ಯೆರೆಮೀಯ 33:11 - ಕನ್ನಡ ಸತ್ಯವೇದವು J.V. (BSI)11 ಉಲ್ಲಾಸ ಕೋಲಾಹಲ, ವಧೂವರರ ಸ್ವರ, ಇವುಗಳು ಕೇಳ ಬರುವವು. ಸೇನಾಧೀಶ್ವರನಾದ ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಯೆಹೋವನು, ಒಳ್ಳೆಯವನು, ಆತನ ಕೃಪೆಯು ಶಾಶ್ವತ ಎಂದು ಕೀರ್ತಿಸುತ್ತಾ ಕೃತಜ್ಞತಾಬಲಿಯನ್ನು ಯೆಹೋವನ ಆಲಯಕ್ಕೆ ತರುವವರ ಗಾನವೂ ಕಿವಿಗೆ ಬೀಳುವದು. ನಾನು ದೇಶವನ್ನು ದುರವಸ್ಥೆಯಿಂದ ತಪ್ಪಿಸಿ ಪೂರ್ವಸ್ಥಿತಿಗೆ ತರುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
[ಮಂಜೂಷವನ್ನು ಒಳಗಿಟ್ಟ] ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಒಬ್ಬನೋ ಎಂಬಂತೆ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವದಕ್ಕಾಗಿ ತುತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ ತಾಳ ಮೊದಲಾದ ವಾದ್ಯಗಳ ಧ್ವನಿಯೂ ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವದು ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.