Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:32 - ಕನ್ನಡ ಸತ್ಯವೇದವು J.V. (BSI)

32 ಆಗ ಯೆರೆಮೀಯನು ಇನ್ನೊಂದು ಸುರಳಿಯನ್ನು ತೆಗೆದುಕೊಂಡು ನೇರೀಯನ ಮಗನಾಗಿರುವ ಲೇಖಕನಾದ ಬಾರೂಕನಿಗೆ ಕೊಡಲು ಅವನು ಅದರಲ್ಲಿ ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲಾ ಮಾತುಗಳನ್ನಲ್ಲದೆ ಇನ್ನು ಇಂಥಾ ಅನೇಕ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆಗ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾಗಿರುವ ಲೇಖಕನಾದ ಬಾರೂಕನಿಗೆ ಕೊಡಲು ಅವನು ಅದರಲ್ಲಿ ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲಾ ಮಾತುಗಳನ್ನಲ್ಲದೆ ಇನ್ನು ಇಂತಹ ಅನೇಕ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆಗ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾದ ಲೇಖಕ ಬಾರೂಕನಿಗೆ ಕೊಟ್ಟನು. ಅವನು ಅದರಲ್ಲಿ ಜುದೇಯದ ಅರಸ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲ ಮಾತುಗಳನ್ನು ಬರೆದನು. ಅದು ಮಾತ್ರವಲ್ಲ, ಅಂಥ ಅನೇಕ ಮಾತುಗಳನ್ನೂ ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅನಂತರ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾದ ಲಿಪಿಕಾರ ಬಾರೂಕನಿಗೆ ಕೊಟ್ಟನು. ರಾಜ ಯೆಹೋಯಾಕೀಮನು ಸುಟ್ಟುಹಾಕಿದ ಸುರುಳಿಯಲ್ಲಿದ್ದ ಸಂದೇಶವನ್ನೇ ಯೆರೆಮೀಯನು ಹೇಳಿದಂತೆಲ್ಲ ಬಾರೂಕನು ಸುರುಳಿಯ ಮೇಲೆ ಬರೆದನು. ಬೇರೆ ಹಲವು ಸಂದೇಶಗಳನ್ನು ಎರಡನೇ ಸುರುಳಿಯಲ್ಲಿ ಸೇರಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆಗ ಯೆರೆಮೀಯನು ಮತ್ತೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗ ಲೇಖಕನಾದ ಬಾರೂಕನಿಗೆ ಕೊಟ್ಟನು. ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಸುರುಳಿಯ ವಾಕ್ಯಗಳನ್ನೆಲ್ಲಾ ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು. ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:32
13 ತಿಳಿವುಗಳ ಹೋಲಿಕೆ  

ಆಗ ಯೆರೆಮೀಯನು ನೇರೀಯನ ಮಗನಾದ ಬಾರೂಕನನ್ನು ಕರೆಯಿಸಿ ಯೆಹೋವನ ಮಾತುಗಳನ್ನೆಲ್ಲಾ ನುಡಿಯಲು ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರಳಿಯಲ್ಲಿ ಬರೆದನು.


ಅವನು ಈ ಮಾತುಗಳನ್ನೆಲ್ಲಾ ತನ್ನ ಬಾಯಿಂದಲೇ ನನಗೆ ನುಡಿದನು, ನಾನು ಅವುಗಳನ್ನು ಮಶಿಯಿಂದ ಈ ಪುಸ್ತಕದಲ್ಲಿ ಬರೆದೆನು ಎಂದು ಉತ್ತರಕೊಟ್ಟನು.


ಈ ಪುಸ್ತಕದ ಪ್ರವಾದನಾವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನಂದರೆ - ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ತಂದುಹಾಕಿದರೆ ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ತಂದುಹಾಕುವನು.


ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ.


ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ಕಡೆಗೆ ಬೇರೆಮಾಡಿಕೊಂಡು ಆವಿಗೆಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.


ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಚೂರಿಯಿಂದ ಕತ್ತರಿಸಿ ಸುರಳಿಯು ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.


ನಾನು ನಿಮಗೆ ವಿರೋಧವಾಗಿ ಕೋಪದಿಂದ ನಡೆಯುವವನಾಗಿ ನಿಮ್ಮ ಪಾಪಗಳ ನಿಮತ್ತ ಏಳರಷ್ಟಾಗಿ ಶಿಕ್ಷಿಸುವೆನು.


ನಾನು ನಿಮಗೆ ವಿರೋಧವಾಗಿ ನಡೆಯುವೆನು; ನಿಮ್ಮ ಪಾಪಗಳ ನಿವಿುತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು.


ನೀವು ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿವಿುತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು.


ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆಹೋದರೆ ನಾನು ನಿಮ್ಮ ಪಾಪಗಳ ನಿವಿುತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು.


ಯೆಹೋವನು ಮೋಶೆಗೆ - ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಇನ್ನು ಎರಡು ಕಲ್ಲಿನ ಹಲಿಗೆಗಳನ್ನು ಸಿದ್ಧಪಡಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಿಗೆಗಳ ಮೇಲಿದ್ದ ವಾಕ್ಯಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು.


ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಿಗೆ ಹಾಸಿಗೆಯ ಮೇಲೆ ಸ್ವಪ್ನವಾಯಿತು, ಅವನ ಮನಸ್ಸಿನಲ್ಲಿ ಕನಸುಬಿತ್ತು; ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು