Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:3 - ಕನ್ನಡ ಸತ್ಯವೇದವು J.V. (BSI)

3 ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತಾಡುವನು; ನೀನು ಬಾಬೆಲಿಗೆ ಗಡೀಪಾರಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಗಡಿ ಪಾರಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಂಧಿತನಾಗಿ ಅವನ ವಶವಾಗುವೆ. ಬಾಬಿಲೋನಿನ ಅರಸನ ಸಮಕ್ಷಮದಲ್ಲಿ ನಿಲ್ಲುವೆ. ಅವನು ನಿನ್ನೊಡನೆ ಮುಖಾಮುಖಿಯಾಗಿ ಮಾತಾಡುವನು. ನೀನು ಬಾಬಿಲೋನಿಗೆ ಗಡಿಪಾರಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಚಿದ್ಕೀಯನೇ, ನೀನು ಬಾಬಿಲೋನಿನ ರಾಜನಿಂದ ತಪ್ಪಿಸಿಕೊಳ್ಳಲಾರೆ. ನಿಶ್ಚಿತವಾಗಿ ನಿನ್ನನ್ನು ಹಿಡಿದು ಅವನಿಗೆ ಒಪ್ಪಿಸಲಾಗುವುದು. ಬಾಬಿಲೋನಿನ ರಾಜನನ್ನು ನೀನು ಪ್ರತ್ಯಕ್ಷವಾಗಿ ನೋಡುವೆ. ಅವನು ನಿನ್ನೊಂದಿಗೆ ಮುಖಾಮುಖಿಯಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಹೋಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳುವುದಿಲ್ಲ. ಆದರೆ ನಿಶ್ಚಯವಾಗಿ ಹಿಡಿಯಲಾಗಿ, ಅವನ ಕೈವಶವಾಗುವೆ. ನೀವು ಬಾಬಿಲೋನಿನ ಅರಸನನ್ನು ಪ್ರತ್ಯಕ್ಷವಾಗಿ ಕಾಣುವಿರಿ. ಅವನು ನಿಮ್ಮೊಂದಿಗೆ ಮುಖಾಮುಖಿಯಾಗಿ ಮಾತನಾಡುವನು. ನೀನು ಬಾಬಿಲೋನಿಗೆ ಹೋಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:3
18 ತಿಳಿವುಗಳ ಹೋಲಿಕೆ  

ಮತ್ತು ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ವಶವಾಗುವದು ಖಂಡಿತ, ಅವನಿಗೆ ಸಾಕ್ಷಾತ್ತಾಗಿ ನಿಂತು ಎದುರೆದುರಾಗಿ ಮಾತಾಡುವನು;


ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ವ್ಯಾಧಿಖಡ್ಗಕ್ಷಾಮಗಳಿಂದ ಹತಶೇಷರಾದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು; ಅವನು ಅವರನ್ನು ಕರುಣಿಸದೆ ಕನಿಕರಪಡದೆ ಉಳಿಸದೆ ಕತ್ತಿಯಿಂದ ಸಂಹರಿಸುವನು.


ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಪ್ರಾಣ ಹುಡುಕುವ ಶತ್ರುಗಳ ಕೈಗೆ, ಅಂದರೆ ನಿಮ್ಮನ್ನು ಬಿಟ್ಟುಹೋಗಿರುವ ಬಾಬೆಲಿನ ಅರಸನ ಕೈಗೆ ಕೊಡುವೆನು.


ಇಸ್ರಾಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ! ನಿನಗೆ ಸಮಯವು ಹತ್ತರಿಸಿದೆ; ಇದೇ ನಿನ್ನ ಅಪರಾಧದ ಕಡೆಗಾಲ.


ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರ್ಲಿನಲ್ಲಿ ಸಿಕ್ಕಿಬೀಳುವನು; ಕಸ್ದೀಯ ದೇಶದ ಬಾಬೆಲಿಗೆ ಅವನನ್ನು ಒಯ್ಯುವೆನು, ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡನು.


ನೀನು ಬಾಬೆಲಿನ ಅರಸನ ಸರದಾರರನ್ನು ಮರೆಹೊಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವದು. ಅವರು ಅದನ್ನು ಬೆಂಕಿಯಿಂದ ಸುಟ್ಟುಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ ಎಂದು ಹೇಳಿದನು.


ಅರಸನಾದ ಚಿದ್ಕೀಯನು ಅವನನ್ನು ಕರತರಿಸಿ ಯೆಹೋವನಿಂದ ದೈವೋಕ್ತಿಯು ದೊರೆಯಿತೋ ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು - ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿ ಬೀಳುವಿ ಅಂದನು.


ಅವು ಬಾಬೆಲಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಉದ್ಧರಿಸುವ ದಿನದ ತನಕ ಅಲ್ಲೇ ಇರುವವು; ಆಗ ನಾನು ಅವುಗಳನ್ನು ಪುನಃ ತಂದು ಈ ಸ್ಥಳಕ್ಕೆ ಸೇರಿಸುವೆನು. ಇದು ಯೆಹೋವನ ನುಡಿ.


ಯೆಹೂದದ ಅರಸನಾದ ಚಿದ್ಕೀಯನು ಯೆರೆಮೀಯನಿಗೆ - ನೀನು ಪ್ರವಾದನೆ ಮಾಡುತ್ತಾ - ಯೆಹೋವನು ಇಂತೆನ್ನುತ್ತಾನೆ - ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರವಿುಸುವನು;


ಆದಕಾರಣ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರವಿುಸುವನು;


ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವನ ಮಾತನ್ನು ಕೈಕೊಳ್ಳು; ಯೆಹೋವನು ನಿನ್ನ ವಿಷಯವಾಗಿ ಇಂತೆನ್ನುತ್ತಾನೆ - [ನೀನು ಕೇಳಿ ಕೈಕೊಂಡರೆ] ಖಡ್ಗದಿಂದ ಹತನಾಗುವದಿಲ್ಲ; ಸುಖವಾಗಿ ಸಾಯುವಿ;


ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಬಹುಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಇವನು ಸಮೃದ್ಧನಾಗಿಯೇ ಇರುವನೋ? ಇಂಥಾ ಕೃತ್ಯಗಳನ್ನು ನಡಿಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?


ನಿನ್ನ ಸಮಸ್ತ ಪತ್ನಿಯರೂ ಕುಮಾರಕುಮಾರ್ತೆಯರೂ ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿವಿುತ್ತ ಬೆಂಕಿಯಿಂದ ಸುಟ್ಟುಹೋಗುವದು ಎಂದು ಹೇಳಿದನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ಇವನು ಯಾವನಿಂದ ಅರಸನಾಗಿ ನೇವಿುಸಲ್ಪಟ್ಟನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಡಂಬಡಿಕೆಯನ್ನು ಮೀರಿದನೋ, ಆ ಅರಸನ ಬಳಿಯಲ್ಲಿ, ಅಂದರೆ ಬಾಬೆಲೆಂಬ ಅವನ ವಾಸಸ್ಥಾನದಲ್ಲಿ ಇವನು ಸಾಯುವದು ಖಂಡಿತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು