Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:7 - ಕನ್ನಡ ಸತ್ಯವೇದವು J.V. (BSI)

7 ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪರೋಷಗಳು ಅಪಾರವಾಗಿವೆ ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರು ಒಂದು ವೇಳೆ ಸರ್ವೇಶ್ವರನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಏಕೆಂದರೆ, ಸರ್ವೇಶ್ವರ ಆ ಜನರ ವಿರುದ್ಧ ತೋರಿಸಬೇಕೆಂದಿರುವ ಕೋಪಾಕ್ರೋಶ ಭಯಾನಕವಾಗಿದೆ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬಹುಶಃ ಆ ಜನರು ತಮಗೆ ಸಹಾಯಮಾಡೆಂದು ಯೆಹೋವನನ್ನು ಪ್ರಾರ್ಥಿಸಬಹುದು. ಆಗ ಪ್ರತಿಯೊಬ್ಬನೂ ದುಷ್ಕೃತ್ಯ ಮಾಡುವದನ್ನು ನಿಲ್ಲಿಸಬಹುದು. ಆ ಜನರ ಮೇಲೆ ತನಗೆ ಬಹಳ ಕೋಪಬಂದಿದೆ ಎಂದು ಯೆಹೋವನು ಪ್ರಕಟಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಒಂದು ವೇಳೆ ಅವರ ವಿಜ್ಞಾಪನೆ ಯೆಹೋವ ದೇವರ ಮುಂದೆ ಬಂದೀತು. ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು. ಏಕೆಂದರೆ ಯೆಹೋವ ದೇವರು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ, ಉರಿಯೂ ಅಪಾರವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:7
36 ತಿಳಿವುಗಳ ಹೋಲಿಕೆ  

ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಿಂದಿರುಗಿದರೆ ಅವರ ಪಾಪಾಪರಾಧಗಳನ್ನು ಕ್ಷವಿುಸಿಬಿಡುವೆನು.


ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗಿರುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೇ ನನ್ನನ್ನು ಆಶ್ರಯಿಸುವರು.


ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.


ನಾನೇ ಕೋಪರೋಷ ಮಹಾಕ್ರೋಧಭರಿತನಾಗಿ ಶಿಕ್ಷಾಹಸ್ತದಿಂದಲೂ ಭುಜಪರಾಕ್ರಮದಿಂದಲೂ ನಿಮಗೆ ವಿರುದ್ಧವಾಗಿ ಯುದ್ಧಮಾಡುವೆನು.


ಯೆಹೂದದವರೇ, ಯೆರೂಸಲೇವಿುನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ ಯೆಹೋವನಿಗಾಗಿ ಸುನ್ನತಿಯಾಗಿರಿ; ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವದು.


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಸುಟ್ಟು ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿ ಆರಿ ಹೋಗುವದೇ ಇಲ್ಲ ಅನ್ನುತ್ತಾನೆ.


ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥವಾಕ್ಯಗಳಿಗೆ ಕಿವಿಗೊಡದೆಯೂ ಅವುಗಳನ್ನು ಕೈಕೊಳ್ಳದೆಯೂ ಹೋದದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದದರಿಂದ ನೀವು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥವಾಕ್ಯಗಳ ವಿಷಯವಾಗಿ ವಿಚಾರಿಸಿರಿ ಎಂದು ಆಜ್ಞಾಪಿಸಿದನು.


ನಿಮ್ಮ ಪಿತೃಗಳಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುರ್ಮಾರ್ಗ ದುಷ್ಕೃತ್ಯಗಳಿಂದ ಹಿಂದಿರುಗಿರಿ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ; ಇದು ಯೆಹೋವನ ನುಡಿ.


ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರು ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗವನ್ನೂ ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದುಬಿಡಲಿ.


ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.


ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಕೂಡಿಸಿ ಊದಿ ಉರಿಹತ್ತಿಸಿ ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪದಲ್ಲಿ ಕೂಡಿಸಿ ಇಟ್ಟುಬಿಟ್ಟು ಕರಗಿಸುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮ ಮೇಲೆ ದೊರೆತನ ಮಾಡುವೆನು;


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವದು, [ನನ್ನ] ರೋಷದಿಂದ ಆನೆಕಲ್ಲುಗಳು ಸುರಿಯುವವು;


ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸೆನು, ಉಳಿಸೆನು; ಅವರು ಕೂಗಿಕೊಳ್ಳುವ ಮಹಾಶಬ್ದವು ನನ್ನ ಕಿವಿಗೆ ಬಿದ್ದರೂ ಲಾಲಿಸೆನು.


ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಯೆಹೋವನಾದ ನಾನೇ ಎಂಬದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವದು.


ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗಾದರೆ ಅವರ ದುಷ್ಕೃತ್ಯಗಳ ನಿವಿುತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.


ಆತನು ನಿಮಗೆ ಹೇಳಿಕಳುಹಿಸಿದ ಮಾತೇನಂದರೆ - ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ, ನಿಮಗೆ ಶಾಶ್ವತ ಸ್ವಾಸ್ತ್ಯವಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ನಿಮ್ಮ ಪಿತೃಗಳಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ;


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ಈ ಪಟ್ಟಣದವರೂ ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು ಎಂದು ಸಮಸ್ತ ಜನರಿಗೆ ಸಾರಿದನು.


ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು - ಈ ಮಹಾ ವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪವೇನು ಎಂದು ಕೇಳುವಾಗ


ಅಲ್ಲದೆ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಆಳಿಕೆಯ ಹನ್ನೊಂದನೆಯ ವರುಷದ ಐದನೆಯ ತಿಂಗಳಿನಲ್ಲಿ ಯೆರೂಸಲೇವಿುನವರು ಸೆರೆಹೋಗುವ ತನಕ ಯೆಹೋವನ ವಾಕ್ಯವು ಒದಗುತ್ತಿತ್ತು.


ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದದರಿಂದ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದದರಿಂದ ನೀವು ನನಗೋಸ್ಕರವೂ ಇಸ್ರಾಯೇಲ್ಯರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ವಿಷಯವಾಗಿ ವಿಚಾರಿಸಿರಿ ಎಂದು ಆಜ್ಞಾಪಿಸಿದನು.


ಆಗ ನಾನು ಅವರ ಮೇಲೆ ಬಲುಸಿಟ್ಟಾಗಿ ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು; ಆದದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು - ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆಹೋದದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿದವಲ್ಲಾ ಅಂದುಕೊಳ್ಳುವರು.


ಯೆಹೋವನು ಮೋಶೆಗೆ - ನೀನು ಪಿತೃಗಳಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಎನ್ನೊಡೆಯನೇ, ಅರಸನೇ, ಈಗ ದಯಮಾಡಿ ಲಾಲಿಸು; ಲೇಖಕನಾದ ಯೆಹೋನಾಥಾನನ ಮನೆಗೆ ನನ್ನನ್ನು ತಿರಿಗಿ ಸೇರಿಸಬೇಡ, ಅಲ್ಲೇ ಸತ್ತೇನು, ನನ್ನ ಬಿನ್ನಹವು ನಿನಗೆ ಮುಟ್ಟಲಿ ಎಂದು ಅರಿಕೆಮಾಡಿದನು.


ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದು ಅವನಿಗೆ - ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು;


ನರಪುತ್ರನೇ, ವಲಸೆಹೋಗುವದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೆ ಹೊರಡು, ಅಂದರೆ ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು; ಅವರು ದ್ರೋಹಿವಂಶದವರಾಗಿದ್ದರೂ ಒಂದು ವೇಳೆ ಮನಸ್ಸಿಗೆ ತಂದಾರು.


ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳುಪ್ರದೇಶಗಳನ್ನೂ ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೆಂತಲ್ಲ, ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆಮಾಡುತ್ತಿದ್ದೇವೆ.


ಯೆಹೋವನು ಇಂತೆನ್ನುತ್ತಾನೆ - ಈಗಲಾದರೋ ನೀವು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗಿಕೊಂಡು ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ;


ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು ನಿಮ್ಮ ದೇವರಾದ ಯೆಹೋವನ ಕಡೆಗೆ ತಿರಿಗಿಕೊಳ್ಳಿರಿ; ಆತನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳವನಾಗಿ ಮಾಡಬೇಕೆಂದಿದ್ದ ಕೇಡಿಗೆ ಮನಮರುಗುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು