Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:5 - ಕನ್ನಡ ಸತ್ಯವೇದವು J.V. (BSI)

5 ಮತ್ತು ಯೆರೆಮೀಯನು ಬಾರೂಕನಿಗೆ - ಯೆಹೋವನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಯಾಗಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮತ್ತು ಯೆರೆಮೀಯನು ಬಾರೂಕನಿಗೆ, “ಯೆಹೋವನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಯಾಗಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬಳಿಕ ಯೆರೆಮೀಯನು ಬಾರೂಕನಿಗೆ, “ಸರ್ವೇಶ್ವರನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಮಾಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಯೆರೆಮೀಯನು ಬಾರೂಕನಿಗೆ ಹೀಗೆ ಹೇಳಿದನು: “ಯೆಹೋವನ ಆಲಯಕ್ಕೆ ನಾನು ಹೋಗಲಾರೆ. ಅಲ್ಲಿ ಹೋಗುವದಕ್ಕೆ ಅಪ್ಪಣೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಮೇಲೆ ಯೆರೆಮೀಯನು ಬಾರೂಕನಿಗೆ ಆಜ್ಞಾಪಿಸಿದ್ದೇನೆಂದರೆ, “ನಾನು ಇಲ್ಲಿ ಬಂಧಿಸಲಾಗಿದ್ದೇನೆ. ಯೆಹೋವ ದೇವರ ಆಲಯಕ್ಕೆ ಹೋಗಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:5
15 ತಿಳಿವುಗಳ ಹೋಲಿಕೆ  

ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಅವನಿಗೆ ಯೆಹೋವನು ಈ ಎರಡನೆಯ ವಾಕ್ಯವನ್ನು ಅನುಗ್ರಹಿಸಿದನು -


ಆ ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತ್ತು, ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.


ಅವರು ಕ್ರಿಸ್ತನ ಸೇವಕರೋ ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ಬುದ್ಧಿಸ್ವಾಧೀನವಿಲ್ಲದವನಾಗಿ ಮಾತಾಡುತ್ತೇನೆ. ಆತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಗಳೊಳಗೆ ಬಿದ್ದೆನು; ವಿುತಿಮೀರಿ ಪೆಟ್ಟುಗಳನ್ನು ತಿಂದೆನು, ಅನೇಕಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡೆನು.


ಬೇರೆ ಕೆಲವರು ಅಪಹಾಸ್ಯ ಕೊರಡೆಯ ಪೆಟ್ಟು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.


ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ಆ ಸತ್ಯಾರ್ಥದ ನಿವಿುತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ, ಅದರ ವಿಷಯದಲ್ಲಿ ಧೈರ್ಯವಾಗಿ ಮಾತಾಡುವ ಹಂಗಿನಲ್ಲಿದ್ದೇನೆ; ಹಾಗೆಯೇ ನಾನು ಮಾತಾಡಬೇಕೆಂದು ನನಗೋಸ್ಕರ ಬೇಡಿಕೊಳ್ಳಿರಿ.


ಹೀಗಿರುವದರಿಂದ ಅನ್ಯಜನರಾಗಿರುವ ನಿಮ್ಮ ನಿವಿುತ್ತ ಕ್ರಿಸ್ತ ಯೇಸುವಿನ ಸೆರೆಯವನಾದ ಪೌಲನೆಂಬ ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.


ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರಬೇಕೆಂದು ನಿನಗೆ ಮನಸ್ಸಿದ್ದರೆ ಬಾ; ನಿನ್ನನ್ನು ಕಟಾಕ್ಷಿಸುವೆನು; ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ಮನಸ್ಸಿಲ್ಲದೆ ಹೋದರೆ ನಿಂತುಬಿಡು; ಇಗೋ, ದೇಶವೆಲ್ಲಾ ನಿನ್ನ ಕಣ್ಣೆದುರಿಗಿದೆ; ನಿನಗೆ ಯಾವ ಕಡೆ ಹೋಗುವದು ಸರಿಯೋ ಒಳ್ಳೆದೋ ಆ ಕಡೆಗೆ ಹೋಗು ಎಂದು ಹೇಳಿದನು.


ಯೆರೂಸಲೇಮು ಶತ್ರುವಶವಾಗುವ ತನಕ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.


ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ದೊಸಕೊಂಡನು.


ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.


ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.


ಒಂದು ದಿವಸ ನಾನು ಮೆಹೇಟಬೇಲನ ಮೊಮ್ಮಗನೂ ದೆಲಾಯನ ಮಗನೂ ಆದ ಶೆಮಾಯನ ಮನೆಗೆ ಹೋದೆನು. ಅವನು ಅಲ್ಲಿ ಅಡಗಿಕೊಂಡಿದ್ದನು. ಅವನು ನನಗೆ - ನಿನ್ನನ್ನು ಕೊಲ್ಲುವದಕ್ಕೆ ಬರುತ್ತಾರೆ, ಈ ರಾತ್ರಿಯೇ ಬರುತ್ತಾರೆ. ಆದದರಿಂದ ನಾವಿಬ್ಬರೂ ದೇವಾಲಯಕ್ಕೆ ಹೋಗಿ ಪವಿತ್ರಸ್ಥಾನವನ್ನು ಪ್ರವೇಶಿಸಿ ಅದರ ಕದಗಳನ್ನು ಮುಚ್ಚಿಕೊಳ್ಳೋಣ ಬಾ ಎಂದು ಹೇಳಿದನು.


ನನ್ನ ಆಪ್ತರು ನನ್ನನ್ನು ಹೇಸಿ ಬಿಟ್ಟುಹೋಗುವಂತೆ ಮಾಡಿದ್ದೀ; ಕಟ್ಟಲ್ಪಟ್ಟಿದ್ದೇನೆ, ಬಿಡಿಸಿಕೊಳ್ಳಲಾರೆ.


ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆ ಕ್ರಯಪತ್ರಕ್ಕೆ ರುಜುಮಾಡಿದ ಸಾಕ್ಷಿಗಳ ಸಮಕ್ಷಮ ಕಾರಾಗೃಹದ ಅಂಗಳದಲ್ಲಿ ಕೂತಿದ್ದ ಎಲ್ಲಾ ಯೆಹೂದ್ಯರ ಎದುರಿನಲ್ಲಿ ಆ ಕ್ರಯಪತ್ರವನ್ನು ಮಹ್ಸೇಮನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು