ಯೆರೆಮೀಯ 35:17 - ಕನ್ನಡ ಸತ್ಯವೇದವು J.V. (BSI)17 ಇಗೋ, ನಾನು ಯೆಹೂದ್ಯರಿಗೂ ಯೆರೂಸಲೇವಿುನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾವಿುಯೂ ಇಸ್ರಾಯೇಲ್ಯರ ದೇವರೂ ಆದ ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇಗೋ, ನಾನು ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾಮಿಯೂ, ಇಸ್ರಾಯೇಲರ ದೇವರೂ ಆದ ಯೆಹೋವನು ಅನ್ನುತ್ತಾನೆ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆದ್ದರಿಂದ ಸೇನಾಧೀಶ್ವರ ಸರ್ವೇಶ್ವರನೂ ಇಸ್ರಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ಯೆಹೂದ್ಯರಿಗೂ ಜೆರುಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ’.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: ‘ಯೆಹೂದ ಮತ್ತು ಜೆರುಸಲೇಮಿಗೆ ಅನೇಕ ಕೇಡುಗಳು ಸಂಭವಿಸುವವೆಂದು ನಾನು ಹೇಳಿರುವೆನು. ಆ ಎಲ್ಲಾ ಕೇಡುಗಳು ಬೇಗನೆ ಸಂಭವಿಸುವಂತೆ ನಾನು ಮಾಡುವೆನು. ನಾನು ಆ ಜನರೊಂದಿಗೆ ಮಾತನಾಡಿದೆ, ಆದರೆ ಅವರು ಕಿವಿಗೆ ಹಾಕಿಕೊಳ್ಳಲಿಲ್ಲ. ನಾನು ಅವರನ್ನು ಕೂಗಿದೆ, ಆದರೆ ಅವರು ನನಗೆ ಓಗೊಡಲಿಲ್ಲ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರೂ, ಇಸ್ರಾಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ‘ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ, ಅವರು ಕೇಳಲಿಲ್ಲ; ಕೂಗಿದರೂ ಉತ್ತರ ಕೊಡಲಿಲ್ಲ.’ ” ಅಧ್ಯಾಯವನ್ನು ನೋಡಿ |