Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:18 - ಕನ್ನಡ ಸತ್ಯವೇದವು J.V. (BSI)

18 ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ಸರ್ವಾಂಗಹೋಮ, ನೈವೇದ್ಯ, ಯಜ್ಞ ಇವುಗಳನ್ನು ಮಾಡಲು ಲೇವಿಯರಾದ ಯಾಜಕರು ಇದ್ದೇ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ಸರ್ವಾಂಗಹೋಮ, ನೈವೇದ್ಯ, ಯಜ್ಞ ಇವುಗಳನ್ನು ಮಾಡಲು ಲೇವಿಯರಾದ ಯಾಜಕರು ಇದ್ದೇ ಇರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅದಕ್ಕೆ ಆ ಸಂತಾನದವರಲ್ಲಿ ಒಬ್ಬ ಗಂಡಸು ಇಲ್ಲದೆ ಇರನು. ಅಂತೆಯೇ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ದಹನಬಲಿಯನ್ನು, ನೈವೇದ್ಯವನ್ನು ಹಾಗೂ ಕಾಣಿಕೆಯನ್ನು ಒಪ್ಪಿಸತಕ್ಕ ಒಬ್ಬನು ಲೇವಿಕುಲದಲ್ಲಿ ಇದ್ದೇ ಇರುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯಾವಾಗಲೂ ಲೇವಿವಂಶದವರೇ ಯಾಜಕರಾಗಿರುವರು. ಆ ಯಾಜಕರು ಸದಾಕಾಲ ನನ್ನ ಎದುರಿನಲ್ಲಿ ನಿಂತುಕೊಂಡು ಸರ್ವಾಂಗಹೋಮ, ಧಾನ್ಯಸಮರ್ಪಣೆ ಮತ್ತು ಯಜ್ಞಗಳನ್ನು ಮಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅದಕ್ಕೆ ಆ ಸಂತಾನದವರಲ್ಲಿ ಒಬ್ಬ ಗಂಡಸು ಇಲ್ಲದೆ ಇರನು. ಅಂತೆಯೇ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ದಹನಬಲಿಯನ್ನು, ನೈವೇದ್ಯವನ್ನು ಹಾಗು ಕಾಣಿಕೆಯನ್ನು ಒಪ್ಪಿಸತಕ್ಕ ಒಬ್ಬನು ಲೇವಿಯರಾದ ಯಾಜಕರು ಇದ್ದೇ ಇರುವನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:18
21 ತಿಳಿವುಗಳ ಹೋಲಿಕೆ  

ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ ಯಜ್ಞಗಳೂ ನನಗೆ ಮೆಚ್ಚಿಕೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವದು.


ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದವನೂ ಆಗಿರುವಾತನಿಗೆ ಯುಗಯುಗಾಂತರಗಳಲ್ಲಿಯೂ ಘನ ಮಹತ್ವಗಳಿರಲಿ. ಆಮೆನ್.


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ.


ಯಾಕಂದರೆ ದೇವರ ವಿಷಯವಾಗಿ ಅವರಿಗೆ ತಿಳುವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಘನಪಡಿಸಲಿಲ್ಲ; ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ವಿಚಾರ ಮಾಡಿಮಾಡಿ ಫಲ ಕಾಣಲಿಲ್ಲ; ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಯಿತು.


ದೇವಾಲಯದ ಸೇವಕರಾದ ಲೇವಿಯರು ಊರುಗಳನ್ನು ಕಟ್ಟಿಕೊಂಡು ವಾಸಿಸುವಂತೆ ಇಪ್ಪತ್ತೈದು ಸಾವಿರ ಮೊಳ ಉದ್ದದ ಹತ್ತು ಸಾವಿರ ಮೊಳ ಅಗಲದ ಕ್ಷೇತ್ರವು ಅವರಿಗೆ ಸ್ವಾಸ್ತ್ಯವಾಗುವದು.


ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು; ಜನಾಂಗಗಳ ಆಸ್ತಿಯನ್ನನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.


ಯಾಜಕಸೇವೆಮಾಡುವ ಲೇವಿಯರಿಗಾಗಲಿ ಲೇವಿಕುಲದವರಲ್ಲಿ ಯಾರಿಗೇಯಾಗಲಿ ಇತರ ಇಸ್ರಾಯೇಲ್ಯರೊಡನೆ ಸ್ವಂತಕ್ಕಾಗಿ ಭೂಸ್ಥಿತಿ ದೊರೆಯುವದಿಲ್ಲವಷ್ಟೆ. ಯೆಹೋವನಿಗೆ ಸಮರ್ಪಿಸಲ್ಪಡುವ ಹೋಮದ್ರವ್ಯಗಳೂ ಆತನಿಗೋಸ್ಕರ ಪ್ರತ್ಯೇಕಿಸಲ್ಪಟ್ಟದ್ದೆಲ್ಲವೂ ಅವರಿಗೆ ಜೀವನಾಧಾರ.


ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿ; ಅವರು ಭೂವಿುಯ ಮೇಲೆ ಆಳುವರು ಎಂದು ಹೇಳಿದರು.


ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನಂದರೆ -


ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವದಕ್ಕೆ ನೀವು ಜಾಗರೂಕರಾಗಿರಬೇಕು; ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.


ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಮಂಜೂಷ ಹೊತ್ತಿರುವದನ್ನು ಕಂಡಕೂಡಲೆ ನೀವೂ ನಿಮ್ಮ ಸ್ಥಳವನ್ನು ಬಿಟ್ಟು ಅದರ ಹಿಂದೆ ಹೋಗಿರಿ.


ಅಂದಿನಿಂದ ನಿತ್ಯಸರ್ವಾಂಗಹೋಮವೂ ಅಮಾವಾಸ್ಯೆ, ಯೆಹೋವನ ಎಲ್ಲಾ ಉತ್ಸವದಿನ ಇವುಗಳಲ್ಲಿ ನೇಮಕವಾದ ಸರ್ವಾಂಗಹೋಮಗಳೂ ಜನರು ಸ್ವೇಚ್ಫೆಯಿಂದ ತಂದುಕೊಟ್ಟ ಯಜ್ಞಗಳೂ ಯೆಹೋವನಿಗೆ ಸಮರ್ಪಣೆಯಾಗುತ್ತಾ ಬಂದವು.


ಮತ್ತು ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -


ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆ ನಡಿಸುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.


ಆದರೆ ಇಸ್ರಾಯೇಲ್ಯರು ನನ್ನನ್ನು ತೊರೆದಾಗ ಲೇವಿಯರೂ ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ರಕ್ತಮೇದಸ್ಸುಗಳನ್ನು ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು; ಇದು ಕರ್ತನಾದ ಯೆಹೋವನ ನುಡಿ.


ರೇಕಾಬನ ಮಗನಾದ ಯೋನಾದಾಬನ ಸಂತಾನದವರೊಳಗೆ ನನ್ನ ಸಮ್ಮುಖಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು. ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇದನ್ನು ನುಡಿದಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು