Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:8 - ಕನ್ನಡ ಸತ್ಯವೇದವು J.V. (BSI)

8 ಅವರು ನನಗೆ ವಿರುದ್ಧವಾಗಿ ಮಾಡಿರುವ ಅಧರ್ಮವನ್ನೆಲ್ಲಾ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ಅವರು ನನಗೆ ಪಾಪದ್ರೋಹಗಳನ್ನು ಮಾಡಿ ನಡಿಸಿರುವ ಅಪರಾಧಗಳನ್ನೆಲ್ಲಾ ಕ್ಷವಿುಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ನನ್ನ ವಿರುದ್ಧವಾಗಿ ಮಾಡಿರುವ ಅಧರ್ಮವನ್ನೆಲ್ಲಾ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ಅವರು ನನಗೆ ಪಾಪದ್ರೋಹಗಳನ್ನು ಮಾಡಿ ನಡೆಸಿರುವ ಅಪರಾಧಗಳನ್ನೆಲ್ಲಾ ಕ್ಷಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರು ನನಗೆ ವಿರುದ್ಧವಾಗಿ ಮಾಡಿದ ಅಧರ್ಮವನ್ನೆಲ್ಲ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ನನಗೆ ವಿರುದ್ಧ ಮಾಡಿರುವ ಪಾಪದ್ರೋಹಗಳನ್ನೆಸಗಿ ಕಟ್ಟಿಕೊಂಡಿರುವ ಅಪರಾಧಗಳನ್ನೆಲ್ಲ ಕ್ಷಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರು ನನ್ನ ವಿರುದ್ಧ ಪಾಪಗಳನ್ನು ಮಾಡಿದರೂ ಅವರ ಪಾಪಗಳನ್ನು ತೊಳೆದುಬಿಡುವೆನು. ಅವರು ನನ್ನ ವಿರುದ್ಧ ಕಾದಾಡಿದರೂ ಅವರನ್ನು ಕ್ಷಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಯಾವುದರಿಂದ ನನಗೆ ವಿರೋಧವಾಗಿ ಪಾಪ ಮಾಡಿದರೋ, ಆ ಅಕ್ರಮದಿಂದೆಲ್ಲಾ ಅವರನ್ನು ಶುದ್ಧಮಾಡುವೆನು. ಅವರು ಯಾವವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದಾರೋ, ಆ ಅಕ್ರಮಗಳನ್ನೆಲ್ಲಾ ಮನ್ನಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:8
20 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಪಾಪವನ್ನೂ ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ ಯೆರೂಸಲೇವಿುನವರಿಗೂ ತೆರೆದಿರುವದು.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ ನನ್ನನ್ನು ಶುದ್ಧಗೊಳಿಸು.


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ನಿಮ್ಮನ್ನು ನಿಮ್ಮ ಅಪರಾಧಗಳಿಂದೆಲ್ಲಾ ಶುದ್ಧಿಮಾಡುವ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.


ನೆರೆಹೊರೆಯವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು - ಯೆಹೋವನ ಜ್ಞಾನವನ್ನು ಪಡೆಯಿರಿ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು; ನಾನು ಅವರ ಅಪರಾಧವನ್ನು ಕ್ಷವಿುಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ. ಇದು ಯೆಹೋವನ ನುಡಿ.


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ತಡಕಿದರೂ ಸಿಕ್ಕುವದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷವಿುಸುವೆನಲ್ಲವೆ. ಇದು ಯೆಹೋವನ ನುಡಿ.


ನಿನ್ನ ದ್ರೋಹಗಳನ್ನು ಮಂಜಿನಂತೆ ಪರಿಹರಿಸಿದ್ದೇನೆ, ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.


ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವದಿಲ್ಲ. ಆದರೆ ನಮ್ಮ ದೋಷಪರಿಹಾರಕನು ನೀನೇ.


ಅವುಗಳಲ್ಲಿ ಹತರಾದವರನ್ನು ನಿರ್ದೋಷಿಗಳೆಂದು ನಾನು ಬಹುಕಾಲ ನಿರ್ಣಯಿಸದೆ ಬಿಟ್ಟಿದ್ದೆನು, ಇನ್ನು ನಿರ್ಣಯಿಸುವೆನು; ಯೆಹೋವನು ಚೀಯೋನಿನಲ್ಲಿ ನೆಲೆಯಾಗಿಯೇ ಇದ್ದಾನೆ.


ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ ಯಜ್ಞಗಳೂ ನನಗೆ ಮೆಚ್ಚಿಕೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವದು.


ಆ ದಿನದಲ್ಲಿ ಯೆಹೋವನು ದಯಪಾಲಿಸುವ ಬೆಳೆಯಿಂದ ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಸೌಂದರ್ಯವೂ ಮಹಿಮೆಯೂ ಉಂಟಾಗುವವು, ದೇಶದ ಫಲದಿಂದ ಉನ್ನತಿಯೂ ಭೂಷಣವೂ ಲಭಿಸುವವು.


ಯಾಕಂದರೆ ನೀವು ಪರಿಶುದ್ಧರಾಗುವದಕ್ಕಾಗಿ ಈ ದಿನದಲ್ಲಿ ನಿಮಗೋಸ್ಕರ ದೋಷಪರಿಹಾರವಾಗುವದು, ಯೆಹೋವನ ದೃಷ್ಟಿಯಲ್ಲಿ ನಿಮ್ಮ ಎಲ್ಲಾ ದೋಷಗಳು ನಿವಾರಣೆಯಾಗುವವು.


ನೀನು ಪಾಪವನ್ನು ಕ್ಷವಿುಸುವವನಾದ್ದರಿಂದ ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.


ಚೀಯೋನೆಂಬ ಯುವತಿಯೇ, ನಿನ್ನ ದೋಷಫಲವೆಲ್ಲಾ ಅನುಭವಿಸಿ ತೀರಿತು, ಯೆಹೋವನು ನಿನ್ನನ್ನು ಇನ್ನು ಸೆರೆಗೆ ಒಯ್ಯನು; ಎದೋಮೆಂಬ ಯುವತಿಯೇ, ನಿನ್ನ ದೋಷದ ನಿವಿುತ್ತ ಯೆಹೋವನು ನಿನ್ನನ್ನು ದಂಡಿಸಿ ನಿನ್ನ ಪಾಪಗಳನ್ನು ಬೈಲಿಗೆ ತರುವನು.


ಆತನೇ ಇಸ್ರಾಯೇಲನ್ನು ಅದರ ಸಕಲಪಾಪಗಳಿಂದ ವಿಮೋಚಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು