ಯೆರೆಮೀಯ 34:22 - ಕನ್ನಡ ಸತ್ಯವೇದವು J.V. (BSI)22 ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರವಿುಸಿ ಬೆಂಕಿಯಿಂದ ಸುಟ್ಟುಬಿಡುವರು; ಮತ್ತು ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂವಿುಯನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೆಹೋವನು, “ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಬಿಡುವರು; ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಸರ್ವೇಶ್ವರನಾದ ನನ್ನ ಗುರಿಯನ್ನು ಗಮನಿಸಿರಿ - ನಾನು ಅಪ್ಪಣೆಕೊಟ್ಟು, ಶತ್ರುಗಳು ಈ ನಗರಕ್ಕೆ ಮತ್ತೆ ಬರುವಂತೆ ಮಾಡುವೆನು. ಅವರು ಇದರ ವಿರುದ್ಧ ಯುದ್ಧಮಾಡಿ, ಇದನ್ನು ಆಕ್ರಮಿಸಿಕೊಂಡು, ಬೆಂಕಿಯಿಂದ ಸುಟ್ಟುಹಾಕುವರು. ನಾನು ಜುದೇಯದ ನಗರಗಳನ್ನು ನಿರ್ಜನವಾದ ಪಾಳುಭೂಮಿಯನ್ನಾಗಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಬಾಬಿಲೋನಿನ ಸೈನ್ಯವು ಜೆರುಸಲೇಮಿಗೆ ಬರಬೇಕೆಂದು ನಾನು ಆಜ್ಞಾಪಿಸುತ್ತೇನೆ.’ ಇದು ಯೆಹೋವನ ನುಡಿ. ‘ಆ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡುವುದು. ಅವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು ಮತ್ತು ಅದಕ್ಕೆ ಬೆಂಕಿಯಿಟ್ಟು ಸುಟ್ಟುಬಿಡುವರು. ನಾನು ಯೆಹೂದ ಪ್ರದೇಶದ ನಗರಗಳನ್ನು ನಾಶಮಾಡುವೆನು. ಆ ನಗರಗಳು ಬರಿದಾದ ಮರುಭೂಮಿಗಳಾಗುವವು. ಅಲ್ಲಿ ಯಾರೂ ವಾಸಮಾಡಲಾರರು.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯೆಹೋವ ದೇವರು ಹೇಳುತ್ತಾರೆ, ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರುಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ, ಅದನ್ನು ಹಿಡಿದು ಬೆಂಕಿಯಿಂದ ಸುಡುವರು ಮತ್ತು ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗಿ ಮಾಡುವೆನು.” ಅಧ್ಯಾಯವನ್ನು ನೋಡಿ |