Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:40 - ಕನ್ನಡ ಸತ್ಯವೇದವು J.V. (BSI)

40 ನಾನು ನಿಮಗೆ ಹಿತಮಾಡುವದನ್ನು ಬಿಟ್ಟು ವಿಮುಖನಾಗೆನು ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗೆನು’ ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 “‘ನಾನು ಇಸ್ರೇಲರ ಮತ್ತು ಯೆಹೂದ್ಯರ ಸಂಗಡ ಶಾಶ್ವತವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಗನುಸಾರವಾಗಿ ನಾನು ಅವರಿಗೆ ವಿಮುಖನಾಗುವುದೇ ಇಲ್ಲ. ನಾನು ಯಾವಾಗಲೂ ಅವರಿಗೆ ಒಳ್ಳೆಯವನಾಗಿರುತ್ತೇನೆ. ನನ್ನನ್ನು ಗೌರವಿಸಬೇಕೆಂಬ ಇಚ್ಛೆಯನ್ನು ಅವರಲ್ಲಿ ಬರಮಾಡುತ್ತೇನೆ. ಆಗ ಅವರೆಂದಿಗೂ ನನಗೆ ವಿಮುಖರಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಅವರಿಗೆ ಒಳ್ಳೆಯದನ್ನು ಮಾಡುವ ಹಾಗೆ ನಾನು ತಿರುಗಿಸಿಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ. ಅವರು ನನ್ನನ್ನು ಬಿಡದ ಹಾಗೆ ಭಯವನ್ನು ಅವರ ಹೃದಯದಲ್ಲಿ ಇಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:40
27 ತಿಳಿವುಗಳ ಹೋಲಿಕೆ  

ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.


ಎಲ್ಲಾ ಒಳ್ಳೇ ದಾನಗಳೂ ಕುಂದಿಲ್ಲದ ಎಲ್ಲಾ ವರಗಳೂ ಮೇಲಣಿಂದ ಸಕಲವಿಧವಾದ ಬೆಳಕಿಗೂ ಮೂಲಕಾರಣನಾದವನಿಂದ ಇಳಿದುಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ಸೂಚನೆಯೂ ಇಲ್ಲ.


ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನಷ್ಟೆ; ಇದು ಕರ್ತನಾದ ಯೆಹೋವನ ನುಡಿ.


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ - ಬನ್ನಿರಿ, ಯೆಹೋವನನ್ನು ಆಶ್ರಯಿಸಿ ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ ಎಂದು ಹೇಳುವರು.


ಶಾಶ್ವತವಾದ ಒಡಂಬಡಿಕೆಯನ್ನು ನಿಶ್ಚಯಪಡಿಸುವದಕ್ಕಾಗಿ ತನ್ನ ರಕ್ತವನ್ನು ಸುರಿಸಿಕೊಂಡು ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ ಶಾಂತಿದಾಯಕನಾದ ದೇವರು,


ಮೋಡಗಳಿಲ್ಲದ ಪ್ರಾತಃಕಾಲದಲ್ಲಿ ತೇಜೋಮಯನಾಗಿ ಉದಯಿಸಿ ಮೋಡಗಳನ್ನು ಚದರಿಸಿಬಿಟ್ಟು ಮಳೆಬಿದ್ದ ಭೂವಿುಯಿಂದ ಹುಲ್ಲನ್ನು ಮೊಳಿಸುವ ಸೂರ್ಯನಿಗೆ ಸಮಾನನಾಗಿದ್ದಾನೆ.


ಆತನಾದರೋ ಸದಾಕಾಲವಿರುವದರಿಂದ ಆತನ ಯಾಜಕತ್ವವು ಮತ್ತೊಬ್ಬರಿಗೆ ಹೋಗುವಂಥದಲ್ಲ.


ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನವು ಇನ್ನೂ ಇರುವಲ್ಲಿ ನಿಮ್ಮೊಳಗೆ ಯಾವನಾದರೂ ಆ ವಾಗ್ದಾನದ ಫಲವನ್ನು ಹೊಂದದೆ ತಪ್ಪುವವನಾದಾನೋ ಎಂದು ನಾವು ಭಯಪಡೋಣ.


ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ, ಕೊಳ್ಳೆಯನ್ನೂ ಅನ್ಯಾಯವನ್ನೂ ದ್ವೇಷಿಸುತ್ತೇನೆ; ಸತ್ಯಸಂಧತೆಯನ್ನು ಅನುಸರಿಸಿ ಇವರ ನಷ್ಟಕ್ಕೆ ಪ್ರತಿಫಲವನ್ನು ಕೊಟ್ಟು ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.


ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ ನಿಯಮವನ್ನು ಅತಿಕ್ರವಿುಸಿ ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂವಿುಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.


ನೀವು ಶೂರರಾಗಿ ಧೈರ್ಯದಿಂದಿರ್ರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವದಿಲ್ಲ, ಅಪಜಯಕ್ಕೆ ಗುರಿಪಡಿಸುವದೇ ಇಲ್ಲ ಎಂದು ಹೇಳಿದನು.


ಯೆಹೋವನು ತಾನೇ ನಿನ್ನ ಮುಂದುಗಡೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವದೇ ಇಲ್ಲ, ಕೈಬಿಡುವದಿಲ್ಲ; ಅಂಜಬೇಡ, ಧೈರ್ಯದಿಂದಿರು ಎಂದು ಹೇಳಿದನು.


ನೆರೆಹೊರೆಯವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು - ಯೆಹೋವನ ಜ್ಞಾನವನ್ನು ಪಡೆಯಿರಿ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು; ನಾನು ಅವರ ಅಪರಾಧವನ್ನು ಕ್ಷವಿುಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ. ಇದು ಯೆಹೋವನ ನುಡಿ.


ಮತ್ತು ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವದು; ನಾನು ಅವರನ್ನು ನೆಲೆಗೊಳಿಸಿ ವೃದ್ಧಿಮಾಡಿ ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.


ಸೇನಾಧೀಶ್ವರನಾದ ಯೆಹೋವದೇವರೇ, ನಮ್ಮನ್ನು ತಿರಿಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.


ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.


ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತವೆ; ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಯುಗಯುಗಾಂತರಗಳಲ್ಲಿ ನಡೆಯುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು