Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:21 - ಕನ್ನಡ ಸತ್ಯವೇದವು J.V. (BSI)

21 ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಪ್ರಾಣ ಹುಡುಕುವ ಶತ್ರುಗಳ ಕೈಗೆ, ಅಂದರೆ ನಿಮ್ಮನ್ನು ಬಿಟ್ಟುಹೋಗಿರುವ ಬಾಬೆಲಿನ ಅರಸನ ಕೈಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವನ ಪ್ರಧಾನರನ್ನೂ ಅವರ ಪ್ರಾಣ ಹುಡುಕುವ ಶತ್ರುಗಳ ಕೈಗೆ ಅಂದರೆ ನಿಮ್ಮನ್ನು ಬಿಟ್ಟುಹೋಗಿರುವ ಬಾಬೆಲಿನ ಅರಸನ ಕೈಗೆ ಕೊಡುವೆನು” ಎನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಜುದೇಯದ ಅರಸ ಚಿದ್ಕೀಯನನ್ನೂ ಅವನ ಮಂತ್ರಿಗಳನ್ನೂ ಅವರ ಶತ್ರುಗಳಿಗೆ ಅಂದರೆ, ಅವರ ಪ್ರಾಣಹತ್ಯಕ್ಕಾಗಿ ಕಾದಿರುವ, ತಕ್ಷಣಕ್ಕೆ ಹಿಂದಿರುಗಿಹೋಗಿರುವ, ಬಾಬಿಲೋನಿಯದ ಅರಸನ ಕೈಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೂದದ ರಾಜನಾದ ಚಿದ್ಕೀಯನನ್ನೂ ಅವನ ನಾಯಕರುಗಳನ್ನೂ ನಾನು ಅವರ ಶತ್ರುಗಳಿಗೂ ಅವರನ್ನು ಕೊಲ್ಲಬಯಸುವ ಜನರಿಗೂ ಕೊಡುವೆನು. ಬಾಬಿಲೋನಿನ ಸೈನ್ಯವು ಜೆರುಸಲೇಮನ್ನು ಬಿಟ್ಟುಹೋಗಿದ್ದರೂ ನಾನು ಚಿದ್ಕೀಯ ಮತ್ತು ಅವನ ಜನರನ್ನು ಬಾಬಿಲೋನಿನ ಸೈನಿಕರ ಕೈಗೆ ಒಪ್ಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ, ನಿಮ್ಮನ್ನು ಬಿಟ್ಟುಹೋಗಿರುವ ಬಾಬಿಲೋನಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:21
16 ತಿಳಿವುಗಳ ಹೋಲಿಕೆ  

ಅವನ ಮಕ್ಕಳನ್ನು ಅಲ್ಲೇ ಅವನ ಕಣ್ಣೆದುರಿಗೆ ವಧಿಸಿ ಯೆಹೂದದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು;


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ಇವನು ಯಾವನಿಂದ ಅರಸನಾಗಿ ನೇವಿುಸಲ್ಪಟ್ಟನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಡಂಬಡಿಕೆಯನ್ನು ಮೀರಿದನೋ, ಆ ಅರಸನ ಬಳಿಯಲ್ಲಿ, ಅಂದರೆ ಬಾಬೆಲೆಂಬ ಅವನ ವಾಸಸ್ಥಾನದಲ್ಲಿ ಇವನು ಸಾಯುವದು ಖಂಡಿತ.


ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು.


ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.


ಮತ್ತು ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ವಶವಾಗುವದು ಖಂಡಿತ, ಅವನಿಗೆ ಸಾಕ್ಷಾತ್ತಾಗಿ ನಿಂತು ಎದುರೆದುರಾಗಿ ಮಾತಾಡುವನು;


ಅನಂತರ ಕಸ್ದೀಯರು ಅವನನ್ನು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.


ನಿನ್ನ ಪ್ರಾಣವನ್ನು ಹುಡುಕಿ ನಿನ್ನಲ್ಲಿ ಭಯವನ್ನು ಹುಟ್ಟಿಸುವವರ ಕೈಗೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಕಸ್ದೀಯರ ಕೈಗೆ ಕೊಟ್ಟು ಬಿಡುವೆನು.


ಯೆಹೂದದ ಅರಸನಾದ ಚಿದ್ಕೀಯನು ಯೆರೆಮೀಯನಿಗೆ - ನೀನು ಪ್ರವಾದನೆ ಮಾಡುತ್ತಾ - ಯೆಹೋವನು ಇಂತೆನ್ನುತ್ತಾನೆ - ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರವಿುಸುವನು;


ಅದೇನಂದರೆ - ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಪ್ರಾಣ ಹುಡುಕುತ್ತಿದ್ದ ಶತ್ರುವಾದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಕೈಗೆ ಕೊಟ್ಟಂತೆ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಕೊಡುವೆನು ಎಂಬದೇ; ಇದು ಯೆಹೋವನಾದ ನನ್ನ ನುಡಿ.


ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿಹೋಗಿದ್ದರು.


ದ್ರೋಹಿವಂಶದವರಾದ ಈ ಜನರಿಗೆ ಹೀಗೆ ಹೇಳು - ಇದರ ಅಭಿಪ್ರಾಯವು ನಿಮಗೆ ಗೊತ್ತಿಲ್ಲವೋ? ಇಗೋ, ಬಾಬೆಲಿನ ಅರಸನು ಯೆರೂಸಲೇವಿುಗೆ ಬಂದು ಅಲ್ಲಿನ ಅರಸನನ್ನೂ ಪ್ರಧಾನರನ್ನೂ ಹಿಡಿದು ಬಾಬೆಲಿಗೆ ಒಯ್ದುಕೊಂಡು ಹೋದನು;


ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬೆಲಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು