Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:2 - ಕನ್ನಡ ಸತ್ಯವೇದವು J.V. (BSI)

2 ನೀನು ಗ್ರಂಥ ಬರೆಯತಕ್ಕ ಸುರಳಿಯನ್ನು ತೆಗೆದುಕೊಂಡು ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತಾಡಿದಂದಿನಿಂದ ಇಂದಿನವರೆಗೆ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು, ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಗ್ರಂಥ ಬರೆಯತಕ್ಕ ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತನಾಡಿದ ದಿನದಿಂದ ಇಂದಿನವರೆಗೂ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀನು ಗ್ರಂಥ ಬರೆಯುವ ಒಂದು ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತಾಡಿದಂದಿನಿಂದ ಇಂದಿನವರೆಗೆ ಇಸ್ರಯೇಲ್, ಯೆಹೂದ ಹಾಗೂ ಸಕಲ ರಾಷ್ಟ್ರಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯೆರೆಮೀಯನೇ, ಒಂದು ಸುರಳಿಯನ್ನು ತೆಗೆದುಕೊಂಡು ನಾನು ನಿನಗೆ ಹೇಳಿದ ಎಲ್ಲಾ ಸಂದೇಶಗಳನ್ನು ಅದರಲ್ಲಿ ಬರೆದಿಡು. ನಾನು ನಿನಗೆ ಇಸ್ರೇಲ್ ಮತ್ತು ಯೆಹೂದ ಜನಾಂಗಗಳ ಬಗ್ಗೆಯೂ ಮತ್ತು ಉಳಿದ ಜನಾಂಗಗಳ ಬಗ್ಗೆಯೂ ಹೇಳಿದ್ದೇನೆ. ಯೋಷೀಯನ ಆಳ್ವಿಕೆಯ ಕಾಲದಿಂದ ಇಲ್ಲಿಯವರೆಗೂ ನಾನು ನಿನಗೆ ಹೇಳಿದ ಪ್ರತಿಯೊಂದು ಶಬ್ಧವನ್ನೂ ಬರೆದಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಗ್ರಂಥದ ಸುರುಳಿಯನ್ನು ತೆಗೆದುಕೊಂಡು ನಾನು ಇಸ್ರಾಯೇಲ್, ಯೆಹೂದ ಮತ್ತು ಸಕಲ ಜನಾಂಗಗಳ ವಿರೋಧವಾಗಿಯೂ ನಿನ್ನ ಸಂಗಡ ಮಾತನಾಡಿದ ದಿನದಿಂದ, ಯೋಷೀಯನ ದಿವಸಗಳು ಮೊದಲುಗೊಂಡು ಈ ದಿವಸದವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:2
34 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲಾ ಗ್ರಂಥವಾಗಿ ಬರೆ.


ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳಿಕೆಯ ಹದಿಮೂರನೆಯ ವರುಷದಿಂದ ಈ ದಿನದವರೆಗೆ, ಇಪ್ಪತ್ತುಮೂರು ವರುಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸುತ್ತಿದ್ದಾನೆ; ಅದನ್ನು ನಿಮಗೆ ಸಾವಕಾಶಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.


ಕಿತ್ತುಹಾಕುವದು, ಕೆಡವುವದು, ನಾಶಪಡಿಸುವದು, ಹಾಳುಮಾಡುವದು, ಕಟ್ಟುವದು, ನೆಡುವದು, ಈ ಕಾರ್ಯಗಳನ್ನು ಮಾಡುವದಕ್ಕೋಸ್ಕರ ಜನಾಂಗಗಳ ಮೇಲೂ ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇವಿುಸಿದ್ದೇನೆ ಅಂದನು.


ಆಗ ಯೆಹೋವನು ಮೋಶೆಗೆ - ಭೂವಿುಯ ಮೇಲೆ ಅಮಾಲೇಕ್ಯರ ಹೆಸರೇ ಇಲ್ಲದಂತೆ ಮಾಡುವೆನು; ಈ ಮಾತನ್ನು ಜ್ಞಾಪಕಾರ್ಥವಾಗಿ ಪುಸ್ತಕದಲ್ಲಿ ಬರೆ, ಮತ್ತು ಯೆಹೋಶುವನಿಗೆ ಮಂದಟ್ಟು ಮಾಡಿಕೊಡು ಎಂದು ಹೇಳಿದನು.


ಆಹಾ, ನಾನು ನೋಡಲಾಗಿ ಒಂದು ಕೈ ನನ್ನ ಕಡೆಗೆ ಚಾಚಿತ್ತು, ಇಗೋ ಅದರಲ್ಲಿ ಗ್ರಂಥದ ಸುರಳಿಯು ಕಾಣಿಸಿತು:


ಯೆರೆಮೀಯನು ಬಾಬೆಲಿಗೆ ಸಂಭವಿಸತಕ್ಕ ಎಲ್ಲಾ ಕೇಡಿನ ವಿಷಯವನ್ನು (ಅಂದರೆ ಬಾಬೆಲಿನ ಸಂಬಂಧವಾಗಿ ಹಿಂದೆ ಲಿಖಿತವಾದ ಎಲ್ಲಾ ಸಂಗತಿಗಳನ್ನು) ಒಂದು ಗ್ರಂಥವನ್ನಾಗಿ ಬರೆದು


ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಚೂರಿಯಿಂದ ಕತ್ತರಿಸಿ ಸುರಳಿಯು ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.


ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ [ಯೆರೂಸಲೇವಿುನ] ಜನರಿಗೂ ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು.


ಆಮೇಲೆ ಯೆಹೋವನು ನನಗೆ - ದೊಡ್ಡ ಹಲಿಗೆಯನ್ನು ತೆಗೆದುಕೊಂಡು ಸಾಧಾರಣ ಲಿಪಿಯಿಂದಲೇ ವಿಷಯಸೂಚಕವಾದ ಈ ಪದವನ್ನು ಬರೆ - ಮಹೇರ್ ಶಾಲಾಲ್ ಹಾಷ್ ಬಜ್ [ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ];


ಆಗ ನಾನು - ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರಳಿಯಲ್ಲಿ ಬರೆದದೆ.


ಹುಡುಕಿ ನೋಡಿದಾಗ ಮೇದ್ಯ ಸಂಸ್ಥಾನದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಒಂದು ಸುರುಳಿ ಸಿಕ್ಕಿತು. ಅದರಲ್ಲಿ -


ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪವಾಗಿ ಅದಕ್ಕೆ ಬರೆಯಿಸಿಕೊಟ್ಟರೂ ಅವುಗಳು ತನಗೆ ಸಂಬಂಧಪಟ್ಟವುಗಳಲ್ಲವೆಂದು ಅದು ಭಾವಿಸುತ್ತದೆ.


ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ


ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು - ಯೆಹೋವನು ಇಂತೆನ್ನುತ್ತಾನೆ - ಬಾಬೆಲಿನ ಅರಸನು ಬಂದು ಈ ದೇಶವನ್ನು ಜನಪಶುಗಳಿಲ್ಲದಂತೆ ಹಾಳುಮಾಡುವದು ಖಂಡಿತ ಎಂದು ಈ ಸುರಳಿಯನ್ನು ಬರೆಯಿಸಿದ್ದೇಕೆ ಎಂಬದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ;


ಯಾಕೋಬನ ಮನೆತನವೇ, ಇಸ್ರಾಯೇಲ್ ವಂಶದ ಸಕಲ ಗೋತ್ರಗಳೇ, ಯೆಹೋವನ ವಾಕ್ಯವನ್ನು ಕೇಳಿರಿ;


ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವದಕ್ಕೆ ಮುಂಚೆ ನಿನ್ನನ್ನು ತಿಳಿದಿದ್ದೆನು; ನೀನು ಉದರದಿಂದ ಬರುವದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು; ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇವಿುಸಿದ್ದೇನೆ.


ಅಯ್ಯೋ, ನನ್ನ ಕಡೆಗೆ ಕಿವಿಗೊಡತಕ್ಕವನು ಇದ್ದರೆ ಎಷ್ಟೋ ಲೇಸು! ಇದೇ ನನ್ನ ಕೈಗುರುತು, ನೋಡಿರಿ, ಸರ್ವಶಕ್ತನು ನನಗೆ ಉತ್ತರಕೊಡಲಿ! ನನ್ನ ವಿರೋಧಿಯು ಬರೆದುಕೊಂಡ ಆಪಾದನಪತ್ರವು ನನಗೆ ಸಿಕ್ಕಿದರೆ ಎಷ್ಟೋ ಸಂತೋಷ!


ಮೋಶೆ ಈ ಧರ್ಮಶಾಸ್ತ್ರವನ್ನು ಗ್ರಂಥರೂಪವಾಗಿ ಬರೆದು ಪೂರೈಸಿದಾಗ


ಆಗ ನಾನು - ಇಗೋ, ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ. ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ ಎಂದು ಹೇಳಿದೆನು ಅನ್ನುತ್ತಾನೆ.


ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ - ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;


ಸಕಲ ಪ್ರಧಾನರು ಬಾರೂಕನಿಗೆ - ನೀನು ಜನರ ಮುಂದೆ ಓದಿದ ಸುರಳಿಯನ್ನು ಕೈಯಲ್ಲಿ ತೆಗೆದುಕೊಂಡು ಬಾ ಎಂದು ನೆಥನ್ಯನ ಮಗನೂ ಶೆಲೆಮ್ಯನ ಮೊಮ್ಮಗನೂ ಕೂಷಿಯ ಮರಿಮಗನೂ ಆದ ಯೆಹೂದಿಯ ಮೂಲಕ ಹೇಳಿಕಳುಹಿಸಿದರು. ಕೂಡಲೆ ನೇರೀಯನ ಮಗನಾದ ಬಾರೂಕನು ಸುರಳಿಯನ್ನು ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.


ಅವನು ಈ ಮಾತುಗಳನ್ನೆಲ್ಲಾ ತನ್ನ ಬಾಯಿಂದಲೇ ನನಗೆ ನುಡಿದನು, ನಾನು ಅವುಗಳನ್ನು ಮಶಿಯಿಂದ ಈ ಪುಸ್ತಕದಲ್ಲಿ ಬರೆದೆನು ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು