Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:21 - ಕನ್ನಡ ಸತ್ಯವೇದವು J.V. (BSI)

21 ಆಗ ನನ್ನ ದಾಸನಾದ ದಾವೀದನಿಗೂ ನನ್ನ ಸೇವಕರಾಗಿರುವ ಲೇವಿಯರಾದ ಯಾಜಕರಿಗೂ ನಾನು ಮಾಡಿದ ನಿಬಂಧನೆಯು ನಿಂತುಹೋಗಿ ದಾವೀದನ ಸಿಂಹಾಸನಾಸೀನನಾಗಿ ಆಳತಕ್ಕ ಅವನ ಸಂತಾನದವನೊಬ್ಬನೂ ಉಳಿಯದೆ ಹೋದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ನನ್ನ ದಾಸನಾದ ದಾವೀದನಿಗೂ, ನನ್ನ ಸೇವಕರಾಗಿರುವ ಲೇವಿಯರಾದ ಯಾಜಕರಿಗೂ ನಾನು ಮಾಡಿದ ನಿಬಂಧನೆಯು ನಿಂತು ಹೋಗಿ ದಾವೀದನ ಸಿಂಹಾಸನಾಸೀನನಾಗಿ ಆಳತಕ್ಕ ಅವನ ಸಂತಾನದವನೊಬ್ಬನೂ ಉಳಿಯದೆ ಹೋದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೂ ನನ್ನ ಪರಿಚಾರಕರಾದ ಲೇವಿಕುಲದ ಯಾಜಕರೊಂದಿಗೂ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀವು ದಾವೀದನ ಮತ್ತು ಲೇವಿಯರ ಜೊತೆ ನಾನು ಮಾಡಿಕೊಂಡ ಒಡಂಬಡಿಕೆಯನ್ನೂ ಬದಲಾಯಿಸಬಹುದು. ಆಗ ದಾವೀದನ ವಂಶದವರು ರಾಜರಾಗಲಾರರು ಮತ್ತು ಲೇವಿಯರ ವಂಶದವರು ಯಾಜಕರಾಗಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೆ ನನ್ನ ಪರಿಚಾರಕರಾದ ಲೇವಿ ಕುಲದ ಯಾಜಕರೊಂದಿಗೆ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:21
16 ತಿಳಿವುಗಳ ಹೋಲಿಕೆ  

ನನ್ನ ಒಡಂಬಡಿಕೆಯನ್ನು ಭಂಗಪಡಿಸುವದಿಲ್ಲ; ನನ್ನ ಮಾತನ್ನು ಬದಲಿಸುವದಿಲ್ಲ.


ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ಮತ್ತು ಇಸ್ರಾಯೇಲ್ಯರಲ್ಲಿ ನಿನ್ನ ಸಂತಾನದವರು ತಪ್ಪದೆ ರಾಜ್ಯಾಧಿಕಾರ ನಡಿಸುವರು ಎಂಬದಾಗಿ ನಿನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


ಆದರೂ ಯೆಹೋವನು ದಾವೀದನಿಗೆ - ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವದಿಲ್ಲ ಎಂದು ಪ್ರಮಾಣಮಾಡಿ ಹೇಳಿದ್ದದರಿಂದ ದಾವೀದನ ಮನೆತನದವರನ್ನು ನಾಶಮಾಡುವದಕ್ಕೆ ಇಷ್ಟಪಡಲಿಲ್ಲ.


ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಸ್ಥಿರವಾಗಿರುತ್ತದಲ್ಲವೋ? ಆತನು ನನ್ನೊಡನೆ ಒಡಂಬಡಿಕೆಮಾಡಿಕೊಂಡಿದ್ದಾನೆ; ಅದು ಎಂದಿಗೂ ಬಿದ್ದು ಹೋಗುವದಿಲ್ಲ, ಎಲ್ಲಾ ವಿಷಯಗಳಲ್ಲಿ ಖಂಡಿತವಾಗಿದೆ. ನನ್ನ ರಕ್ಷಣೆಯ ಮೂಲವೂ ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?


ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿ; ಅವರು ಭೂವಿುಯ ಮೇಲೆ ಆಳುವರು ಎಂದು ಹೇಳಿದರು.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.


ಸಕಲಜನಾಂಗ ಕುಲಭಾಷೆಗಳವರು ಅವನನ್ನು ಸೇವಿಸಲೆಂದು ಅವನಿಗೆ ದೊರೆತನವೂ ಘನತೆಯೂ ರಾಜ್ಯವೂ ಕೊಡೋಣವಾದವು; ಅವನ ಆಳಿಕೆಯು ಅಂತ್ಯವಿಲ್ಲದ್ದು, ಶಾಶ್ವತವಾದದ್ದು; ಅವನ ರಾಜ್ಯವು ಎಂದಿಗೂ ಅಳಿಯದು.


ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ಸರ್ವಾಂಗಹೋಮ, ನೈವೇದ್ಯ, ಯಜ್ಞ ಇವುಗಳನ್ನು ಮಾಡಲು ಲೇವಿಯರಾದ ಯಾಜಕರು ಇದ್ದೇ ಇರುವರು.


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇವಿುಸಿದ್ದೇನೆ.


ಅವನ ಸಂತತಿಯು ಶಾಶ್ವತವಾಗಿ ಇರುವದು; ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು


ನಾನು ಸೃಷ್ಟಿಸುವ ನೂತನಾಕಾಶಮಂಡಲವೂ ನೂತನಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು