೆ ಒಟ್ಟುಗೂಡಿಸಿ ಸ್ವದೇಶಕ್ಕೆ ತಂದದರಿಂದ ನಾನೇ ತಮ್ಮ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ಸೆರೆಯಲ್ಲಿ ಬಿಟ್ಟುಬಿಡೆನು.


ಧಾನ್ಯ, ದ್ರಾಕ್ಷೆ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನೂ ದನಕುರಿಗಳ ಚೊಚ್ಚಲುಮರಿಗಳನ್ನೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಯೆಹೋವನಲ್ಲೇ ಯಾವಾಗಲೂ ಭಯಭಕ್ತಿಯುಳ್ಳವರಾಗಿರುವದನ್ನು ಅಭ್ಯಾಸಮಾಡಿಕೊಳ್ಳುವಿರಿ.


ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರ ವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.


ಹೀಗಾದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಸಂಗಡ ಎಂದಿಗೂ ತಪ್ಪದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.


ಇಸ್ರಾಯೇಲ್ಯರು ಸದಾಕಾಲವೂ ನಿನ್ನ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದಿ; ಯೆಹೋವನೇ, ನೀನು ಅವರಿಗೆ ದೇವರಾದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು