Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:44 - ಕನ್ನಡ ಸತ್ಯವೇದವು J.V. (BSI)

44 ಬೆನ್ಯಮೀನ್ ಸೀಮೆ, ಯೆರೂಸಲೇವಿುನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲಗದ್ದೆಗಳಿಗೆ ಕ್ರಯಕೊಟ್ಟು ಪತ್ರಕ್ಕೆ ರುಜುಹಾಕಿ ಮುಚ್ಚಿ ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವೆನಷ್ಟೆ. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತ್ಯದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲ ಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ಸಹಿಹಾಕಿ ಮುಚ್ಚಿ, ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ಗುಲಾಮಗಿರಿಯ ದುರವಸ್ಥೆಯನ್ನು ತಪ್ಪಿಸಿ ಬರಮಾಡುವೆನು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಬೆನ್ಯಾಮಿನ್ ನಾಡು, ಜೆರುಸಲೇಮಿನ ಸುತ್ತಮುತ್ತಣ ಪ್ರದೇಶ, ಜುದೇಯದ ಊರುಗಳು, ಮಲೆನಾಡಿನ, ಕೆಳನಾಡಿನ, ದಕ್ಷಿಣ ಪ್ರಾಂತ್ಯದ ಊರುಗಳು ಈ ಎಲ್ಲ ಸ್ಥಳಗಳಲ್ಲಿ ಜನರು ಹೊಲಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ರುಜುಹಾಕಿ, ಮುದ್ರೆ ಒತ್ತಿ, ಸಾಕ್ಷಿ ಹಾಕಿಸಿ ಕೊಂಡುಕೊಳ್ಳುವರು. ನಾನು ನನ್ನ ಜನರನ್ನು ಗುಲಾಮಗಿರಿಯಿಂದ ಬಿಡಿಸಿ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಜನರು ಹಣ ಕೊಟ್ಟು ಭೂಮಿಯನ್ನು ಕೊಂಡುಕೊಳ್ಳುವರು. ಅವರು ಕರಾರುಪತ್ರಗಳಿಗೆ ಸಹಿಹಾಕುವರು. ಜನರು ಕ್ರಯಪತ್ರಗಳಿಗೆ ಸಹಿ ಹಾಕುವದನ್ನು ಬೇರೆಯವರು ನೋಡುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಲ್ಲಿ ಜನರು ಪುನಃ ಹೊಲಗಳನ್ನು ಕೊಂಡುಕೊಳ್ಳುವರು. ಜೆರುಸಲೇಮಿನ ಸುತ್ತಲಿನ ಪ್ರದೇಶದಲ್ಲಿ ಅವರು ಹೊಲಗಳನ್ನು ಕೊಂಡುಕೊಳ್ಳುವರು. ಅವರು ಯೆಹೂದ ಪ್ರದೇಶದ ಊರುಗಳಲ್ಲಿಯೂ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶದಲ್ಲಿಯೂ ದಕ್ಷಿಣದ ಮರಳುಗಾಡಿನಲ್ಲಿಯೂ ಹೊಲಗಳನ್ನು ಕೊಂಡುಕೊಳ್ಳುವರು. ನಾನು ನಿಮ್ಮ ಜನರನ್ನು ನಿಮ್ಮ ಪ್ರದೇಶಕ್ಕೆ ಪುನಃ ಕರೆದುಕೊಂಡು ಬರುವದರಿಂದ ಹೀಗಾಗುವುದು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಬೆನ್ಯಾಮೀನನ ದೇಶದಲ್ಲಿಯೂ, ಯೆರೂಸಲೇಮಿನ ಪ್ರದೇಶಗಳಲ್ಲಿಯೂ, ಯೆಹೂದದ ಪಟ್ಟಣಗಳಲ್ಲಿಯೂ, ದಕ್ಷಿಣ ಪಟ್ಟಣಗಳಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು, ಪತ್ರಗಳನ್ನು ಬರೆದು ಮುದ್ರೆಹಾಕಿ, ಸಾಕ್ಷಿಗಳನ್ನು ಇಟ್ಟುಕೊಳ್ಳುವರು. ಏಕೆಂದರೆ ನಾನು ಅವರ ಸೆರೆಯಿಂದ ಹಿಂದಿರುಗುವಂತೆ ಮಾಡುವೆನು,” ಎಂದು ಯೆಹೋವ ದೇವರು ನುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:44
17 ತಿಳಿವುಗಳ ಹೋಲಿಕೆ  

ಮತ್ತು ಯೆಹೂದದ ಪಟ್ಟಣಗಳು, ಯೆರೂಸಲೇವಿುನ ಸುತ್ತಣ ಪ್ರದೇಶಗಳು, ಬೆನ್ಯಾಮೀನ್ ಸೀಮೆ, ಇಳಕಲಿನ ಪ್ರದೇಶ, ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ, ಈ ಎಲ್ಲಾ ಸ್ಥಳಗಳಿಂದಲೂ ಸರ್ವಾಂಗಹೋಮಪಶು, ಯಜ್ಞಪಶು, ನೈವೇದ್ಯ, ಧೂಪ ಎಂಬೀ ಕೃತಜ್ಞತಾರ್ಪಣಗಳನ್ನು ಯೆಹೋವನ ಆಲಯಕ್ಕೆ ಜನರು ತೆಗೆದುಕೊಂಡು ಬರುವರು.


ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೇನು. ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.


ಉಲ್ಲಾಸ ಕೋಲಾಹಲ, ವಧೂವರರ ಸ್ವರ, ಇವುಗಳು ಕೇಳ ಬರುವವು. ಸೇನಾಧೀಶ್ವರನಾದ ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಯೆಹೋವನು, ಒಳ್ಳೆಯವನು, ಆತನ ಕೃಪೆಯು ಶಾಶ್ವತ ಎಂದು ಕೀರ್ತಿಸುತ್ತಾ ಕೃತಜ್ಞತಾಬಲಿಯನ್ನು ಯೆಹೋವನ ಆಲಯಕ್ಕೆ ತರುವವರ ಗಾನವೂ ಕಿವಿಗೆ ಬೀಳುವದು. ನಾನು ದೇಶವನ್ನು ದುರವಸ್ಥೆಯಿಂದ ತಪ್ಪಿಸಿ ಪೂರ್ವಸ್ಥಿತಿಗೆ ತರುವೆನು.


ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಊರ್ಜಿತಪಡಿಸುವೆನು.


ಪತ್ರಕ್ಕೆ ರುಜು ಹಾಕಿ ಮುಚ್ಚಿ [ಮುಚ್ಚಳಕ್ಕೆ] ಸಾಕ್ಷಿಗಳನ್ನು ಹಾಕಿಸಿ ತ್ರಾಸಿನಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆನು.


ಇಗೋ, ನಾನು ಕೋಪರೋಷ ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ; ಯೆರೂಸಲೇಮು ಜನನಿವಾಸವಾಗುವದು, ಯೆಹೂದದ ಪಟ್ಟಣಗಳು ತಿರಿಗಿ ಕಟ್ಟಲ್ಪಡುವವು, ಅಲ್ಲಿನ ಹಾಳನ್ನು ಹಸನುಮಾಡುವೆನು ಎಂದು ನಾನು ಮುಂತಿಳಿಸಿ


ದಕ್ಷಿಣದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.


ಇಗೋ ನಾನು ನನ್ನ ಜನರಾದ ಇಸ್ರಾಯೇಲ್ಯರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪಿತೃಗಳಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅವರ ಪಟ್ಟಣಗಳಲ್ಲಿಯೂ - ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ ಎಂದು ಮತ್ತೆ ಮಾತಾಡುವರು.


ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣ ಪ್ರಾಂತದ ಊರುಗಳು, ಬೆನ್ಯಾಮೀನ್ ಸೀಮೆ, ಯೆರೂಸಲೇವಿುನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಹಿಂಡುಗಳು ಎಣಿಸುವವನ ಕೈಗೆ ಲೆಕ್ಕವಾಗುವಂತೆ ಮತ್ತೆ ಹಾದುಹೋಗುವವು. ಇದು ಯೆಹೋವನ ನುಡಿ.


ಆಗ ದಕ್ಷಿಣಪ್ರಾಂತದವರು ಏಸಾವಿನ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವರು; ಇಳಕಲಿನ ಪ್ರದೇಶದವರು ಫಿಲಿಷ್ಟಿಯವನ್ನೂ ಎಫ್ರಾಯೀವಿುನ ಭೂವಿುಯನ್ನೂ ಸಮಾರ್ಯದ ನೆಲವನ್ನೂ ವಶಮಾಡಿಕೊಳ್ಳುವರು; ಬೆನ್ಯಾಮೀನಿನವರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು;


ಸೆರೆಹೋಗಿರುವ ಆ ದಂಡಿನ ಇಸ್ರಾಯೇಲ್ಯರು ಕಾನಾನ್ಯರ ದೇಶವನ್ನು ಚಾರೆಪತಿನವರೆಗೆ ತಮ್ಮದಾಗಿ ಮಾಡಿಕೊಳ್ಳುವರು; ಸೆಪಾರದಿನಲ್ಲಿ ಸೆರೆಯಾಗಿರುವ ಯೆರೂಸಲೇವಿುನವರು ದಕ್ಷಿಣಪ್ರಾಂತದ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ಆ ಕರಾವಳಿಯು ಯೆಹೂದವಂಶಶೇಷದವರ ಪಾಲಾಗುವದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು.


ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ ನೆಮ್ಮದಿಯಾಗಿಯೂ ಇದ್ದು ದಕ್ಷಿಣಪ್ರಾಂತದಲ್ಲಿಯೂ ಇಳಕಲಿನ ಪ್ರದೇಶದಲ್ಲಿಯೂ ಪ್ರಜೆಯು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಬಾರದೋ?


ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ ಅದರ ನಿವಾಸಗಳನ್ನು ಕರುಣಿಸುವೆನು; ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು