Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:13 - ಕನ್ನಡ ಸತ್ಯವೇದವು J.V. (BSI)

13 ಬೆನ್ಯಾಮೀನಿನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆಕೊಡುತ್ತಿದ್ದು ಪ್ರವಾದಿಯಾದ ಆ ಯೆರೆಮೀಯನನ್ನು ಹಿಡಿದು ನೀನು ಕಸ್ದೀಯರನ್ನು ಮರೆಹೊಗಲು ಹೋಗುತ್ತಿದ್ದೀ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನು ಬೆನ್ಯಾಮೀನಿನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆಯ ವಿಚಾರಕನಾಗಿದ್ದು ಪ್ರವಾದಿಯಾದ ಯೆರೆಮೀಯನನ್ನು ಹಿಡಿದು, “ನೀನು ಕಸ್ದೀಯರಲ್ಲಿ ಮೊರೆಹೋಗಲು ಹೋಗುತ್ತಿದ್ದಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬೆನ್ಯಾಮೀನನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆ ಕುಳಿತಿದ್ದನು. ಅವನು ಪ್ರವಾದಿ ಯೆರೆಮೀಯನನ್ನು, “ನೀನು ಬಾಬಿಲೋನಿಯರನ್ನು ಮರೆಹೋಗಲು ಹೋಗುತ್ತಿರುವೆ,” ಎಂದು ಹೇಳಿ ಅವನನ್ನು ಬಂಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಯೆರೆಮೀಯನು ಜೆರುಸಲೇಮಿನ ಬೆನ್ಯಾಮೀನ್ ಹೆಬ್ಬಾಗಿಲಿನ ಹತ್ತಿರ ಹೋದಾಗ ಪಹರೆದಾರರ ಮುಖ್ಯಸ್ಥನು ಅವನನ್ನು ಹಿಡಿದುಕೊಂಡನು. ಆ ಮುಖ್ಯಸ್ಥನ ಹೆಸರು ಇರೀಯ. ಇರೀಯನು ಶೆಲೆಮ್ಯನ ಮಗನು; ಶೆಲೆಮ್ಯನು ಹನನ್ಯನ ಮಗನು. ಮುಖ್ಯಸ್ಥನಾದ ಇರೀಯನು ಯೆರೆಮೀಯನನ್ನು ಹಿಡಿದುಕೊಂಡು, “ಯೆರೆಮೀಯನೇ, ನೀನು ಬಾಬಿಲೋನಿನ ಕಡೆ ಸೇರಿಕೊಳ್ಳುವದಕ್ಕಾಗಿ ನಮ್ಮನ್ನು ಬಿಟ್ಟುಹೋಗುತ್ತಿರುವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಅವನು ಬೆನ್ಯಾಮೀನನ ಬಾಗಿಲಲ್ಲಿ ಇರುವಾಗ, ಅಲ್ಲಿ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನಾದ ಇರೀಯನೆಂಬ ಪಹರೆಯ ನಾಯಕನು ಇದ್ದನು. ಇವನು ಪ್ರವಾದಿಯಾದ ಯೆರೆಮೀಯನನ್ನು, “ನೀನು ಕಸ್ದೀಯರ ಪಕ್ಷಕ್ಕೆ ಸೇರುತ್ತೀ,” ಎಂದು ಹೇಳಿ ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:13
20 ತಿಳಿವುಗಳ ಹೋಲಿಕೆ  

ಆಗ ದೇಶವು ಗೆಬದಿಂದ ಯೆರೂಸಲೇವಿುಗೆ ತೆಂಕಲಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷೆಯ ಆಲೆಗಳ ಪರಿಯಂತ ಇದ್ದ ಕಡೆಯೇ ಎತ್ತರದಲ್ಲಿ ನಿಂತಿರುವದು.


ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಕೂಷ್ಯನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ಕೇಳಿದಾಗ


ಇದಲ್ಲದೆ ಇವರು ಈಗ ನನ್ನ ಮೇಲೆ ಹೊರಿಸುವ ತಪ್ಪುಗಳನ್ನು ನಿಜವೆಂದು ನಿನಗೆ ತೋರಿಸಲಾರರು.


ಆಗ ಅವರು ಕೆಲವು ಮನುಷ್ಯರಿಗೆ - ಇವನು ಮೋಶೆಗೆ ವಿರೋಧವಾಗಿಯೂ ದೇವರಿಗೆ ವಿರೋಧವಾಗಿಯೂ ದೂಷಣೆಯ ಮಾತುಗಳನ್ನಾಡುವದನ್ನು ಕೇಳಿದೆವೆಂದು ಹೇಳಿರಿ ಎಂಬದಾಗಿ ಬೋಧಿಸಿ


ಇವನು ತಾನೇ ಕ್ರಿಸ್ತನೆಂಬ ಒಬ್ಬ ಅರಸನಾಗಿದ್ದೇನೆಂದು ಹೇಳುತ್ತಾ ಕೈಸರನಿಗೆ ತೆರಿಗೆಕೊಡಬಾರದೆಂದು ಬೋಧಿಸುತ್ತಾ ನಮ್ಮ ದೇಶದವರ ಮನಸ್ಸು ಕೆಡಿಸುವದನ್ನು ನಾವು ಕಂಡೆವು ಎಂಬದಾಗಿ ಆತನ ಮೇಲೆ ದೂರು ಹೇಳುವದಕ್ಕೆ ತೊಡಗಿದರು.


ಯೆರೆಮೀಯನು ಸಮಸ್ತ ಜನರಿಗೆ - ಯೆಹೋವನು ಇಂತೆನ್ನುತ್ತಾನೆ - ಪಟ್ಟಣದಲ್ಲಿ ನಿಲ್ಲುವವನು ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ದೀಯರನ್ನು ಮರೆಹೊಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗಿ ಬದುಕುವನು;


ಪಟ್ಟಣದಲ್ಲಿ ನಿಲ್ಲುವವನು ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವನು; ನಿಮ್ಮನ್ನು ಮುತ್ತುವ ಕಸ್ದೀಯರನ್ನು ಮರೆಹೊಗಲು ಪಟ್ಟಣವನ್ನು ಬಿಡುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.


ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು ಎಂದು ಬಹುಜನರು ಗುಸುಗುಟ್ಟುವದನ್ನು ಕೇಳಿದ್ದೇನೆ, ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತಸ್ನೇಹಿತರೆಲ್ಲರೂ ಇವನು ಎಡವಿಬೀಳಲಿ ಎಂದು ನನ್ನನ್ನು ಹೊಂಚಿನೋಡುತ್ತಾ - ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.


ಆಗ ಅವರು - ಯೆರೆಮೀಯನಿಗೆ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದಷ್ಟೆ. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ ಎಂದುಕೊಂಡರು.


ಮಾನ ಅವಮಾನ ಕೀರ್ತಿ ಅಪಕೀರ್ತಿಗಳನ್ನು ಹೊಂದಿದವರೂ ಆಗಿದ್ದೇವೆ.


ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ - ಆಮೋಸನು ಇಸ್ರಾಯೇಲ್ಯರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚುಮಾಡಿದ್ದಾನೆ; ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು;


ಆಮೇಲೆ ಆ ಪ್ರಧಾನರು ಅರಸನಿಗೆ - ಒಡೆಯಾ, ಇವನಿಗೆ ಮರಣದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ನುಡಿಯುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ ಎಂದು ಹೇಳಿದರು.


ಅರಮನೆಯಲ್ಲಿ ಲೇಖಕನ ಕೋಣೆಗೆ ಇಳಿದುಹೋದನು. ಅಲ್ಲಿ ಲೇಖಕನಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು, ಅಂತು ಪ್ರಧಾನರೆಲ್ಲರೂ ಕೂತುಕೊಂಡಿದ್ದರು.


ಏಕಂದರೆ ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾವು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಸೇವಿಸೇ ಸೇವಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ ಎಂದು ಹೇಳು.


ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೆ ಕೊಡಬಲ್ಲೆನು; ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶ ಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ.


ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.


ಶತ್ರುಗಳು ನಮ್ಮ ಹೆಜ್ಜೆಯನ್ನು ಗುರಿ ಮಾಡಿಕೊಂಡಿರುವದರಿಂದ ನಮ್ಮ ಬೀದಿಗಳಲ್ಲೇ ನಾವು ಸಂಚಾರಮಾಡದ ಹಾಗಾಯಿತು; ನಮಗೆ ಅಂತ್ಯವು ಸಮೀಪಿಸಿತು, ನಮ್ಮ ಕಾಲವು ತೀರಿತು, ಹೌದು, ನಮಗೆ ಅಂತ್ಯವು ಬಂದೇ ಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು