ಯೆರೆಮೀಯ 35:8 - ಕನ್ನಡ ಸತ್ಯವೇದವು J.V. (BSI)8 ನಮ್ಮ ಪಿತೃವಾದ ರೇಕಾಬನ ಮಗನಾಗಿರುವ ಯೋನಾದಾಬನು ನಮಗೆ ಕೊಟ್ಟ ಈ ಅಪ್ಪಣೆಯನ್ನು ಎಲ್ಲಾ ವಿಷಯದಲ್ಲಿಯೂ ಕೈಕೊಳ್ಳುತ್ತಿದ್ದೇವೆ; ನಾವಾಗಲಿ ನಮ್ಮ ಹೆಂಡರಾಗಲಿ ಗಂಡು ಹೆಣ್ಣು ಮಕ್ಕಳಾಗಲಿ ಜೀವಮಾನದಲ್ಲೆಲ್ಲಾ ದ್ರಾಕ್ಷಾರಸವನ್ನು ಕುಡಿಯುವದಿಲ್ಲ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಮ್ಮ ಪಿತೃವಾದ ರೇಕಾಬನ ಮಗನಾಗಿರುವ ಯೋನಾದಾಬನು ನಮಗೆ ಕೊಟ್ಟ ಈ ಅಪ್ಪಣೆಯನ್ನು, ಎಲ್ಲಾ ವಿಷಯದಲ್ಲಿಯೂ ಕೈಗೊಳ್ಳುತ್ತಿದ್ದೇವೆ; ನಾವಾಗಲಿ, ನಮ್ಮ ಹೆಂಡತಿಯರಾಗಲಿ, ಗಂಡು ಹೆಣ್ಣುಮಕ್ಕಳಾಗಲಿ ಜೀವಮಾನದಲ್ಲೆಲ್ಲಾ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ ಕೊಟ್ಟ ಈ ಅಪ್ಪಣೆಯನ್ನು ಎಲ್ಲ ವಿಷಯದಲ್ಲೂ ಕೈಗೊಂಡು ಬರುತ್ತಿದ್ದೇವೆ. ನಾವಾಗಲಿ, ನಮ್ಮ ಮಡದಿ ಮಕ್ಕಳಾಗಲಿ, ಜೀವಮಾನದಲ್ಲೆಲ್ಲಾ ‘ದ್ರಾಕ್ಷಾರಸ ಕುಡಿಯುವುದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದ್ದರಿಂದ ರೇಕಾಬ್ಯರಾದ ನಾವು ನಮ್ಮ ಪೂರ್ವಿಕನಾದ ಯೋನಾದಾಬನು ಕೊಟ್ಟ ಆಜ್ಞೆಯನ್ನು ಸಂಪೂರ್ಣವಾಗಿ ಪಾಲಿಸಿದ್ದೇವೆ. ನಾವು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಮ್ಮ ಹೆಂಡತಿಯರು ಮತ್ತು ಮಕ್ಕಳು ಸಹ ಎಂದೂ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಈ ಪ್ರಕಾರ ನಾವು ನಮ್ಮ ಪೂರ್ವಜನಾದ ರೇಕಾಬನ ಮಗ ಯೆಹೋನಾದಾಬನ ಮಾತನ್ನು, ಅವನು ನಮಗೆ ಆಜ್ಞಾಪಿಸಿದ್ದೆಲ್ಲದರಲ್ಲಿ ನಾವೂ, ನಮ್ಮ ಹೆಂಡತಿಯರೂ, ನಮ್ಮ ಪುತ್ರರೂ, ನಮ್ಮ ಪುತ್ರಿಯರೂ ನಮ್ಮ ದಿವಸಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ, ಅಧ್ಯಾಯವನ್ನು ನೋಡಿ |