Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:9 - ಕನ್ನಡ ಸತ್ಯವೇದವು J.V. (BSI)

9 ಆಗ ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ನಾನು ಕೊಂಡುಕೊಂಡು ಅದರ ಕ್ರಯವಾಗಿ ಹದಿನೇಳು ತೊಲ ಬೆಳ್ಳಿಯನ್ನು ತೂಕ ಮಾಡಿ ಅವನಿಗೆ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ನಾನು ಕೊಂಡುಕೊಂಡು ಅದರ ಕ್ರಯವಾಗಿ ಹದಿನೇಳು ತೊಲಾ ಬೆಳ್ಳಿಯನ್ನು ತೂಕಮಾಡಿ ಅವನಿಗೆ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನನ್ನ ಚಿಕ್ಕಪ್ಪನ ಮಗ ಹನಮೇಲನಿಂದ ಅನಾತೋತಿನಲ್ಲಿರುವ ಆ ಹೊಲವನ್ನು ಕೊಂಡುಕೊಂಡೆ. ಅದರ ಕ್ರಯವಾಗಿ ಹದಿನೇಳು ತೊಲ ಬೆಳ್ಳಿಯನ್ನು ತೂಕಮಾಡಿ ಅವನಿಗೆ ಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ಕೊಂಡು ಅದರ ಕ್ರಯವಾಗಿ ಹದಿನೇಳು ಶೆಕೆಲ್‌ ಬೆಳ್ಳಿಯನ್ನು ತೂಕಹಾಕಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು, ಅವನಿಗೆ ಹದಿನೇಳು ಬೆಳ್ಳಿನಾಣ್ಯ ತೂಕಮಾಡಿ ಕ್ರಯಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:9
11 ತಿಳಿವುಗಳ ಹೋಲಿಕೆ  

ಅರಸನ ಚಿತ್ತ ಬಂದರೆ ಅವರನ್ನು ಸಂಹರಿಸಬೇಕು ಎಂಬ ರಾಯಸವು ಹೊರಡಲಿ; ಹಾಗೆ ಮಾಡಿದರೆ ನಾನು ರಾಜ ಭಂಡಾರಗಳಿಗೆ ಸೇರಿಸುವದಕ್ಕೋಸ್ಕರ ಹತ್ತು ಸಾವಿರ ತಲಾಂತು ಬೆಳ್ಳಿಯನ್ನು ತೂಕ ಮಾಡಿ ಉದ್ಯೋಗಸ್ಥರ ಕೈಗೆ ಒಪ್ಪಿಸುವೆನು ಎಂದು ಹೇಳಿದನು.


ಅವನು ಹಾದುಹೋಗುವಾಗ ಅವನಿಗೆ - ನಿನ್ನ ಸೇವಕನಾದ ನಾನು ಯುದ್ಧಕ್ಕೆ ಹೋದಾಗ ರಣರಂಗದಲ್ಲಿ ಒಬ್ಬನು ಇನ್ನೊಬ್ಬನನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದು - ನೀನು ಇವನನ್ನು ಕಾಯಬೇಕು; ಇವನು ತಪ್ಪಿಸಿಕೊಂಡರೆ ಇವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ನನ್ನದಾಗಿರುವದು; ಅಥವಾ ನೀನು ನನಗೆ ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು ಎಂದು ಆಜ್ಞಾಪಿಸಿದನು.


ನಾನು ಹದಿನೈದು ರೂಪಾಯಿಯನ್ನೂ ಒಂದುವರೆ ಹೋಮೆರ್ ಜವೆಗೋದಿಯನ್ನೂ ಕೊಟ್ಟು ಅವಳನ್ನು ಕೊಂಡುಕೊಂಡು ಅವಳಿಗೆ -


ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ರಯಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೇದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.


(ಅಷ್ಟರಲ್ಲಿ ವಿುದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು.) ಅವರು ಯೋಸೇಫನನ್ನು ಗುಂಡಿಯೊಳಗಿಂದ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ರೂಪಾಯಿಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು.


ಒಂಟೆಗಳು ಕುಡಿದ ನಂತರ ಅವನು ಆಕೆಯ ಮೂಗಿಗೆ ಅರ್ಧ ತೊಲೆಯ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನೂ ಆಕೆಯ ಕೈಗಳಿಗೆ ಹತ್ತು ತೊಲೆಯ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ಇಟ್ಟು - ನೀನು ಯಾರ ಮಗಳು? ದಯವಿಟ್ಟು ನನಗೆ ಹೇಳು.


ತಿವಿಸಿಕೊಂಡು ಸತ್ತವನು ದಾಸನು ಅಥವಾ ದಾಸಿಯು ಆಗಿದ್ದ ಪಕ್ಷಕ್ಕೆ ಅವರ ಯಜಮಾನನಿಗೆ ಮೂವತ್ತು ರೂಪಾಯಿ ಈಡುಕೊಡಿಸಬೇಕು, ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಿಸಬೇಕು.


ನನಗಿಂತ ಮುಂಚೆಯಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ [ದಿನಕ್ಕೆ] ನಾಲ್ವತ್ತು ರೂಪಾಯಿಯ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡಿಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವದರಿಂದ ಹಾಗೆ ಮಾಡದೆ ಆ ಗೋಡೆ ಕಟ್ಟುವದರಲ್ಲಿ ನಿರತನಾಗಿದ್ದೆನು.


ನಿನ್ನ ಆಹಾರವನ್ನು ತೂಕದ ಪ್ರಕಾರ ದಿನವೊಂದಕ್ಕೆ ಇಪ್ಪತ್ತು ತೊಲೆಯಂತೆ ತಿನ್ನು; ಆಗಾಗ್ಗೆ ಸ್ವಲ್ಪ ಸ್ವಲ್ಪ ತಿನ್ನಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು