Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:8 - ಕನ್ನಡ ಸತ್ಯವೇದವು J.V. (BSI)

8 ನೇರೀಯನ ಮಗನಾದ ಬಾರೂಕನು ಸುರಳಿಯಲ್ಲಿನ ಯೆಹೋವನ ಮಾತುಗಳನ್ನು ಯೆಹೋವನ ಆಲಯದೊಳಗೆ ಓದಿ ಪ್ರವಾದಿಯಾದ ಯೆರೆಮೀಯನು ವಿಧಿಸಿದಂತೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೇರೀಯನ ಮಗನಾದ ಬಾರೂಕನು ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಯೆಹೋವನ ಆಲಯದೊಳಗೆ ಓದಿ ಪ್ರವಾದಿಯಾದ ಯೆರೆಮೀಯನು ಆಜ್ಞಾಪಿಸಿದಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪ್ರವಾದಿ ಯೆರೆಮೀಯನು ವಿಧಿಸಿದಂತೆಯೇ ನೇರೀಯನ ಮಗ ಬಾರೂಕನು ಸುರುಳಿಯಲ್ಲಿದ್ದ ಸರ್ವೇಶ್ವರನ ವಾಕ್ಯಗಳನ್ನು ಸರ್ವೇಶ್ವರನ ಆಲಯದೊಳಗೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪ್ರವಾದಿಯಾದ ಯೆರೆಮೀಯನು ತನಗೆ ಮಾಡಲು ಹೇಳಿದಂತೆ ನೇರೀಯನ ಮಗನಾದ ಬಾರೂಕನು ಮಾಡಿದನು. ಬಾರೂಕನು ಸುರುಳಿಯ ಮೇಲೆ ಬರೆದ ಯೆಹೋವನ ಸಂದೇಶಗಳನ್ನು ಗಟ್ಟಿಯಾಗಿ ಯೆಹೋವನ ಆಲಯದಲ್ಲಿ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ನೇರೀಯನ ಮಗ ಬಾರೂಕನು ಪ್ರವಾದಿಯಾದ ಯೆರೆಮೀಯನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿ, ಸುರುಳಿಯಲ್ಲಿನ ಯೆಹೋವ ದೇವರ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:8
9 ತಿಳಿವುಗಳ ಹೋಲಿಕೆ  

ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಕಂಗೆಡಬೇಡ; ಕಂಗೆಟ್ಟರೆ ನಾನೂ ನಿನ್ನನ್ನು ಅವರ ಮುಂದೆ ಕಂಗೆಡಿಸುವೆನು.


ತಿಮೊಥೆಯನು ಬಂದರೆ ಅವನು ನಿಮ್ಮ ಬಳಿಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಕರ್ತನ ಕೆಲಸವನ್ನು ನಡಿಸುತ್ತಾನೆ;


ಮತ್ತು ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರಲಿ.


ಆಗ ಯೆರೆಮೀಯನು ನೇರೀಯನ ಮಗನಾದ ಬಾರೂಕನನ್ನು ಕರೆಯಿಸಿ ಯೆಹೋವನ ಮಾತುಗಳನ್ನೆಲ್ಲಾ ನುಡಿಯಲು ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರಳಿಯಲ್ಲಿ ಬರೆದನು.


ಆ ಧರ್ಮಶಾಸ್ತ್ರವನ್ನು ತಂದು ಪ್ರಾತಃಕಾಲದಿಂದ ಮಧ್ಯಾಹ್ನದವರೆಗೂ ಓದಿದನು. ನೀರುಬಾಗಲಿನ ಮುಂದಣ ಬೈಲಿನಲ್ಲಿ ಕೂಡಿಬಂದಿದ್ದ ಸ್ತ್ರೀಪುರುಷರಲ್ಲಿ ಗ್ರಹಿಸಶಕ್ತರಾದವರೆಲ್ಲರೂ ಧರ್ಮಶಾಸ್ತ್ರಪಾರಾಯಣವನ್ನು ಲಾಲಿಸುತ್ತಾ ಇದ್ದರು.


ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆ ಕ್ರಯಪತ್ರಕ್ಕೆ ರುಜುಮಾಡಿದ ಸಾಕ್ಷಿಗಳ ಸಮಕ್ಷಮ ಕಾರಾಗೃಹದ ಅಂಗಳದಲ್ಲಿ ಕೂತಿದ್ದ ಎಲ್ಲಾ ಯೆಹೂದ್ಯರ ಎದುರಿನಲ್ಲಿ ಆ ಕ್ರಯಪತ್ರವನ್ನು ಮಹ್ಸೇಮನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆನು.


ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ [ಯೆರೂಸಲೇವಿುನ] ಜನರಿಗೂ ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು