Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:7 - ಕನ್ನಡ ಸತ್ಯವೇದವು J.V. (BSI)

7 ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಊರ್ಜಿತಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಉದ್ಧರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಜುದೇಯದ ಹಾಗೂ ಇಸ್ರಯೇಲಿನ ಗುಲಾಮಗಿರಿಯನ್ನು ಬಿಡಿಸಿ ಮೊದಲಿನಂತೆಯೆ ಅವುಗಳನ್ನು ಪುನರ್‍ ನಿರ್ಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೂದ ಮತ್ತು ಇಸ್ರೇಲುಗಳಿಗೆ ಮತ್ತೊಮ್ಮೆ ಒಳ್ಳೆಯದಾಗುವಂತೆ ಮಾಡುವೆನು. ಅವರನ್ನು ನಾನು ಮೊದಲಿನಂತೆ ಶಕ್ತಿಶಾಲಿಗಳನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೂದದ ಸೆರೆಯನ್ನೂ, ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ, ಅವರನ್ನು ಮುಂಚಿನ ಹಾಗೆ ಕಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:7
28 ತಿಳಿವುಗಳ ಹೋಲಿಕೆ  

ಇಗೋ ನಾನು ನನ್ನ ಜನರಾದ ಇಸ್ರಾಯೇಲ್ಯರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪಿತೃಗಳಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ.


ಪೂರ್ವದಲ್ಲಿ ನಿನಗಿದ್ದಂಥ ನ್ಯಾಯಾಧಿಪತಿಗಳನ್ನೂ ಮಂತ್ರಾಲೋಚಕರನ್ನೂ ಪುನಃ ಒದಗಿಸಿಕೊಡುವೆನು; ಆಮೇಲೆ ನೀನು ಧರ್ಮಪುರಿ ಎಂತಲೂ ಸುವ್ರತನಗರಿ ಎಂತಲೂ ಅನ್ನಿಸಿಕೊಳ್ಳುವಿ.


ಬೆನ್ಯಮೀನ್ ಸೀಮೆ, ಯೆರೂಸಲೇವಿುನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲಗದ್ದೆಗಳಿಗೆ ಕ್ರಯಕೊಟ್ಟು ಪತ್ರಕ್ಕೆ ರುಜುಹಾಕಿ ಮುಚ್ಚಿ ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವೆನಷ್ಟೆ. ಇದು ಯೆಹೋವನ ನುಡಿ.


ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.


ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತದೇಶಗಳಿಂದಲೂ ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದನೋ ಅಲ್ಲಿಗೆ ತಿರಿಗಿ ಬರಮಾಡುವೆನು. ಇದು ಯೆಹೋವನ ನುಡಿ.


ನೀವು ಈ ದೇಶದಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವದಿಲ್ಲ; ನಾನು ನಿಮಗೆ ಮಾಡಿದ ಕೇಡಿಗೆ ಪಶ್ಚಾತ್ತಾಪಪಡುತ್ತೇನೆ.


ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೇನು. ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.


ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.


ಅವರ ಸಂತಾನವು ಪೂರ್ವದ ಸ್ಥಿತಿಯನ್ನು ಹೊಂದುವದು, ಅವರ ಸಮಾಜವು ನನ್ನ ಮುಂದೆ ನೆಲೆಯಾಗಿರುವದು, ಅವರನ್ನು ಬಾಧಿಸುವವರನ್ನೆಲ್ಲಾ ದಂಡಿಸುವೆನು.


ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ ಅದರ ನಿವಾಸಗಳನ್ನು ಕರುಣಿಸುವೆನು; ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವದು.


ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರಿಗಿ ಬರಮಾಡುವೆನು; ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವದಿಲ್ಲ.


ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ ತಮ್ಮ ತಮ್ಮ ಹಟ್ಟಿಗಳಿಗೆ ತಿರಿಗಿ ಬರಮಾಡುವೆನು; ಅವು ದೊಡ್ಡ ಪೀಳಿಗೆಯಾಗಿ ಹೆಚ್ಚುವವು.


ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರಿಗಿ ಬರಮಾಡು


ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದೀ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದೀ.


ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ಯೆಹೋವನು ದುರವಸ್ಥೆಯಿಂದ ತಪ್ಪಿಸಿದಾಗ ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲ್ಯರು ಹರ್ಷಿಸುವರು.


ಮತ್ತೊಮ್ಮೆ ಹೀಗೆ ಸಾರು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇನ್ನು ನನ್ನ ಪಟ್ಟಣಗಳಲ್ಲಿ ಶುಭವು ತುಂಬಿ ತುಳುಕುವದು; ಯೆಹೋವನು ಇನ್ನು ಚೀಯೋನನ್ನು ಸಂತೈಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.


ಆ ಕಾಲದಲ್ಲಿ ನಿಮ್ಮನ್ನು ಕರತರುವೆನು, ಹೌದು, ಆ ಕಾಲದಲ್ಲಿ ನಿಮ್ಮನ್ನು ಒಟ್ಟುಗೂಡಿಸುವೆನು; ನಾನು ನಿಮ್ಮ ದುರವಸ್ಥೆಯನ್ನು ನಿಮ್ಮ ಕಣ್ಣೆದುರಿಗೆ ತಪ್ಪಿಸುವಾಗ ನಿಮ್ಮನ್ನು ಲೋಕದ ಸಕಲ ಜನಾಂಗಗಳಲ್ಲಿ ಕೀರ್ತಿಸ್ತೋತ್ರಗಳಿಗೆ ಗುರಿಮಾಡುವೆನು. ಇದು ಯೆಹೋವನ ನುಡಿ.


ಅವಳ ದ್ರಾಕ್ಷೆಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು; ಆಕೋರಿನ ತಗ್ಗನ್ನೇ ಅವಳ ಸುಖನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಯೌವನದಲ್ಲಿ, ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು.


ಉಲ್ಲಾಸ ಕೋಲಾಹಲ, ವಧೂವರರ ಸ್ವರ, ಇವುಗಳು ಕೇಳ ಬರುವವು. ಸೇನಾಧೀಶ್ವರನಾದ ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಯೆಹೋವನು, ಒಳ್ಳೆಯವನು, ಆತನ ಕೃಪೆಯು ಶಾಶ್ವತ ಎಂದು ಕೀರ್ತಿಸುತ್ತಾ ಕೃತಜ್ಞತಾಬಲಿಯನ್ನು ಯೆಹೋವನ ಆಲಯಕ್ಕೆ ತರುವವರ ಗಾನವೂ ಕಿವಿಗೆ ಬೀಳುವದು. ನಾನು ದೇಶವನ್ನು ದುರವಸ್ಥೆಯಿಂದ ತಪ್ಪಿಸಿ ಪೂರ್ವಸ್ಥಿತಿಗೆ ತರುವೆನು.


ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರಿಗಿ ಚೀಯೋನಿಗೆ ಬರಮಾಡಿದಾಗ ನಾವು ಕನಸುಕಂಡವರಂತಿದ್ದೆವು.


ಯೆಹೋವನು ಇಂತೆನ್ನುತ್ತಾನೆ - ಇಗೋ, ಮುಂದಿನ ಕಾಲದಲ್ಲಿ ಈ ಪಟ್ಟಣವು ಹನನೇಲನ ಬುರುಜಿನಿಂದ ಮೂಲೆಯ ಬಾಗಿಲಿನವರೆಗೆ ಯೆಹೋವನ ಘನತೆಗಾಗಿ ವಿಸ್ತರಿಸುವದು.


ಯೆಹೋವನು ಇಂತೆನ್ನುತ್ತಾನೆ - ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲ್ಯರೂ ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು ತಮ್ಮ ದೇವರಾದ ಯೆಹೋವನನ್ನು ಮರೆಹೊಗುವರು.


ಚೀಯೋನೆಂಬ ಯುವತಿಯೇ, ನಿನ್ನ ದೋಷಫಲವೆಲ್ಲಾ ಅನುಭವಿಸಿ ತೀರಿತು, ಯೆಹೋವನು ನಿನ್ನನ್ನು ಇನ್ನು ಸೆರೆಗೆ ಒಯ್ಯನು; ಎದೋಮೆಂಬ ಯುವತಿಯೇ, ನಿನ್ನ ದೋಷದ ನಿವಿುತ್ತ ಯೆಹೋವನು ನಿನ್ನನ್ನು ದಂಡಿಸಿ ನಿನ್ನ ಪಾಪಗಳನ್ನು ಬೈಲಿಗೆ ತರುವನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಾಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆತೋರಿಸುವೆನು;


ಇಗೋ, ನಿನ್ನ ಕಾವಲುಗಾರರ ಕೂಗು! ಸ್ವರವೆತ್ತಿ ಒಟ್ಟಿಗೆ ಹರ್ಷಧ್ವನಿಗೈಯುತ್ತಾರೆ; ಯೆಹೋವನು ಚೀಯೋನಿಗೆ ತಿರುಗಿ ಬರುವದನ್ನು ಪ್ರತ್ಯಕ್ಷವಾಗಿ ನೋಡುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು