Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:42 - ಕನ್ನಡ ಸತ್ಯವೇದವು J.V. (BSI)

42 ಯೆಹೋವನು ಇಂತೆನ್ನುತ್ತಾನೆ - ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಯೆಹೋವನು ಇಂತೆನ್ನುತ್ತಾನೆ, “ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನ ಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 “ಸರ್ವೇಶ್ವರನಾದ ನನ್ನ ಮಾತು ಇವು: ಇಂಥ ಕಠಿಣವಾದ ಕಷ್ಟದುಃಖಗಳನ್ನು ಈ ಜನರ ಮೇಲೆ ಬರಮಾಡಿದಂತೆಯೇ ನಾನು ಇವರಿಗೆ ವಾಗ್ದಾನಮಾಡಿದ ಎಲ್ಲ ಒಳಿತನ್ನೂ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ನಾನು ಈ ಮಹಾವಿಪತ್ತನ್ನು ತಂದಿದ್ದೇನೆ. ಅದರಂತೆಯೇ ನಾನು ಅವರಿಗೆ ಒಳಿತನ್ನು ತರುವೆನು. ನಾನು ಅವರಿಗೆ ಒಳ್ಳೆಯದನ್ನು ಮಾಡುವದಾಗಿ ಮಾತುಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 “ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಹೇಗೆ ಈ ಜನರ ಮೇಲೆ ದೊಡ್ಡ ಕೇಡನ್ನು ಬರಮಾಡಿದೆನೋ, ಹಾಗೆಯೇ ನಾನು ವಾಗ್ದಾನ ಮಾಡಿದ ಸಮೃದ್ಧಿಯನ್ನೆಲ್ಲಾ ಅವರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:42
8 ತಿಳಿವುಗಳ ಹೋಲಿಕೆ  

ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ ಮಹಿಮೆಯೂ ಆನಂದದ ಬಿರುದೂ ಆಗುವದು.


ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ಇಸ್ರಾಯೇಲ್ ಯೆಹೂದ ವಂಶಗಳ ವಿಷಯವಾಗಿ ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರುವವು.


ಪರಾತ್ಪರನ ಬಾಯಿಮಾತಿನಿಂದಲೇ ಮೇಲು ಕೇಡುಗಳೆರಡೂ ಸಂಭವಿಸುತ್ತವಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು