Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:7 - ಕನ್ನಡ ಸತ್ಯವೇದವು J.V. (BSI)

7 ಬಾಬೆಲಿನ ಅರಸನ ಸೈನ್ಯವು ಯೆರೂಸಲೇವಿುಗೂ ಯೆಹೂದದೊಳಗೆ ಕೋಟೆಕೊತ್ತಲದ ಪಟ್ಟಣಗಳಿಗಾಗಿ ಉಳಿದಿದ್ದ ಲಾಕೀಷಿಗೂ ಅಜೇಕಕ್ಕೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ, ಯೆಹೂದದೊಳಗೆ ಕೋಟೆಕೊತ್ತಲದ ಪಟ್ಟಣಗಳಾಗಿ ಉಳಿದಿದ್ದ ಲಾಕೀಷಿಗೂ ಮತ್ತು ಅಜೇಕಕ್ಕೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಬಾಬಿಲೋನಿನ ಅರಸನ ಸೈನ್ಯವು ಜೆರುಸಲೇಮಿಗೂ ಮತ್ತು ಜುದೇಯದೊಳಗೆ ಕೋಟೆಕೊತ್ತಲದ ನಗರಗಳಾಗಿದ್ದ ಲಾಕೀಷಿಗೂ ಅಜೇಕಕ್ಕೂ ವಿರುದ್ಧ ಯುದ್ಧಮಾಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಬಾಬಿಲೋನಿನ ರಾಜನ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡುತ್ತಿತ್ತು. ಬಾಬಿಲೋನಿನ ಸೈನ್ಯವು ತಾನು ಇನ್ನೂ ಸ್ವಾಧೀನಪಡಿಸಿಕೊಳ್ಳದ ಯೆಹೂದದ ನಗರಗಳ ವಿರುದ್ಧ ಕೂಡ ಹೋರಾಡುತ್ತಿತ್ತು. ಆ ಪಟ್ಟಣಗಳೆಂದರೆ ಲಾಕೀಷ್ ಮತ್ತು ಅಜೇಕ. ಯೆಹೂದದಲ್ಲಿ ಕೋಟೆಗಳನ್ನು ಹೊಂದಿದ್ದ ನಗರಗಳೆಂದರೆ ಇವೆರಡೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬಾಬಿಲೋನಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಎಂದರೆ, ಲಾಕೀಷಿಗೂ ಅಜೇಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿದನು. ಏಕೆಂದರೆ ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ಮಾತ್ರ ನಿಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:7
18 ತಿಳಿವುಗಳ ಹೋಲಿಕೆ  

ಹೆಬ್ರೋನಿನ ಅರಸನಾದ ಹೋಹಾಮ್, ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ, ಎಗ್ಲೋನಿನ ಅರಸನಾದ ದೆಬೀರ್ ಇವರ ಬಳಿಗೆ ದೂತರನ್ನು ಕಳುಹಿಸಿ -


ಯೆಹೂದದಲ್ಲಿ ಸಾರಿರಿ, ಯೆರೂಸಲೇವಿುನೊಳಗೆ ಪ್ರಕಟಿಸಿರಿ; ದೇಶದಲ್ಲೆಲ್ಲಾ ಕೊಂಬೂದುವಂತೆ ಅಪ್ಪಣೆಕೊಡಿರಿ; ಕೂಡಿಕೊಂಡು ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ;


ತಪ್ಪೂಹ, ಏನಾಮ್, ಯರ್ಮೂತ್,


ಲಾಕೀಷಿನವರೇ, ಅಶ್ವಗಳನ್ನು ರಥಕ್ಕೆ ಕಟ್ಟಿರಿ; ನಿಮ್ಮ ಊರೇ ಚೀಯೋನ್ ನಗರಿಯ ಪಾಪಕ್ಕೆ ಮೂಲ; ಹೌದು, ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿಬಂದವು.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಣ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇವಿುಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -


ಆಗ ಯೆಹೂದದ ಪಟ್ಟಣಗಳವರೂ ಯೆರೂಸಲೇವಿುನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮರೆಹೊಕ್ಕು ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವದಿಲ್ಲ.


[ಆ ಕಾಲದಲ್ಲಿ ಜನರು ಹೀಗನ್ನುವರು - ] ಸುಮ್ಮನೆ ಕೂತಿರುವದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ; ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.


ಇದಲ್ಲದೆ ಇವನು ಯೆಹೂದ ಪರ್ವತಪ್ರದೇಶದಲ್ಲಿ ಪಟ್ಟಣಗಳನ್ನೂ ಕಾಡುಗಳಲ್ಲಿ ದುರ್ಗಗಳನ್ನೂ ಬುರುಜುಗಳನ್ನೂ ಕಟ್ಟಿಸಿದನು.


ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುತ್ತಾ ಇದ್ದನು.


ವಿುಚ್ವೆ, ಯೊಕ್ತೇಲ್, ಲಾಕೀಷ್, ಬೊಚ್ಕತ್,


ಯರ್ಮೂತಿನ ಅರಸನು 1; ಲಾಕೀಷಿನ ಅರಸನು 1; ಎಗ್ಲೋನಿನ ಅರಸನು 1; ಗೆಜೆರಿನ ಅರಸನು 1;


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.


ಆಗ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅಮೋರಿಯ ರಾಜರು ದಂಡೆತ್ತಿ ಕೂಡಿಬಂದು ಗಿಬ್ಯೋನಿಗೆ ಮುತ್ತಿಗೆಹಾಕಿ ಯುದ್ಧಮಾಡಿದರು.


ಯೆರೂಸಲೇವಿುನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು.


ಆಗ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತನಾದ ರಬ್ಷಾಕೆ ಎಂಬವನನ್ನು ಯೆರೂಸಲೇವಿುನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವನು ಮಡಿವಾಳರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು