Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:15 - ಕನ್ನಡ ಸತ್ಯವೇದವು J.V. (BSI)

15 ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಿಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿನ್ಯಾಯಗಳನ್ನು ನಿರ್ವಹಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಗಳನ್ನು ನಿರ್ವಹಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆ ಕಾಲದಲ್ಲಿ, ಆ ದಿನಗಳಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯೊಂದನ್ನು ಚಿಗುರಿಸುವೆನು. ಆತನು ನಾಡಿನಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ನಾನು ದಾವೀದನ ವಂಶದಿಂದ ಒಳ್ಳೆಯದಾದ ‘ಮೊಳಕೆಯೊಂದನ್ನು’ ಚಿಗುರಿಸುವೆನು. ಆ ಮೊಳಕೆಯು ದೇಶಕ್ಕೆ ಒಳ್ಳೆಯದನ್ನೂ ನೀತಿಯುತವಾದುದನ್ನೂ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ ‘ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು. ಆತನು ದೇಶದಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:15
21 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಯೆಹೋವನು ದಯಪಾಲಿಸುವ ಬೆಳೆಯಿಂದ ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಸೌಂದರ್ಯವೂ ಮಹಿಮೆಯೂ ಉಂಟಾಗುವವು, ದೇಶದ ಫಲದಿಂದ ಉನ್ನತಿಯೂ ಭೂಷಣವೂ ಲಭಿಸುವವು.


ಮಹಾಯಾಜಕನಾದ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಹಕಾರಿಗಳೂ ಕೇಳಿರಿ; ಇಗೋ, ಮೊಳಿಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೇನೆಂಬದಕ್ಕೆ ಇವರೇ ಮುಂಗುರುತು.


ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು; ಅದರ ಮೇಲೆ ಕೂತಿದ್ದವನಿಗೆ ನಂಬಿಗಸ್ತನೂ ಸತ್ಯವಂತನೂ ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ;


ಒಣನೆಲದೊಳಗೆ ಬೇರಿನಿಂದ ಹೊರಡುವ ಅಂಕುರದಂತೆಯೂ ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.


ಯೆಹೋವನು ಧರ್ಮಸ್ವರೂಪನಾಗಿರುವದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು.


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ನೀನು ಧರ್ಮವನ್ನು ಪ್ರೀತಿಸಿದಿ, ಅಧರ್ಮವನ್ನು ದ್ವೇಷಿಸಿದಿ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.


ಸತ್ಯತೆದೈನ್ಯನೀತಿಗಳನ್ನು ಸ್ಥಾಪಿಸುವದಕ್ಕಾಗಿ ಆಡಂಬರದಿಂದ ವಾಹನಾರೂಢನಾಗಿ ವಿಜಯೋತ್ಸವದೊಡನೆ ಹೊರಡೋಣವಾಗಲಿ. ನಿನ್ನ ಭುಜವೀರ್ಯದಿಂದ ಭಯಂಕರಕೃತ್ಯಗಳು ನಡೆಯುವವು.


ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ ಪ್ರಭುಗಳೂ ರಥಾಶ್ವಗಳನ್ನೇರಿದವರಾಗಿ ಈ ಪಟ್ಟಣದ ಬಾಗಿಲುಗಳನ್ನು ಪ್ರವೇಶಿಸುವರು; ಇವರು, ಇವರ ಪ್ರಧಾನರು, ಯೆಹೂದದ ಜನರು, ಯೆರೂಸಲೇವಿುನ ನಿವಾಸಿಗಳು, ಎಲ್ಲರೂ ಇಲ್ಲಿ ಸೇರುವರು; ಈ ಪಟ್ಟಣವು ನಿತ್ಯವೂ ನೆಲೆಯಾಗಿರುವದು.


ಅವರು ತಮ್ಮ ದೇವರಾದ ಯೆಹೋವನೆಂಬ ನನ್ನನ್ನೂ ನಾನು ಅವರಿಗಾಗಿ ಏರ್ಪಡಿಸುವ ರಾಜನಾದ ದಾವೀದನನ್ನೂ ಸೇವಿಸುವರು.


ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು - ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ನ್ಯಾಯನಿವಾಸವೆನಿಸಿಕೊಂಡ ಯೆಹೋವನಿಗೆ, ಹೌದು, ತಮ್ಮ ಪಿತೃಗಳ ನಿರೀಕ್ಷೆಯಾದ ಯೆಹೋವನಿಗೆ ಪಾಪಮಾಡಿದರಲ್ಲಾ ಅಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು