ಯೆರೆಮೀಯ 36:16 - ಕನ್ನಡ ಸತ್ಯವೇದವು J.V. (BSI)16 ಅವರು ಆ ಮಾತುಗಳನ್ನೆಲ್ಲಾ ಕೇಳಿ ಬೆಬ್ಬರಬಿದ್ದು ಒಬ್ಬರನ್ನೊಬ್ಬರು ನೋಡುತ್ತಾ, ನಾವು ಈ ಮಾತುಗಳನ್ನೆಲ್ಲಾ ಅರಸನಿಗೆ ತಿಳಿಸಲೇ ಬೇಕು ಎಂದು ಬಾರೂಕನಿಗೆ ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವರು ಆ ಮಾತುಗಳನ್ನೆಲ್ಲಾ ಕೇಳಿ ಬೆಚ್ಚಿಬಿದ್ದು ಒಬ್ಬರನ್ನೊಬ್ಬರು ನೋಡುತ್ತಾ, “ನಾವು ಈ ಮಾತುಗಳನ್ನೆಲ್ಲಾ ಅರಸನಿಗೆ ತಿಳಿಸಲೇಬೇಕು” ಎಂದು ಬಾರೂಕನಿಗೆ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆ ಎಲ್ಲ ಮಾತುಗಳನ್ನು ಅವರು ಕೇಳಿ ತಳಮಳಗೊಂಡು ಒಬ್ಬರನ್ನೊಬ್ಬರು ನೋಡಿದರು. “ನಾವು ಈ ಮಾತುಗಳನ್ನೆಲ್ಲ ಅರಸನಿಗೆ ತಿಳಿಸಲೇಬೇಕು” ಎಂದು ಬಾರೂಕನಿಗೆ ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆ ರಾಜ್ಯಾಧಿಕಾರಿಗಳು ಆ ಸುರುಳಿಯಲ್ಲಿ ಬರೆದ ಎಲ್ಲಾ ಸಂದೇಶಗಳನ್ನು ಕೇಳಿ ಭಯಪಟ್ಟು ಒಬ್ಬರ ಮುಖವನ್ನೊಬ್ಬರು ನೋಡಿದರು. ಅವರು ಬಾರೂಕನಿಗೆ, “ನಾವು ರಾಜನಾದ ಯೆಹೋಯಾಕೀಮನಿಗೆ ಈ ಸುರುಳಿಯಲ್ಲಿರುವ ಸಂದೇಶಗಳ ಬಗ್ಗೆ ತಿಳಿಸಬೇಕು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು, “ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇವೆ,” ಎಂದು ಬಾರೂಕನಿಗೆ ಹೇಳಿದರು. ಅಧ್ಯಾಯವನ್ನು ನೋಡಿ |