Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 35:15 - ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ - ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ ನಿಮ್ಮ ಪಿತೃಗಳಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಾ ಬಂದೆ. ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ಸುಖವಾಸಿಗಳಾಗಿರುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ. ಆದರೆ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳುಹಿಸುತ್ತಾ ಬಂದೆ. “ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ, ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ವಾಸಿಸುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ.” ಆದರೆ ನೀವು ಕೇಳಲಿಲ್ಲ. ಕಿವಿಗೊಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 35:15
31 ತಿಳಿವುಗಳ ಹೋಲಿಕೆ  

ಈಗ ನೀನು ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಈ ಮಾತನ್ನು ಹೇಳು - ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ನಿಮಗೆ ವಿರುದ್ಧವಾಗಿ ಯೋಚಿಸಿ ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ.


ಮೊದಲು ದಮಸ್ಕದವರಿಗೆ, ಆಮೇಲೆ ಯೆರೂಸಲೇವಿುನಲ್ಲಿಯೂ ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ - ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ನೀವು ಈ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಕೊಂಡರೆ ದಾವೀದನ ಸಿಂಹಾಸನಾರೂಢರಾದ ಅರಸರು ರಥಾಶ್ವಗಳನ್ನೇರಿದವರಾಗಿ ತಮ್ಮ ಸೇವಕರೊಡನೆಯೂ ಪ್ರಜೆಗಳೊಡನೆಯೂ ಈ ಅರಮನೆಯ ಬಾಗಿಲುಗಳಲ್ಲಿ ಪ್ರವೇಶಿಸುವರು.


ಹೀಗಿರಲು ಈ ಮಾತನ್ನು ತಾತ್ಸಾರ ಮಾಡುವವನು ಮನುಷ್ಯನನ್ನು ತಿರಸ್ಕರಿಸುವದು ಮಾತ್ರವಲ್ಲದೆ ಪವಿತ್ರಾತ್ಮವರವನ್ನು ನಿಮಗೆ ದಯಪಾಲಿಸುವ ದೇವರನ್ನೂ ತಿರಸ್ಕರಿಸುತ್ತಾನೆ.


ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನು ಅಲಕ್ಷ್ಯಮಾಡುವವನಾಗಿದ್ದಾನೆ; ನನ್ನನ್ನು ಅಲಕ್ಷ್ಯಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಅಲಕ್ಷ್ಯಮಾಡುವವನಾಗಿದ್ದಾನೆ ಅಂದನು.


ತನ್ನನ್ನು ನಿಮಗೆ ಮಾರಿಕೊಂಡು ಆರು ವರುಷ ನಿಮ್ಮ ದಾಸನಾಗಿದ್ದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರುಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಿರಿ ಎಂದು ವಿಧಿಸಿ ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ; ಆದರೆ ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.


ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡಿರಿ; ಹಾಗಾದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?


ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲೇ, ನೀನು ಹಿಂದಿರುಗುವಿಯಾದರೆ ನನ್ನ ಬಳಿಗೇ ಬರುವಿ; ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ ನೀನು ಇನ್ನು ದಿಕ್ಕಾಪಾಲಾಗಿರುವದಿಲ್ಲ;


ಇದೇ ಯೆಹೋವನ ನುಡಿ - ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ; ಒಂದು ಪಟ್ಟಣಕ್ಕೆ ಒಬ್ಬನಂತೆಯೂ ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರತರುವೆನು.


ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾತಿಗೆ ವಿಧೇಯರಾಗಿರ್ರಿ, ಆತನನ್ನು ಹೊಂದಿಕೊಂಡೇ ಇರ್ರಿ. ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವದಕ್ಕೂ ಬಹುಕಾಲ ಇರುವದಕ್ಕೂ ಆತನೇ ಆಧಾರ.


ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.


ಸುತ್ತಲಿರುವ ಜನಾಂಗಗಳು ಸೇವಿಸುವ ದೇವರುಗಳನ್ನು ನೀವು ಆರಾಧಿಸಬಾರದು.


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಕೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು.


ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಹಟದಂತೆ ನಡೆದು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು.


ಇವರು ನನ್ನ ಆಲೋಚನಾಸಭೆಯಲ್ಲಿ ನಿಂತಿದ್ದರೆ ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ ಅವರನ್ನು ಅವರ ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು.


ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಸಾವಕಾಶಮಾಡದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಕೇಳಲೊಲ್ಲದ ನಿಮ್ಮ ಬಳಿಗೆ ನಾನು ಸಾವಕಾಶವಿಲ್ಲದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ -


ಅವರು ನನ್ನ ಮಾತುಗಳನ್ನು ಕೇಳಲಿಲ್ಲವಲ್ಲಾ; ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಅವರ ಬಳಿಗೆ ಸಾವಕಾಶಮಾಡದೆ ಕಳುಹಿಸಿ ಹೇಳಿಸುತ್ತಾ ಬಂದರೂ ಅವರು ಕೇಳಲೊಲ್ಲದೆ ಹೋದರು. ಇದು ಯೆಹೋವನ ನುಡಿ.


ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲೊಲ್ಲದೆ ನನಗೆ ಕಿವಿಗೊಡಲೇ ಇಲ್ಲ.


ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಿಂದಿರುಗಿದರೆ ಅವರ ಪಾಪಾಪರಾಧಗಳನ್ನು ಕ್ಷವಿುಸಿಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು