Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 35:11 - ಕನ್ನಡ ಸತ್ಯವೇದವು J.V. (BSI)

11 ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದೊಳಗೆ ನುಗ್ಗಿದಾಗ - ಕಸ್ದೀಯರ ಮತ್ತು ಅರಾಮ್ಯರ ಸೈನ್ಯಗಳ ಮುಂದೆ ನಿಲ್ಲದೆ ಯೆರೂಸಲೇವಿುಗೆ ಹೋಗೋಣ ಬನ್ನಿ ಅಂದುಕೊಂಡು ಯೆರೂಸಲೇವಿುನಲ್ಲಿ ವಾಸಿಸುತ್ತಿದ್ದೇವೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದೊಳಗೆ ನುಗ್ಗಿದಾಗ, “ಕಸ್ದೀಯರ ಮತ್ತು ಅರಾಮ್ಯರ ಸೈನ್ಯಗಳ ಮುಂದೆ ನಿಲ್ಲದೆ ಯೆರೂಸಲೇಮಿಗೆ ಹೋಗೋಣ ಬನ್ನಿ ಎಂದುಕೊಂಡು ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಈ ನಾಡಿಗೆ ಮುತ್ತಿಗೆ ಹಾಕಿದಾಗ, ಬಾಬಿಲೋನಿಯ ಮತ್ತು ಸಿರಿಯದವರ ಸೈನ್ಯಗಳಿಂದ ತಪ್ಪಿಸಿಕೊಳ್ಳಲು, ‘ಜೆರುಸಲೇಮಿಗೆ ಹೋಗೋಣ ಬನ್ನಿ’ ಎಂದುಕೊಂಡು ಬಂದೆವು. ಈ ಕಾರಣದಿಂದಲೇ ಇಲ್ಲಿ ವಾಸಿಸುತ್ತಿದ್ದೇವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶದ ಮೇಲೆ ಧಾಳಿ ಮಾಡಿದಾಗ ನಾವು ಜೆರುಸಲೇಮ್ ನಗರದಲ್ಲಿ ಪ್ರವೇಶ ಮಾಡಿ ಹೀಗೆ ಮಾತನಾಡಿಕೊಂಡೆವು, ‘ಬನ್ನಿ, ನಾವು ಬಾಬಿಲೋನಿನ ಸೈನ್ಯದಿಂದ ಮತ್ತು ಅರಾಮ್ಯರ ಸೈನ್ಯದಿಂದ ತಪ್ಪಿಸಿಕೊಳ್ಳುವದಕ್ಕಾಗಿ ಜೆರುಸಲೇಮ್ ನಗರವನ್ನು ಪ್ರವೇಶಿಸೋಣ.’ ಹೀಗಾಗಿ ನಾವು ಜೆರುಸಲೇಮ್ ನಗರದಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದೇಶದಲ್ಲಿ ಬಂದಾಗ, ‘ನಾವು ಬನ್ನಿ, ಕಸ್ದೀಯರ ದಂಡಿಗೂ, ಅರಾಮಿನ ದಂಡಿಗೂ ತಪ್ಪಿಸಿಕೊಂಡು, ಯೆರೂಸಲೇಮಿಗೆ ಹೋಗೋಣ,’ ಎಂದೆವು. ಹೀಗೆ ಯೆರೂಸಲೇಮಿನಲ್ಲಿಯೇ ಉಳಿದುಕೊಂಡಿದ್ದೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 35:11
8 ತಿಳಿವುಗಳ ಹೋಲಿಕೆ  

[ಆ ಕಾಲದಲ್ಲಿ ಜನರು ಹೀಗನ್ನುವರು - ] ಸುಮ್ಮನೆ ಕೂತಿರುವದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ; ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.


ಇದಲ್ಲದೆ ಹಾಳುಮಾಡುವ ಅಸಹ್ಯ ವಸ್ತುವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ಕಾಣುವಾಗ (ಇದನ್ನು ಓದುವವನು ತಿಳುಕೊಳ್ಳಲಿ) ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ.


ಆಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -


ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು