Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:7 - ಕನ್ನಡ ಸತ್ಯವೇದವು J.V. (BSI)

7 ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ನಿನ್ನ ಬಳಿಗೆ ಬಂದು - ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ; ಪರಾಧೀನವಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನ್ನದೇ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ನಿನ್ನ ಬಳಿಗೆ ಬಂದು ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ; ಪರಾಧೀನವಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನ್ನದೇ ಎಂದು ಹೇಳುವನು’” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನು ನಿನ್ನ ಬಳಿಗೆ ಬಂದು - ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ಪರರ ಪಾಲಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನಗಿದೆ,’ - ಎಂದು ಹೇಳುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆರೆಮೀಯನೇ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ಶೀಘ್ರದಲ್ಲಿ ನಿನ್ನ ಬಳಿಗೆ ಬಂದು, ‘ಯೆರೆಮೀಯನೇ, ಅನಾತೋತ್ ಪಟ್ಟಣದ ಬಳಿಯಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ನೀನು ನನ್ನ ಅತಿ ಸಮೀಪದ ಬಂಧುವಾದುದರಿಂದ ಅದನ್ನು ಕೊಂಡುಕೊ. ಆ ಹೊಲವನ್ನು ಕೊಂಡುಕೊಳ್ಳಲು ನಿನಗೆ ಅಧಿಕಾರವಿದೆ ಮತ್ತು ಅದು ನಿನ್ನ ಹೊಣೆಗಾರಿಕೆಯೂ ಹೌದು’ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾದ ಹನಮೇಲನು ನಿನ್ನ ಬಳಿಗೆ ಬಂದು, ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಏಕೆಂದರೆ ಅದನ್ನು ಕೊಂಡುಕೊಳ್ಳುವ ಹಾಗೆ ವಿಮೋಚಿಸುವ ಅಧಿಕಾರ ನಿನಗುಂಟು,’ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:7
15 ತಿಳಿವುಗಳ ಹೋಲಿಕೆ  

ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕವರ್ಗದವನೂ ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.


ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನಗೆ - ನಮ್ಮ ಕೈಯಿಂದ ನೀನು ಸಾಯಬಾರದಾಗಿದ್ದರೆ ಯೆಹೋವನ ಹೆಸರೆತ್ತಿ ಪ್ರವಾದಿಸಬೇಡ ಎಂದು ನಿನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವ ಅನಾತೋತಿನವರ ವಿಷಯದಲ್ಲಿ ನನ್ನ ತೀರ್ಮಾನವು ಇದೇ -


ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಸ್ಥಿತಿಯಲ್ಲಿ ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.


ಆದರೆ ಯೆಹೋವನು ಅವನಿಗೆ - ಯಾರೊಬ್ಬಾಮನ ಹೆಂಡತಿಯು ಅಸ್ವಸ್ಥನಾದ ತನ್ನ ಮಗನ ವಿಷಯದಲ್ಲಿ ದೈವೋತ್ತರವನ್ನು ಕೇಳುವದಕ್ಕೆ ತನ್ನನ್ನು ಅನ್ಯಳೆಂದು ತೋರ್ಪಡಿಸಿಕೊಂಡು ಬರುತ್ತಾಳೆಂದೂ ಆಕೆಗೆ ಇಂಥಿಂಥ ಉತ್ತರ ಕೊಡಬೇಕೆಂದೂ ತಿಳಿಸಿದ್ದನು.


ಇಸ್ರಾಯೇಲ್ಯರು ತಾವು ಹೊಂದುವ ಸ್ವಾಸ್ತ್ಯದಲ್ಲಿ ಕೆಲವು ಊರುಗಳನ್ನೂ ಆ ಊರುಗಳ ಸುತ್ತಲಿನ ಭೂವಿುಯನ್ನೂ ಲೇವಿಯರಿಗೆ ನಿವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು.


ಅವನ ದೊಡ್ಡಪ್ಪ ಚಿಕ್ಕಪ್ಪಂದಿರಾಗಲಿ ಇವರ ಮಕ್ಕಳಾಗಲಿ ಅಥವಾ ಸಮೀಪ ಬಂಧುಗಳಲ್ಲಿ ಯಾರೇಯಾಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು.


ಅವರು ತಮ್ಮ ಪಟ್ಟಣಗಳಿಗೆ ಸೇರಿರುವ ಹುಲ್ಲುಗಾವಲನ್ನು ಮಾರಲೇಕೂಡದು. ಅವು ಅವರಿಗೆ ಶಾಶ್ವತವಾದ ಸ್ವಾಸ್ತ್ಯ.


ಭೂವಿುಯನ್ನು ಶಾಶ್ವತವಾಗಿ ವಿಕ್ರಯಿಸಿಬಿಡಬಾರದು. ಯಾಕಂದರೆ ಆ ಭೂವಿು ನನ್ನದು; ನೀವಾದರೋ ಪರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳುಕೊಂಡವರೇ.


ಯೆರೆಮೀಯನು ತಿಳಿಸಿದ್ದು, ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -


ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನನ್ನ ಬಳಿಗೆ ಬಂದು - ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು, ಪರಾಧೀನವಾಗದಂತೆ ಕೊಂಡುಕೊಳ್ಳುವ ಹಕ್ಕೂ ನಿನ್ನದೇ; ನಿನಗಾಗಿಯೇ ಕೊಂಡುಕೋ ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು.


ನಿಮ್ಮಲ್ಲಿ ಮತ್ತೊಬ್ಬನ ಸ್ವಾಸ್ತ್ಯಭೂವಿು ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಅಧಿಕಾರವು ಕೊಟ್ಟವನಿಗೆ ಇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು