Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:4 - ಕನ್ನಡ ಸತ್ಯವೇದವು J.V. (BSI)

4 ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವನ ಮಾತನ್ನು ಕೈಕೊಳ್ಳು; ಯೆಹೋವನು ನಿನ್ನ ವಿಷಯವಾಗಿ ಇಂತೆನ್ನುತ್ತಾನೆ - [ನೀನು ಕೇಳಿ ಕೈಕೊಂಡರೆ] ಖಡ್ಗದಿಂದ ಹತನಾಗುವದಿಲ್ಲ; ಸುಖವಾಗಿ ಸಾಯುವಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವನ ಮಾತನ್ನು ಕೈಗೊಳ್ಳು; ಯೆಹೋವನು ನಿನ್ನ ವಿಷಯವಾಗಿ ಇಂತೆನ್ನುತ್ತಾನೆ, ನೀನು ಕೇಳಿ ಕೈಕೊಂಡರೆ ಖಡ್ಗದಿಂದ ಹತನಾಗುವುದಿಲ್ಲ; ಸುಖವಾಗಿ ಸಾಯುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೂ ಜುದೇಯದ ಅರಸನಾದ ಚಿದ್ಕೀಯನೇ, ಸರ್ವೇಶ್ವರನ ಮಾತನ್ನು ಕೈಗೊಳ್ಳು; ಸರ್ವೇಶ್ವರ ನಿನ್ನ ವಿಷಯವಾಗಿ ಹೀಗೆನ್ನುತ್ತಾರೆ - ನೀನು ಕತ್ತಿಯಿಂದ ಹತನಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೂದದ ರಾಜನಾದ ಚಿದ್ಕೀಯನೇ, ಯೆಹೋವನ ವಾಗ್ದಾನವನ್ನು ಕೇಳು. ಯೆಹೋವನು ನಿನ್ನ ಬಗ್ಗೆ ಹೀಗೆ ಹೇಳುತ್ತಾನೆ. ನಿನ್ನನ್ನು ಖಡ್ಗದಿಂದ ಕೊಲ್ಲಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ ‘ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವ ದೇವರ ವಾಗ್ದಾನವನ್ನು ಕೇಳು. ನಿನ್ನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಖಡ್ಗದಿಂದ ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:4
7 ತಿಳಿವುಗಳ ಹೋಲಿಕೆ  

ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತಾಡುವನು; ನೀನು ಬಾಬೆಲಿಗೆ ಗಡೀಪಾರಾಗುವಿ.


ನಿನಗಿಂತ ಮುಂಚಿನ ನಿನ್ನ ಪಿತೃಗಳಾದ ಅರಸರಿಗೆ ಧೂಪಹಾಕಿದ ಪ್ರಕಾರ ನಿನಗೂ ಹಾಕುವರು; ಅಯ್ಯೋ, ಪ್ರಭುವೇ ಎಂದು ನಿನಗಾಗಿ ಗೋಳಾಡುವರು; ನಾನೇ ನುಡಿದಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.


ಅದಕ್ಕೆ ಮೀಕಾಯೆಹುವು - ಅದಿರಲಿ, ಯೆಹೋವನ ವಾಕ್ಯವನ್ನು ಕೇಳಿರಿ. ಯೆಹೋವನು ತನ್ನ ಸಿಂಹಾಸನದ ಮೇಲೆ ಕೂತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆನು.


ಯಾಕೋಬನ ಮನೆತನವೇ, ಇಸ್ರಾಯೇಲ್ ವಂಶದ ಸಕಲ ಗೋತ್ರಗಳೇ, ಯೆಹೋವನ ವಾಕ್ಯವನ್ನು ಕೇಳಿರಿ;


ನೀನು ಯೆಹೋವನ ಆಲಯದ ಬಾಗಿಲಿನಲ್ಲಿ ನಿಂತು ಈ ವಾಕ್ಯವನ್ನು ಅಲ್ಲಿ ಸಾರು - ಯೆಹೋವನಿಗೆ ಅಡ್ಡಬೀಳುವದಕ್ಕೆ ಈ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ.


ಆ ಅರಸನು ಚಿದ್ಕೀಯನನ್ನು ಬಾಬೆಲಿಗೆ ಒಯ್ದುಕೊಂಡುಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು; ನೀವು ಕಸ್ದೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬದಾಗಿ ಏಕೆ ನುಡಿಯುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದ್ದನು.


ಇಸ್ರಾಯೇಲ್ಯರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದಹಾಕಿದ್ದಾನೆ. ಏಕಂದರೆ ಪ್ರೀತಿ ಸತ್ಯತೆ ದೇವಜ್ಞಾನಗಳು ದೇಶದಲ್ಲಿಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು