Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:8 - ಕನ್ನಡ ಸತ್ಯವೇದವು J.V. (BSI)

8 ಆಮೇಲೆ ಯೆಹೋವನು ಯೆರೆಮೀಯನಿಗೆ ಒಂದು ಮಾತನ್ನು ದಯಪಾಲಿಸಿದನು. ಇಷ್ಟರೊಳಗೆ ಅರಸನಾದ ಚಿದ್ಕೀಯನು ಯೆರೂಸಲೇವಿುನವರೆಲ್ಲರೊಂದಿಗೆ ಸೇರಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಮೇಲೆ ಯೆಹೋವನು ಯೆರೆಮೀಯನಿಗೆ ಒಂದು ಮಾತನ್ನು ದಯಪಾಲಿಸಿದನು. ಇಷ್ಟರೊಳಗೆ ಅರಸನಾದ ಚಿದ್ಕೀಯನು ಯೆರೂಸಲೇಮಿನವರೆಲ್ಲರೊಂದಿಗೆ ಸೇರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯೆರೆಮೀಯನಿಗೆ ಸರ್ವೇಶ್ವರನಿಂದ ಮತ್ತೊಂದು ವಾಣಿ ಉಂಟಾಯಿತು. ಇಷ್ಟರೊಳಗೆ ಅರಸ ಚಿದ್ಕೀಯನು ಮತ್ತು ಜೆರುಸಲೇಮಿನ ಜನರೆಲ್ಲರು ಸೇರಿ ಒಂದು ಒಪ್ಪಂದ ಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ರಾಜನಾದ ಚಿದ್ಕೀಯನು ಜೆರುಸಲೇಮಿನ ಎಲ್ಲಾ ಜನರೊಂದಿಗೆ ಇಬ್ರಿಯದ ಗುಲಾಮರೆಲ್ಲರನ್ನೂ ಬಿಡುಗಡೆ ಮಾಡುವದಾಗಿ ಮಾತುಕೊಟ್ಟಿದ್ದನು. ಚಿದ್ಕೀಯನು ಹೀಗೆ ಮಾತುಕೊಟ್ಟ ತರುವಾಯ ಯೆಹೋವನಿಂದ ಯೆರೆಮೀಯನಿಗೆ ಒಂದು ಸಂದೇಶ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಗುಲಾಮರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಅರಸನಾದ ಚಿದ್ಕೀಯನು ಯೆರೂಸಲೇಮಿನ ಎಲ್ಲಾ ಜನರೊಂದಿಗೆ ಒಡಂಬಡಿಕೆಯನ್ನು ಮಾಡಿದ ನಂತರ ಯೆಹೋವ ದೇವರಿಂದ ಯೆರೆಮೀಯನಿಗೆ ಈ ಮಾತು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:8
18 ತಿಳಿವುಗಳ ಹೋಲಿಕೆ  

ನೀವು ಐವತ್ತನೆಯ ವರುಷವನ್ನು ದೇವರಿಗೆ ಮೀಸಲಾದ ವರುಷವೆಂದು ಭಾವಿಸಿ ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂಬದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂವಿುಗಳಿಗೂ ಸ್ವಜನರ ಬಳಿಗೂ ಹೋಗಿ ಇರಬಹುದು.


ಆದಕಾರಣ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ - ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗವ್ಯಾಧಿಕ್ಷಾಮಗಳಿಗೆ ಗುರಿಯಾಗುವಂತೆ ಬಿಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.


ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವದಾಗಿ ಆತನಿಗೆ ಪ್ರಮಾಣಮಾಡಿದರು. ಇದಲ್ಲದೆ ರಾಜಪ್ರಜೆಗಳಿಗೂ ಒಡಂಬಡಿಕೆಯಾಯಿತು.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ


ಈ ಎಲ್ಲಾ ಕಾರಣಗಳಿಂದ ನಾವು ಲೇಖನ ರೂಪವಾದ ಪ್ರತಿಜ್ಞೆಯನ್ನು ಮಾಡಿದೆವು. ಅದಕ್ಕೆ ನಮ್ಮ ಪ್ರಭುಗಳೂ ಲೇವಿಯರೂ ಯಾಜಕರೂ ಸಹಿಮಾಡಿ ಮುದ್ರೆಹಾಕಿದರು.


ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿಹೋಗುವಂತೆ ಇಸ್ರಾಯೇಲ್‍ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವದಕ್ಕೆ ಮನಸ್ಸುಳ್ಳವನಾಗಿದ್ದೇನೆ.


ಅನಂತರ ಯೆಹೋಯಾದನು ಎಲ್ಲಾ ಜನರನ್ನೂ ಅರಸನನ್ನೂ ಪ್ರೇರಿಸಿ ತಾವೆಲ್ಲರೂ ಯೆಹೋವನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣಮಾಡಿದನು.


ಸ್ವದೇಶದವರೊಳಗೆ ಯಾವ ಇಬ್ರಿಯ ಪುರುಷನಾಗಲಿ ಸ್ತ್ರೀಯಾಗಲಿ ನಿಮಗೆ ದಾಸರಾಗಿರುವದಕ್ಕಾಗಿ ಮಾರಲ್ಪಡುವ ಪಕ್ಷಕ್ಕೆ ಅಂಥವರು ಆರು ವರುಷಗಳವರೆಗೂ ನಿಮ್ಮ ಸೇವೆಮಾಡಲಿ; ಏಳನೆಯ ವರುಷದಲ್ಲಿ ನೀವು ಅವರನ್ನು ಬಿಟ್ಟುಬಿಡಬೇಕು.


ನೋಡಿರಿ, ಕೇಡಿನ ಬಂಧಗಳನ್ನು ಬಿಚ್ಚುವದು, ನೊಗದ ಕಣ್ಣಿಗಳನ್ನು ಕಳಚುವದು, ಜಜ್ಜಿಹೋದವರನ್ನು ಬಿಡುಗಡೆಮಾಡುವದು, ನೊಗಗಳನ್ನೆಲ್ಲಾ ಮುರಿಯುವದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು