Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 35:13 - ಕನ್ನಡ ಸತ್ಯವೇದವು J.V. (BSI)

13 ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನೀನು ಹೋಗಿ ಯೆಹೂದ್ಯರಿಗೂ ಯೆರೂಸಲೇವಿುನ ನಿವಾಸಿಗಳಿಗೂ ಹೀಗೆ ಹೇಳು - [ಇದರಿಂದ] ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವದಿಲ್ಲವೋ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆ ಹೇಳು, ‘ಇದರಿಂದ ನೀವು ಬುದ್ಧಿತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೋ?’ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಇಸ್ರಯೇಲರ ದೇವರೂ ಸೇನಾಧೀಶ್ವರನೂ ಸರ್ವೇಶ್ವರನೂ ಆದ ನಾನು ಹೇಳುವುದು ಇದು: ನೀನು ಹೋಗಿ ಯೆಹೂದ್ಯರಿಗೂ ಜೆರುಸಲೇಮಿನ ನಿವಾಸಿಗಳಿಗೂ ಹೀಗೆಂದು ತಿಳಿಸು: ‘ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೆ?’ ಎನ್ನುತ್ತಾರೆ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳಿದನು: ಯೆರೆಮೀಯನೇ, ಹೋಗಿ ಈ ಸಂದೇಶವನ್ನು ಯೆಹೂದದ ಮತ್ತು ಜೆರುಸಲೇಮಿನ ಜನರಿಗೆ ತಿಳಿಸು. ನೀವು ಇದರಿಂದ ಒಂದು ಪಾಠವನ್ನು ಕಲಿಯಬೇಕು ಮತ್ತು ನನ್ನ ಸಂದೇಶವನ್ನು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಇಸ್ರಾಯೇಲರ ದೇವರೂ, ಸೇನಾಧೀಶ್ವರ ಯೆಹೋವ ದೇವರೂ ಆದ ನಾನು ಹೇಳುವುದು ಇದು: ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆಂದು ತಿಳಿಸು: ‘ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೇ?’ ಎಂದು ಯೆಹೋವ ದೇವರು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 35:13
12 ತಿಳಿವುಗಳ ಹೋಲಿಕೆ  

ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲೊಲ್ಲದೆ ನನಗೆ ಕಿವಿಗೊಡಲೇ ಇಲ್ಲ.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


ನೀವು ಮಾತಾಡುತ್ತಿರುವಾತನ ಮಾತನ್ನು ಕೇಳಲೊಲ್ಲೆವೆಂದು ಹೇಳಬಾರದು. ಭೂವಿುಯ ಮೇಲೆ ದೈವೋಕ್ತಿಗಳನ್ನಾಡಿದವನಿಗೆ ಕಿವಿಗೊಡ ಮನಸ್ಸಿಲ್ಲದೆ ಇದ್ದ ಇಸ್ರಾಯೇಲ್ಯರು ದಂಡನೆಗೆ ತಪ್ಪಿಸಿಕೊಳ್ಳದಿದ್ದರೆ ಪರಲೋಕದಿಂದ ಮಾತಾಡುವವನಿಗೆ ನಾವು ಕಿವಿಗೊಡ ಮನಸ್ಸಿಲ್ಲದೆ ತೊಲಗಿದರೆ ಹೇಗೆ ತಪ್ಪಿಸಿಕೊಂಡೇವು?


ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟುಹೋದದ್ದು ಏಕೆ? ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು?


ನಿಮ್ಮಲ್ಲಿ ಯಾರು ಈ ಮಾತಿಗೆ ಕಿವಿಗೊಡುವರು? ಯಾರು ಇನ್ನು ಮುಂದೆ ಆಲಿಸಿ ಕೇಳುವರು?


ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.


ನನ್ನ ಬೋಧನೆಯನ್ನು ಬೆಳ್ಳಿಗಿಂತಲೂ ಜ್ಞಾನೋಪದೇಶವನ್ನು ಅಪರಂಜಿಗಿಂತಲೂ ಉತ್ತಮವೆಂದು ಹೊಂದಿಕೊಳ್ಳಿರಿ.


ಆಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -


ಸಕಲ ಯೆಹೂದ್ಯರಿಗೂ ಸಮಸ್ತ ಯೆರೂಸಲೇವಿುನವರಿಗೂ ಸಾರಿದನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು